Featured
ಸಾಲಕ್ಕೆ ಹೆದರಿ ಕಾರಿಗೆ ಬೆಂಕಿ ಹಚ್ಚಿಕೊಂಡು ಮಾಜಿ ಕಾರ್ಪೋರೇಟರ್ ಸಜೀವ ದಹನ
ಸಾಲದ ಬವಣೆಯಿಂದ ಕಂಗೆಟ್ಟ ದಾವಣೆಗೆರೆಯ 43ನೇ ವಾರ್ಡ್‌ನ ಬಿಜೆಪಿ ಮಾಜಿ ಕಾರ್ಪೋರೇಟರ್ ಸಂಕೋಳ್ ಚಂದ್ರಶೇಖರ ಕಾರಿಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಅದರಲ್ಲೇ ಕುಳಿತುಕೊಂಡು ಸಜೀವ ದಹನವಾಗಿ ಹೋಗಿರುವ ದಾರುಣ ಘಟನೆ ನಡೆದಿದೆ. ಅವರ ಶವ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಕೋಳ್ ಚಂದ್ರಶೇಖರ ಅವರ ಈ ದಾರುಣ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಯಲ್ಲಿ ದ್ದಾರೆ, ಅವರ ಆರೋಗ್ಯ ಸ್ಥಿತಿ ಕೂಡ ಗಂಭೀರವಾಗಿದೆ.
ಚಿತ್ರದುರ್ಗದಲ್ಲಿ ಕಾರಿಗೆ ಲಾರಿ ಡಿಕ್ಕಿ: ಕೊಲ್ಲಾಪುರ ಡಿವೈಎಸ್ಪಿ ವೈಷ್ಣವಿ ತಾಯಿ, ಕಾರು ಚಾಲಕ ಸಾವು
ಪ್ರವಾಸ ಮುಗಿಸಿ ಮರಳುತ್ತಿದ್ದ ಕೊಲ್ಲಾಪುರ ಡಿವೈಎಸ್ಪಿ ವೈಷ್ಣವಿ ಹಾಗೂ ಕುಟಂಬಸ್ಥರ ಕಾರು ಚಿತ್ರದುರ್ಗದ ತಮಟಕಲ್ಲು ಗ್ರಾಮದ ಬ್ರಿಡ್ಜ್ ಬಳಿ ಲಾರಿಗೆ ಡಿಕ್ಕಿಯಾಗಿ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಪೊಲೀಸ್ ಅಧಿಕಾರಿ ವೈಷ್ಣವಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರೆ, ಅವರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ
ಭ್ರಷ್ಟಾಚಾರ ಅಂತ್ಯ, ಪಾರದರ್ಶಕತೆ ಹೆಚ್ಚಿಸಿದ ವಿಬಿ ಜಿ ರಾಮ್ ಜಿ ಯೋಜನೆ: ಸಂಸದ ಕೆ. ಸುಧಾಕರ್
ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್‌ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ. ಸುಧಾಕರ್ ಹೇಳಿದರು. ದೇವನಹಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ
ಕರಾವಳಿ ಜಿಲ್ಲೆಗಳಲ್ಲಿ ಸಿಆರ್‌ಝಡ್ ಕಾನೂನು ಸರಳೀಕರಣ: ಡಿಕೆ ಶಿವಕುಮಾರ್
“ಕೇರಳ ಹಾಗೂ ಗೋವಾ ಮಾದರಿಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿಆರ್ ಝಡ್ ) ಕಾನೂನು ಸರಳೀಕರಣ ಮಾಡಲಾಗುವುದು. ಇದರ ಬಗ್ಗೆ ಕೇಂದ್ರ ಪ್ರವಾಸೋದ್ಯಮ, ಪರಿಸರ ಸಚಿವರ ಬಳಿ ನಿಯೋಗ ತೆರಳಿ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಂಗಳೂರಿನಲ್ಲಿ ನಡೆದ
ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶ: ಮುಖ್ಯಮಂತ್ರಿ
ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನ ಹೋಟೆಲ್ ಅವತಾರ್ ನಲ್ಲಿ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ -2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೊರಗಿನವರಿಗೆ ಮಲಯಾಳಂ ಪರೀಕ್ಷೆ ಕಡ್ಡಾಯವಲ್ಲ: ಸಿಎಂ ಪತ್ರಕ್ಕೆ ಕೇರಳ ಸಿಎಂ ಸ್ಪಷ್ಟನೆ
ಬೆಂಗಳೂರು: ಹೊರರಾಜ್ಯ,ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ, 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ ಕಡ್ಡಾಯಗೊಳಿಸಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ಪಷ್ಟಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 9, 10ನೇ
ಎಚ್ಎಂಟಿಗೆ ಮೊದಲು ನ್ಯಾಯ ಕೊಡಿಸಲಿ: ಹೆಚ್.ಡಿ. ಕುಮಾರಸ್ವಾಮಿಗೆ ಡಿಕೆ ಸುರೇಶ್ ತಿರುಗೇಟು
ಬೆಂಗಳೂರು: “ಕುಮಾರಸ್ವಾಮಿ ಕೇವಲವಾಗಿ ಮಾತನಾಡುವುದನ್ನು ಬಿಟ್ಟು ರಾಜ್ಯದ ಹಿತ ಕಾಪಾಡಲಿ, ಎಚ್ಎಂಟಿಯವರಿಗೆ ನ್ಯಾಯ ಕೊಡಿಸಲಿ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಬಳ್ಳಾರಿ ಗಲಭೆ ವಿಚಾರದಿಂದ ಡಿ.ಕೆ.
ಕನ್ನಡದ ಖ್ಯಾತ ಲೇಖಕಿ ಆಶಾ ರಘು ಆತ್ಮಹತ್ಯೆ
ಬೆಂಗಳೂರು: ಪತಿಯ ಸಾವಿನಿಂದ ಮಾನಸಿಕವಾಗಿ ಅಘಾತಕ್ಕೊಳಗಾಗಿದ್ದ ಲೇಖಕಿ ಪ್ರಕಾಶಕಿ ಆಶಾ ರಘು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ಆಶಾ ರಘು ನೇಣಿಗೆ ಶರಣಾಗಿದ್ದಾರೆ. ಎರಡು ವರ್ಷಗಳ ಹಿಂದೆ ಅವರ ಪತಿ, ಆಹಾರ ತಜ್ಞ ಕೆ.ಸಿ ರಘು ಅವರು ಕ್ಯಾನ್ಸರ್‌ಗೆ
ವಿಬಿ ಜಿ ರಾಮ್ ಜಿ ಕರಾಳ ಕಾಯ್ದೆ ರದ್ದು ಮಾಡುವವರೆಗೆ ಹೋರಾಟ: ಸಚಿವ ಬೈರತಿ ಸುರೇಶ್
ಕೋಲಾರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನರೆಗಾ ಯೋಜನೆಯನ್ನು ಮಾರ್ಪಾಡು ಮಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆದು ಹಾಕಿ ಗ್ರಾಮೀಣ ಭಾಗದ ಕೋಟ್ಯಂತರ ಬಡವರ ಅನ್ನ ಕಿತ್ತುಕೊಳ್ಳಲು ಸಂಚು ರೂಪಿಸಿದೆ ಎಂದು ನಗರಾಭಿವೃದ್ಧಿ ಮತ್ತು ನಗರ
ಮನರೇಗಾ ಉಳಿಸಲು ಜ.26 ನಂತರ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ: ಡಿಕೆ ಶಿವಕುಮಾರ್
ಮಂಗಳೂರು: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ




