Featured
ರಾತ್ರಿ ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆ: ಜೀವವುಳಿಸಿದ ಡೆಲಿವರಿ ಬಾಯ್
ತಮಿಳುನಾಡಿನಲ್ಲಿ ರಾತ್ರಿ ಮಹಿಳೆಯೊಬ್ಬರು ಇಲಿ ಪಾಷಾಣ ಆರ್ಡರ್ ಮಾಡಿದ್ದು, ಡೆಲಿವರಿ ಬಾಯ್‌ಗೆ ಮಹಿಳೆ ಸಂಕಷ್ಟದಲ್ಲಿದ್ದಾಳೆಂದು ಅರಿವಾಗಿ ಸಮಯ ಪ್ರಜ್ಞೆಯಿಂದ ಆಕೆಯ ಜೀವವುಳಿಸಿದ್ದಾನೆ. ಬಳಿಕ ಆತ ವೀಡಿಯೊ ಮಡಿ ಈ ವಿಷಯ ಹಂಚಿಕೊಂಡಿದ್ದು, ಎಲ್ಲೆಡೆ ವೈರಲ್ ಆಗಿಆತನ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಡೆಲಿವರಿ ಬಾಯ್ ವೀಡಿಯೋದಲ್ಲಿ ಹೇಳಿರುವ ವಿಚಾರ ಇಷ್ಟು, ಮಹಿಳೆಯೊಬ್ಬರು ತಡ ರಾತ್ರಿ ಮೂರು ಪ್ಯಾಕೆಟ್ ಇಲಿ ವಿಷ ಆರ್ಡರ್ ಮಾಡಿದ್ದಾರೆ. ಆರ್ಡರ್‌ನಂತೆ ಇಲಿ ವಿಷ ಪ್ಯಾಕೆಟ್‌ಗಳನ್ನು ಹಿಡಿದು
ಶಿವಮೊಗ್ಗ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಕುಸಿದು ಸಾವು
ಶಿವಮೊಗ್ಗದ ಹಾಸ್ಟೆಲ್‌ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಶಿವಮೊಗ್ಗದ ವಾಜಪೇಯಿ ಬಡಾವಣೆಯ ಹಾಸ್ಟೆಲ್‌ನಲ್ಲಿ ಈ ದುರಂತ ನಡೆದಿದೆ. ಯುವಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್
ಮಹಿಳೆ ವಿವಸ್ತ್ರ ಪ್ರಕರಣದ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಸಿಎಂ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ, ಘಟನೆಯ ಕುರಿತು ಸಿಐಡಿ ತನಿಖೆ ಮಾಡಿ ಸರ್ಕಾರಕ್ಕೆ
ಮನರೇಗಾ ಬಗ್ಗೆ ಸಚಿವ ಪ್ರಹ್ಲಾದ್ ಜೋಷಿ ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ
“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸವಾಲೆಸೆದರು.
ಹಣಕ್ಕಾಗಿ ಹನಿಟ್ರ್ಯಾಪ್, ದೌರ್ಜನ್ಯ ವೀಡಿಯೊ ವೈರಲ್: ವಿವಸ್ತ್ರ ಪ್ರಕರಣದ ಬಿಜೆಪಿ ಕಾರ್ಯಕರ್ತೆಯ ಮತ್ತೊಂದು ಮುಖ
ಇತ್ತೀಚೆಗೆ ಹುಬ್ಬಳ್ಳಿ ಪೊಲೀಸರು ಬಂಧಿಸುವಾಗ ವಿವಸ್ತ್ರಗೊಳಿಸಿರುವ ಆರೋಪ ಪ್ರಕರಣದಲ್ಲಿ ಸುದ್ದಿಯಾಗಿದ್ದ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಎಂಬಾಕೆಗೆ ಸಂಬಂಧಿಸಿದ ಹಳೆಯ ವೀಡಿಯೊವೊಂದು ವೈರಲ್ ಆಗಿದೆ. ಆಕೆಯ ನಿಜವಾದ ಬಣ್ಣ ಬಯಲುಗೊಳಿಸುತ್ತಿದೆ. ಸುಜಾತಾ ಹಣಕ್ಕಾಗಿ ಹನಿಟ್ರ್ಯಾಪ್ ಮಾಡುವ ದಂಧೆ ಮಾಡುತ್ತಿದ್ದು, ಸಂತ್ರಸ್ತ ಪುರುಷರ
ಕನ್ನಡ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆ ಕಡ್ಡಾಯ ಮಸೂದೆ ವಾಪಸ್ ಪಡೆಯಿರಿ: ಪಿಣರಾಯಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾದಿಸುವೆ. ಮಸೂದೆ ವಾಪಸ್ ಪಡೆಯಿರಿ ಎಂದು ಮುಖ್ಯಮಂತ್ರಿ
ಇಡಿ ಮೇಲೆ ಮಮತಾ ರೇಡ್: ದಾಳಿ ವೇಳೆ ನುಗ್ಗಿ “ಐಪ್ಯಾಕ್” ಕಡತಗಳನ್ನು ಹೊತ್ತೊಯ್ದ ದೀದಿ
ಚುನಾವಣಾ ತಂತ್ರಗಾರಿಕೆ ಸಂಸ್ಥೆ ‘ಐ ಪ್ಯಾಕ್’ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತಾದಲ್ಲಿರುವ ಐಪ್ಯಾಕ್ ಮುಖ್ಯಸ್ಥನ ಮನೆಯ ಮೇಲೆ ದಾಳಿ ನಡೆದಾಗ ಅಲ್ಲಿಗೆ ನುಗ್ಗಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಾಖಲೆಗಳನ್ನು ಎತ್ತಿಕೊಂಡು
ರಾಜ್ಯದ ಕೆರೆಗಳ ಒಟ್ಟು ಸಂಖ್ಯೆ ಅಂತಿಮಗೊಳಿಸಿ 30% ಕ್ಕಿಂತ ಕಡಿಮೆ ನೀರಿರುವ ಕೆರೆಗಳ ಪಟ್ಟಿ ನೀಡಿ: ಸಚಿವ ಭೋಸರಾಜು
ರಾಜ್ಯದಲ್ಲಿರುವ ಒಟ್ಟು ಜಲಮೂಲಗಳ ನಿಖರವಾದ ಸಂಖ್ಯೆಯನ್ನು ಅಂತಿಮಗೊಳಿಸಿ, ಇಲಾಖಾವಾರು ವರ್ಗೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸಣ್ಣ ನೀರಾವರಿ ಇಲಾಖೆಯ
ಶಬರಿಮಲೆಯಿಂದ ವಾಪಸಾಗುತ್ತಿದ್ದ ಕೊಪ್ಪಳದ ಮಾಲಾಧಾರಿಗಳು ತುಮಕೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ
ತುಮಕೂರು ಕೋರಾ ಸಮೀಪ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದು,
ಕೆಎಸ್ ಈಶ್ವರಪ್ಪಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ
ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರಿಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ಸಲ್ಲಿಸಲು ಈಶ್ವರಪ್ಪ ನಿರ್ಧರಿಸಿದ್ದಾರೆ. ಜನವರಿ 7ರಂದು ಈಶ್ವರಪ್ಪ ಅವರಿಗೆ ವಿದೇಶದಿಂದ ಕರೆ ಬಂದಿದೆ ಎಂದು ತಿಳಿದು ಬಂದಿದೆ.




