Menu

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಿಂದ ಐವರು ಅಭ್ಯರ್ಥಿಗಳು: ಸಿಎಂ ಡಿಕೆ ಶಿವಕುಮಾರ್

ವಿಧಾನ ಪರಿಷತ್ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸಲಿದ್ದು, ನಾವು ಐವರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಈಗಾಗಲೇ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಐದನೇ ಅಭ್ಯರ್ಥಿಯನ್ನು ಇಂದು  ಪ್ರಕಟಿಸುವುದಾಗಿ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಗಳಾಗಿ ಮೊದಲ ದಿನದ ಅನುಭವ ಹೇಗಿತ್ತು ಎಂದು ಕೇಳಿದಾಗ, “ನಾನು ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ನನ್ನ ನೇತೃತ್ವದಲ್ಲಿ ಘೋಷಿಸಿದ ಭರವಸೆಗಳನ್ನು ಜನರಿಗೆ ಈಡೇರಿಸಿದ್ದೇವೆ. ರಾಜ್ಯದ ಜನ

ಸಿರಗುಪ್ಪದಲ್ಲಿ ಬೈಕ್‌ ರಸ್ತೆ ಗುಂಡಿಗೆ ಬಿದ್ದು ನರ್ಸ್‌ ಬಲಿ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಚಾಣಕನೂರು ಕ್ರಾಸ್ ಬಳಿ ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ನರ್ಸ್‌ ಬಲಿಯಾಗಿದ್ದು, ಆಕೆಯ ಪತಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳುತ್ತಿದ್ದ ದಂಪತಿ ಬೈಕ್ ಸಮೇತ ರಸ್ತೆ ಗುಂಡಿಗೆ ಬಿದ್ದಿದ್ದು, ಪತ್ನಿ

ನೂತನ ಕೆಪಿಸಿಸಿ ಸಾರಥಿಗೆ ನಾನಾ ಸವಾಲು

ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಮುಂದಿನ ದಿನಗಳ ಕಾಂಗ್ರೆಸ್ ಆಡಳಿತವನ್ನು ಜನತೆಯ ಮುಂದೆ ಪರಿಣಾಮಕಾರಿ ತೆಗೆದುಕೊಂಡು ಹೋಗುವ ಗುರುತರ ಹೊಣೆಗಾರಿಕೆ ಮತ್ತು ವಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕೆಲಸವೂ ಈಗ ಹರಿಪ್ರಸಾದ್ ಅವರ ಹೆಗಲೇರಿದೆ. ಕೆಪಿಸಿಸಿ ಸಾರಥ್ಯವೀಗ ಕಾಂಗ್ರೆಸ್ ಪಾರ್ಟಿಯ ಹಿರಿಯ ನಾಯಕ

ಚಿಕ್ಕನಾಯಕನಹಳ್ಳಿಯಲ್ಲಿ ಕಾರುಗಳು ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

ಎರಡು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟಟ್ಟಿರುವ ದಾರುಣ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಈ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ

ಮಳೆಗೆ ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ವಿದ್ಯಾರ್ಥಿ ಸಾವು

ಧಾರಾಕಾರ ಮಳೆಗೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಎಂಟು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೀದರ್‌ನ ಹುಲಸೂರು ಪಟ್ಟಣದಲ್ಲಿ ನಡೆದಿದೆ. ಎಂಟು ವರ್ಷದ ಅಲಿ ಮೊಮಿನ್ ಮೃತಪಟ್ಟ ಬಾಲಕ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯ ಕಾರಣ ವಿದ್ಯುತ್‌ ಕಂಬದಿಂದ ಮನೆಗೆ

ಹಳೇ ಪಿಕ್ಚರ್, ಹೊಸ ಪೋಸ್ಟರ್ ನಂತಿದೆ ಡಿಕೆಶಿ ಸರ್ಕಾರ: ಆರ್‌ ಅಶೋಕ ಟೀಕೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ನೇತೃತ್ವದ ಹೊಸ ಸರ್ಕಾರ, ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯನವರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯಲಿದೆ. ಹಳೇ ಪಿಕ್ಚರ್, ಹೊಸ ಪೋಸ್ಟರ್ ನಂತಿದೆ ಡಿಕೆಶಿ ಸರ್ಕಾರ. ಜನರಿಗೆ ಏನೂ ಹೊಸತು ಸಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದರು.

“ಜಿಬಿಎ ಚುನಾವಣೆ ಬೇಗ ನಡೆಸಿ, ವಿಳಂಬದಿಂದಾಗಿ ಕೇಂದ್ರದ ಹತ್ತು ಸಾವಿರ ಕೋಟಿ ರೂ. ಸಿಗ್ತಿಲ್ಲ”

ಚುನಾವಣೆ ವಿಳಂಬದಿಂದಾಗಿ ಬೆಂಗಳೂರಿಗೆ 10,000 ಕೋಟಿ ರೂ. ಕೇಂದ್ರದ ಹಣಕಾಸು ನೆರವು ಸಿಗುತ್ತಿಲ್ಲ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಗಳನ್ನು ಆದಷ್ಟು ಬೇಗ ನಡೆಸುವಂತೆ ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಮತ್ತು ಮಾಜಿ ಸಂಸತ್ ಸದಸ್ಯ ಡಾ. ಸಿ. ನಾರಾಯಣಸ್ವಾಮಿ

ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಎಚ್ಚರಿಕೆ

ಸಿಎಂ ಡಿಕೆ ಶಿವಕುಮಾರ್ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಮೊದಲ ಬಾರಿಗೆ ಸಭೆ ನಡೆಸಿ, ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿ ಗುಣಮಟ್ಟ ಮತ್ತು ಜನಸ್ನೇಹಿ ನೀತಿಗಳನ್ನು ಅನುಷ್ಠಾನಗೊಳಿಸಲು ಆಸದ್ಯತೆ ನೀಡಬೇಕು ಎಂದು ಹೇಳಿದ್ದಾರೆ. ಸರ್ಕಾರದ ಎಲ್ಲಾ

ಸಿಎಂ ಡಿಕೆ ಶಿವಕುಮಾರ್‌ ರಾಜ್ಯದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಲಿ: ಆರ್‌ ಅಶೋಕ

ಕೇರಳಂನ ನೂತನ ಮುಖ್ಯಮಂತ್ರಿ ಶ್ರೀ @vdsatheesan ಅವರು ತಮ್ಮ ರಾಜ್ಯದ ಆರ್ಥಿಕ ಸ್ಥಿತಿಗತಿಯ ನೈಜ ಚಿತ್ರಣವನ್ನು ಜನರ ಮುಂದಿಡುವ ಉದ್ದೇಶದಿಂದ ಹಣಕಾಸು ಶ್ವೇತಪತ್ರ ಮಂಡಿಸಿರುವುದು ಸ್ವಾಗತಾರ್ಹ.  ಅದೇ ಮಾದರಿಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಶ್ರೀ @DKShivakumar ಅವರೂ ಕೂಡ ರಾಜ್ಯದ ಹಣಕಾಸಿನ ಸ್ಥಿತಿಗತಿಯ

‘ಕಿಲ್ಲರ್’ ಚಿತ್ರೀಕರಣ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ಯುವ ತಂತ್ರಜ್ಞ ಬಲಿ

ತಮಿಳು ನಟ ಎಸ್‌ಜೆ ಸೂರ್ಯ ಮುಖ್ಯ ಪಾತ್ರದಲ್ಲಿ ನಟನೆಯ  ‘ಕಿಲ್ಲರ್’ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ 26 ವರ್ಷದ ಯುವ ತಂತ್ರಜ್ಞ ಮದನ್ ಪ್ರಾಣ ಕಳೆದುಕೊಂಡಿದ್ದಾರೆ. ಬಿನ್ನಿ ಮಿಲ್ಸ್‌ನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ನಡೆದ ಈ ದುರಂತದಲ್ಲಿ ಮೂವರು