Featured
ನಿಷ್ಠಾವಂತ ರಾಜಕಾರಣಿ ಮೇಟಿಯವರು ನನಗೆ ಅತ್ಯಂತ ಆಪ್ತ: ಸಿದ್ದರಾಮಯ್ಯ
ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ನಿಧನರಾಗಿದ್ದಾರೆ. ನಾನು ಮೂರುದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದು, ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ ಎಂದರು. ಅತ್ಯಂತ ನಿಷ್ಠಾವಂತ ರಾಜಕಾರಣಿಯಾಗಿದ್ದು,
ಶೂನ್ಯ ಬಡ್ಡಿ ಆಮಿಷ: ಅಡಮಾನ ಚಿನ್ನದೊಂದಿಗೆ ಕಂಪೆನಿಯವರು ಪರಾರಿ
ಬೆಂಗಳೂರಿನಲ್ಲಿ ಶೂನ್ಯ ಬಡ್ಡಿ ಆಸೆ ತೋರಿಸಿ ಗ್ರಾಹಕರಿಗೆ ಚಿನ್ನ ಅಡಮಾನ ಸಾಲ ನೀಡಿದ ನಕಲಿ ಕಂಪನಿಯು ಅಡಮಾನವಿಟ್ಟಿದ್ದ ಚಿನ್ನದ ಸಮೇತ ನಾಪತ್ತೆಯಾಗಿದೆ. ಗ್ರಾಹಕರು ಅಡಮಾನ ಇಟ್ಟಿದ್ದ ಚಿನ್ನ, ಬೆಳ್ಳಿಯೊಂದಿಗೆ ನಕಲಿ ಕಂಪನಿಯವರು ಪರಾರಿಯಾಗಿದ್ದು, ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಇಬ್ಬರು
ಶಾಸಕ ಮೇಟಿ ನಿಧನ, ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಮುಂದೂಡಿಕೆ: ಡಿಕೆ ಶಿವಕುಮಾರ್
“ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಾದ ಹೆಚ್.ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಬುಧವಾರ ನಿಗದಿಯಾಗಿದ್ದ ‘ನೀರಿನ ಹೆಜ್ಜೆ’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ” ಎಂದು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ
ನ. 26ರ ನಂತರ ಡಿಕೆ ಶಿವಕುಮಾರ್ ಸಿಎಂ ಆಗೇ ಆಗ್ತಾರೆ: ವೆಂಕಟೇಶ ಗುರೂಜಿ ಭವಿಷ್ಯ
ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಈ ಸಂದರ್ಭದಲ್ಲಿ
ಪಾಕಿಸ್ತಾನ ಅಣ್ವಸ್ತ್ರ ಪರೀಕ್ಷೆ ನಡೆಸುವ ಮೊದಲಿಗನಾಗದು: ಟ್ರಂಪ್‌ಗೆ ಪ್ರತ್ಯುತ್ತರ
ಅಮೆರಿಕ 30 ವರ್ಷಗಳ ಬಳಿಕ ಪರಮಾಣು ಪರೀಕ್ಷೆ ನಡೆಸಲು ಮುಂದಾಗಿದ್ದು, ಈ ಸಂಬಂಧ ಆ ರಾಷ್ಟ್ರದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗೆ ಪಾಕಿಸ್ತಾನ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನ ಪರಮಾಣು ಪರೀಕ್ಷೆಗಳನ್ನು ನಡೆಸಿದ ಮೊದಲಿಗ ಅಲ್ಲ, ಪರಮಾಣು ಪರೀಕ್ಷೆಗಳನ್ನು ಪುನರಾರಂಭಿಸುವ ಮೊದಲಿಗ ಆಗುವುದಿಲ್ಲ
ಬಾಗಲಕೋಟೆ ಶಾಸಕ ಹೆಚ್.ವೈ.ಮೇಟಿ ನಿಧನ
ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ ಶಾಸಕ, ಮಾಜಿ ಸಂಸದ, ಮಾಜಿ ಸಚಿವರೂ ಆಗಿದ್ದ ಹೆಚ್.ವೈ.ಮೇಟಿ (79) ನಿಧನರಾದರು. ಹೆಚ್.ವೈ.ಮೇಟಿ ಅವರನ್ನು ಮೊನ್ನೆಯಷ್ಟೇ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಮೇಟಿಯವರು ತಿಮ್ಮಾಪುರದಲ್ಲಿ 1946 ಅಕ್ಟೋಬರ್
ಸ್ನೇಹಿತನೊಂದಿಗಿದ್ದ ಯುವತಿಯ ಎಳೆದೊಯ್ದು ಗ್ಯಾಂಗ್ ರೇಪ್
ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಾಯ್‌ಫ್ರೆಂಡ್ ಜೊತೆಗಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಕಾರಿನಲ್ಲಿ ಗೆಳೆಯನ ಜೊತೆ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಬಾಯ್‌ಫ್ರೆಂಡ್ ಮೇಲೆ ಹಲ್ಲೆ ಮಾಡಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದು ಡ್ಯಾನ್ಸರ್ ಸುಧೀಂದ್ರ ಸಾವು
ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ಕೆಟ್ಟು ನಿಂತಿದ್ದ ಕಾರನ್ನು ಪರಿಶೀಲಿಸುತ್ತಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದು ಡ್ಯಾನ್ಸರ್ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ಯಾಂಟರ್ ಚಾಲಕ ಸ್ಥಳದಲ್ಲೇ ವಾಹನ ನಿಲ್ಲಿಸಿ ಪರಾರಿಯಾಗಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಅಪಘಾತದ ಒಂದು ದಿನ
ರೇಣುಕಾಸ್ವಾಮಿ ಕೊಲೆ: ಸುಪ್ರೀಂ ಆದೇಶ ಮರುಪರಿಶೀಲನೆಗೆ ಪವಿತ್ರಾ ಗೌಡ ಅರ್ಜಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಪುನರ್ ಪರಿಶೀಲಿಸುವಂತೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದು, ಪವಿತ್ರ
ಟೆಕ್ ಶೃಂಗಸಭೆ: ಬೆಂಗಳೂರು ನಗರಕ್ಕೆ ಮತ್ತೊಂದು ಜಾಗತಿಕ ಮುಜುಗರ ಆಗದಿರಲಿ ಎಂದ ಆರ್. ಅಶೋಕ
ಸಚಿವ @PriyankKharge ಅವರು ಆರ್‌ಎಸ್‌ಎಸ್ ಬಗ್ಗೆ ಟೀಕಿಸುವ ಹೊರತಾಗಿಯೂ ತಮಗೆ ಒಂದು ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ. ಈಗಲಾದರೂ ಅವರು ಮುಖ್ಯಮಂತ್ರಿ @siddaramaiah ಮತ್ತು ಡಿಸಿಎಂ @DKShivakumar ಅವರಿಗೆ ಪತ್ರ ಬರೆದು, ಬೆಂಗಳೂರು ಟೆಕ್ ಸಮ್ಮಿಟ್ ಗೆ




