Featured
ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದು ಶಾಸಕರ ಖರೀದಿ ಡೀಲ್‌ಗೆ: ಆರ್ ಅಶೋಕ
ಬೆಂಬಲಿತ ಶಾಸಕರ ಸಹಿ ಪಡೆಯಲೆಂದೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರದ ಜೈಲಿಗೂ ಹೋಗಿದ್ದಾರೆ. ಕಾಂಗ್ರೆಸ್ ಪಕ್ಷದೊಳಗೆ ಕುದುರೆ ವ್ಯಾಪಾರ ಬಲು ಜೋರಾಗಿದೆ. ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿರುವ ಕುದುರೆ ವ್ಯಾಪಾರದ ಮಾತುಗಳಲ್ಲಿ ಸತ್ಯವಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ 10-12 ಮಂದಿ ಶಾಸಕರ ಬೆಂಬಲವಿದೆ ಎಂದು ಮಾಧ್ಯಮಗಳಲ್ಲೇ ಬರುತ್ತಿತ್ತು. ಈಗ ಏಕಾಏಕಿ 70
ಮಹಿಳೆಯರ ಕಬಡ್ಡಿ ವಿಶ್ವಕಪ್ ಗೆದ್ದುಕೊಂಡ ಭಾರತ ತಂಡ
ಢಾಕಾದಲ್ಲಿ ನಡೆದ ಭಾರತ ಮಹಿಳಾ ಕಬಡ್ಡಿ ತಂಡ ಎರಡನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಜಯವನ್ನು ತನ್ನದಾಗಿಸಿಕೊಂಡು ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಅಂತಿಮ ಪಂದ್ಯದಲ್ಲಿ ಭಾರತವು ಚೈನೀಸ್ ತೈಪೆ ವಿರುದ್ಧ 35-28 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದೆ. 11 ತಂಡಗಳು ಪಾಲ್ಗೊಂಡಿದ್ದ ಪಂದ್ಯದಲ್ಲಿ
ಪತಿಯಿಂದ ವರದಕ್ಷಿಣೆ ಕಿರುಕುಳ: ಬೆಂಗಳೂರಿನಲ್ಲಿ ಮಹಿಳೆ ಆತ್ಮಹತ್ಯೆ
ಬೆಂಗಳೂರಿನ ಗೋವಿಂದರಾಜನಗರದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ಗೋಕಾಕ್ ಮೂಲದ ರೇಖಾ ಆತ್ಮಹತ್ಯೆ ಮಾಡಿಕೊಂಡವರು. ಪ್ರೀತಿಸಿ ಮದುವೆಯಾದ ಮಹಿಳೆಯ ಪತಿ ಮಾಯಪ್ಪ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೈದಿರುವುದಾಗಿ ರೇಖಾ
ಭ್ರಷ್ಟ ಅಧಿಕಾರಿಗಳ ವಿರುದ್ಧ ರಾಜ್ಯದ ಹತ್ತು ಕಡೆ ಲೋಕಾಯುಕ್ತ ದಾಳಿ
ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಅಧಿಕಾರಿಗಳ ವಿರುದ್ಧ ರಾಜ್ಯದ ಹತ್ತು ಕಡೆಗಳಲ್ಲಿ ಮಂಗಳವಾರ ಬೆಳಗ್ಗೆಯೇ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರಿನ RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆಯ ಅಧಿಕಾರಿ ಪುಟ್ಟಸ್ವಾಮಿ, ಬೀದರ್ ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯಇಂಜಿನಿಯರ್ ಪ್ರೇಮ್ ಸಿಂಗ್.
ಬೆಂಗಳೂರಿನಲ್ಲಿ ಸಹೋದ್ಯೋಗಿಯಿಂದ ಅತ್ಯಾಚಾರ: ಮಹಿಳಾ ಪೈಲಟ್ ಆರೋಪ
ಬೆಂಗಳೂರಿನಲ್ಲಿ ಲೇಓವರ್ ಸಮಯದಲ್ಲಿ ಪೈಲಟ್ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮಹಿಳಾ ಸಹ-ಪೈಲಟ್ ಆರೋಪಿಸಿದ್ದಾರೆ. ಚಾರ್ಟರ್ಡ್ ವಿಮಾನದ ಕರ್ತವ್ಯ ವೇಳೆ ಲೇಓವರ್‌ನಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಮೊದಲು ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಬೆಂಗಳೂ ರಿಗೆ ವರ್ಗಾಯಿಸಲಾಗಿದೆ.
ಸಿದ್ದರಾಮಯ್ಯ ಹೇಳಿದ ಮೇಲೆ ಅದೇ ವೇದವಾಕ್ಯ, ಅವರು ಪಕ್ಷಕ್ಕೆ ದೊಡ್ಡ ಆಸ್ತಿ: ಡಿಕೆ ಶಿವಕುಮಾರ್
“ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಶಿಡ್ಲಘಟ್ಟ ಹಾಗೂ ಬೆಂಗಳೂರಿನ
2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಡಿಕೆ ಶಿವಕುಮಾರ್
ಶಿಡ್ಲಘಟ್ಟ: ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್
ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು
ಹಾಸನ:ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನಂಬಿಹಳ್ಳಿಯ ಗೋಪಾಲ್ (27), ದೀಪು (24) ಎಂದು ಮೃತಪಟ್ಟ ದಂಪತಿಯನ್ನು ಗುರುತಿಸಲಾಗಿದೆ ಇವರಿಬ್ಬರು ಮಧ್ಯಾಹ್ನ ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು.
ಶಾಸಕರ ಖರೀದಿ, ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಕೆ ಶಿವಕುಮಾರ್ ತಿರುಗೇಟು
ಶಿಡ್ಲಘಟ್ಟ: ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ
ಅಯೋಧ್ಯೆಯ ರಾಮಮಂದಿರ ಮೇಲೆ ಕೇಸರಿ ಧ್ವಜ ಹಾರಿಸಲಿರುವ ಮೋದಿ!
ನವದೆಹಲಿ/ಅಯೋಧ್ಯೆ: ಅಯೋಧ್ಯೆಯ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ದೇವಾಲಯದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸಲಿದ್ದಾರೆ. ಭಗವಾನ್ ರಾಮನ ತೇಜಸ್ಸು ಮತ್ತು ಶೌರ್ಯವನ್ನು ಸಂಕೇತಿಸುವ ವಿಕಿರಣ ಸೂರ್ಯನ ಚಿತ್ರವುಳ್ಳ 10 ಅಡಿ ಎತ್ತರ ಮತ್ತು




