Menu

ಪಾಕಿಸ್ತಾನದಲ್ಲಿ ಪ್ರಯಾಣಿಕ ರೈಲು ಹೈಜಾಕ್: ಬಂಡುಕೋರರ ಹಿಡಿತದಲ್ಲಿ 400 ಪ್ರಯಾಣಿಕರು

ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಬಂಡುಕೋರರು ಪ್ರಯಾಣಿಕ ರೈಲನ್ನು ಹೈಜಾಕ್ ಮಾಡಿ ನೂರಾರು ಪ್ರಯಾಣಿಕರನ್ನು ಒತ್ತೆಯಾಳನ್ನಾಗಿ ಮಾಡಿಕೊಂಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಬೇರ್ಪಡಿಸಿ ಪ್ರತ್ಯೇಕ ರಾಷ್ಟ್ರವಾಗಿ ಘೋಷಿಸುವಂತೆ ಆಗ್ರಹಿಸಿ ಬಲೂಚಿಸ್ತಾನ ಲಿಬರಲ್ ಆರ್ಮಿ [ಬಿಎಲ್ ಎ] ರೈಲನ್ನು ಹೈಜಾಕ್ ಮಾಡಿದ್ದು, ಪಾಕಿಸ್ತಾನ ಸೇನೆಯ 6 ಮಂದಿಯನ್ನು ಹತ್ಯೆಗೈಯ್ಯಲಾಗಿದ್ದು, 400ಕ್ಕೂ ಹೆಚ್ಚು ಪ್ರಯಾಣಿಕರನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದೆ. ಪಾಕಿಸ್ತಾನದ ಬಲೂಚಿಸ್ತಾನದ ಕೆಟ್ಟಾದಿಂದ ಪೇಶಾವರದ ಖೈಬರ್ ಪಕ್ತುಕ್ವಾಗೆ ತೆರಳುತ್ತಿದ್ದ ಜಾಫರ್ ಎಕ್ಸ್ ಪ್ರೆಸ್ ರೈಲನ್ನು

2 ಬೈಕ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: 5 ಮಂದಿ ದುರ್ಮರಣ

ಎರಡು ಬೈಕ್ಗಳಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಐವರು ಸಾವಿಗೀಡಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ಆದೋನಿ ತಾಲೂಕಿನ ಪಾಂಡವಗಲ್ ಗ್ರಾಮದ ಬಳಿ ನಡೆದಿದೆ. ಗಂಗಾವತಿಯಿಂದ ಮಂತ್ರಾಲಯಕ್ಕೆ ಹೊರಟಿದ್ದ ಬಸ್, ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ. ಒಂದು ಬೈಕ್ನಲ್ಲಿದ್ದ ಹೇಮಾದ್ರಿ, ಪತ್ನಿ ನಾಗರತ್ನಮ್ಮ,

ತುಂಗಭದ್ರ ಜಲಾಶಯದ 27 ಟಿಎಂಸಿ ನೀರು ಸದ್ಬಳಕೆ ಬಗ್ಗೆ ಆಂಧ್ರ, ತೆಲಂಗಾಣ ಜತೆ ಚರ್ಚೆ: ಡಿಕೆ ಶಿವಕುಮಾರ್

ಬೆಂಗಳೂರು: ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆ ಮಾಡಿಕೊಳ್ಳಲು ನವಲಿ ಸಮಾನಾಂತರ ಜಲಾಶಯ ಹಾಗೂ ಮತ್ತೊಂದು ಪರ್ಯಾಯ ಯೋಜನೆ ವಿಚಾರವಾಗಿ ಆಂಧ್ರ, ತೆಲಂಗಾಣ ರಾಜ್ಯಗಳ ಜತೆ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.

ವಿಶ್ವದ 20 ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತ 13 ನಗರಗಳು!

ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತ ವಿಶ್ವದ ಟಾಪ್ 5 ನಗರಗಳಲ್ಲಿ ಸ್ಥಾನ ಪಡೆದಿದ್ದು, ಸಮಾಧಾನಕರ ವಿಷಯ ಅಂದರೆ 3ರಿಂದ 5ನೇ ಸ್ಥಾನಕ್ಕೆ ಜಾರಿದೆ. ಮಂಗಳವಾರ ಪ್ರಕಟವಾದ ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ ಐಕ್ಯೂಏರ್ನ ವಿಶ್ವ ವಾಯು ಗುಣಮಟ್ಟ ವರದಿ 2024

ಪಕ್ಷ ಅಧಿಕಾರಕ್ಕೆ ತಂದ ಕಾರ್ಯಕರ್ತರ ಜೊತೆ ಸದಾ ಇರುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಂತಹ ಕಾರ್ಯಕರ್ತರಿಗೆ ಸರ್ಕಾರದ ಕಾರ್ಯಕ್ರಮಗಳ ಮೂಲಕ ಅನುಕೂಲ ಮಾಡಿಕೊಡುವ ಹಾಗೂ ಹುದ್ದೆಗಳನ್ನು ಕೊಡುವ ಹಕ್ಕು ನಮಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು. ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರ ಅವರು

ಆಮದು ಸುಂಕ ಇಳಿಸಲು ಒಪ್ಪಿಕೊಂಡಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು

ಅಮೆರಿಕದ ವಸ್ತುಗಳ ಮೇಲಿನ ಆಮದು ಸುಂಕ ಇಳಿಸುವುದಾಗಿ ಒಪ್ಪಿಕೊಂಡಿಲ್ಲ ಎಂದು ಭಾರತ ಸ್ಪಷ್ಟನೆ ನೀಡುವ ಮೂಲಕ ಡೊನಾಲ್ಡ್ ಟ್ರಂಪ್ ಗೆ ಪರೋಕ್ಷವಾಗಿ ತಿರುಗೇಟು ನೀಡಿದೆ. ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ನಂತರ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಡೊನಾಲ್ಡ್

ಐಪಿಎಸ್ ಅಧಿಕಾರಿ ರನ್ಯಾ ರಾವ್ ತಂದೆ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಮಲತಂದೆ ಹಾಗೂ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ ಹಾಗೂ ಪೊಲೀಸರ ಪ್ರೊಟೊಕಾಲ್ ಉಲ್ಲಂಘನೆ ಕುರಿತು ರಾಜ್ಯ ಸರ್ಕಾರ ಹೊಸದಾಗಿ ತನಿಖೆಗೆ ಆದೇಶಿಸಿದೆ. ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ

135 ಸಂಚಾರಿ ಆಸ್ಪತ್ರೆಗಳನ್ನು ಕಟ್ಟಡ ಕಾರ್ಮಿಕರಿಗೆ ಒಪ್ಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮಾ 10: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ

ರಾಜ್ಯಸಭೆಯಲ್ಲಿ ದಾವಣಗೆರೆ-ಶೃಂಗೇರಿ-ಬೇಲೂರು ಸಂಪರ್ಕಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು; ಕಳೆದ ಹತ್ತು ವರ್ಷಗಳ ಅವಧಿಯಲಿ ನರೇಂದ್ರ ಮೋದಿ ಅವರ ಸರಕಾರ ರೇಲ್ವೆ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಯನ್ನು ಮಾಡಿದೆ

ಕಾಡುಗಳಲ್ಲಿ ಅಗ್ನಿ ಆಕಸ್ಮಿಕ, ತರದಿರಲಿ ಸೂತಕ

ಸ್ಥಳೀಯ ಸಮುದಾಯಗಳು ಮತ್ತು ಆಧುನಿಕ ಅಗ್ನಿಶಾಮಕ ತಂತ್ರಗಳ ನಡುವಿನ ಸಹಯೋಗವು ಹೆಚ್ಚು ಪರಿಣಾಮಕಾರಿ ಬೆಂಕಿ ತಡೆಗಟ್ಟುವ ತಂತ್ರಗಳಿಗೆ ಕಾರಣವಾಗಬಹುದು. ಸ್ಥಳೀಯ ಬುಡಕಟ್ಟುಗಳು ಮತ್ತು ಅವರ ಅರಣ್ಯ ಪರಿಸರಗಳ ನಡುವಿನ ನಿಕಟ ಸಂಬಂಧವನ್ನು ಅರ್ಥ ಮಾಡಿಕೊಳ್ಳುವುದು ಕಾಡಿನ ಬೆಂಕಿಯನ್ನು ಪರಿಹರಿಸಲು ನಿರ್ಣಾಯಕವಾಗಿದೆ. ಭಾರತದಲ್ಲಿ