Menu

ಬಂಡೀಪುರದಲ್ಲಿ ಕೇರಳ ಆಭರಣ ತಯಾರಕನನ ಅಡ್ಡಗಟ್ಟಿ ಕಾರು ಸಮೇತ ಚಿನ್ನ ದರೋಡೆ

ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶವಾಗಿರುವ ಮೂಲೆಹೊಳೆ ಚೆಕ್ ಪೋಸ್ಟ್ ಸಮೀಪ ಆಭರಣ ತಯಾರಕ ವಿನು ಅವರ 1.3 ಕೆಜಿಗೂ ಹೆಚ್ಚು ಚಿನ್ನವನ್ನು ದರೋಡೆ ಮಾಡಿ ಕಾರು ಸಹಿತ ಆರೋಪಿಗಳು ಪರಾರಿಯಾಗಿದ್ದಾರೆ. ಕೇರಳದ ಗ್ಯಾಂಗ್​ವೊಂದು ಪೂರ್ವನಿಯೋಜಿತ ಕೃತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ನವೆಂಬರ್ 20ರ ರಾತ್ರಿ ದರೋಡೆ ನೆದಿದ್ದು, ಆಭರಣ ತಯಾರಕ ಕೇರಳದ ನಿವಾಸಿ ವಿನು, ಎರಡು ದಿನಗಳ ಬಳಿಕ

ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ ಅಂದ್ರು ಡಿಕೆ ಶಿವಕುಮಾರ್‌

ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ , ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನು ಗಾರನಿಗೆ

ಎಂಎಸ್‌ಪಿ ದರದಲ್ಲಿ ಖರೀದಿ ಆರಂಭಿಸಲು NAFED, FCI, NCCF ಗೆ ತಕ್ಷಣ ನಿರ್ದೇಶನ ನೀಡಿ: ಮೋದಿಗೆ ಸಿಎಂ ಆಗ್ರಹ

ಕರ್ನಾಟಕದಲ್ಲಿ ಮೆಕ್ಕೆ ಜೋಳವನ್ನು PDS ವಿತರಣೆಯಲ್ಲಿ ಸೇರಿಸದಿರುವುದರಿಂದ, FCI, NAFED ಹಾಗೂ ಇತರ ಖರೀದಿ ಸಂಸ್ಥೆಗಳು ತಕ್ಷಣ ಬೆಲೆ ಬೆಂಬಲ ಯೋಜನೆ ಅಥವಾ ಸೂಕ್ತ ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ ಮೆಕ್ಕೆ ಜೋಳ ಮತ್ತು ಹೆಸರುಕಾಳನ್ನು ಎಂಎಸ್‌ಪಿ ದರದಲ್ಲಿ ಖರೀದಿಸಲು ಆದೇಶಿಸಬೇಕು. ಕರ್ನಾಟಕದಲ್ಲಿ

ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ ತನಿಖೆಗೆ ಎಸ್ಐಟಿ ರಚನೆ: ಡಿಸಿಎಂ

“ನೀರಾವರಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪಗಳ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಲಾಗುವುದು. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ, ವಕೀಲರನ್ನು ವಜಾಗೊಳಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ

ರಾಜ್ಯ ರಾಜಕಾರಣದಲ್ಲಿ ಯಾರೂ ನಿರೀಕ್ಷೆ ಮಾಡದ ಬೆಳವಣಿಗೆ ನಡೆಯಲಿವೆ: ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರದಂದು ಜೆಡಿಎಸ್ ಪಕ್ಷದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು

ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ: ಇನ್ಫೋಸಿಸ್ ಉದ್ಯೋಗಿ ಸಾವು

ಬೆಂಗಳೂರು: ವೇಗವಾಗಿ ಬೈಕ್ ನಲ್ಲಿ ಹೋಗುತ್ತಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಮುಂದಿನ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿರುವ ದುರ್ಘಟನೆ ಹೊಂಗಸಂದ್ರದ ಮೆಟ್ರೋ ಸ್ಟೇಷನ್ ಬಳಿ ಶನಿವಾರ ಮುಂಜಾನೆ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯ ಇನ್ಫೋಸಿಸ್ ನ ಉದ್ಯೋಗಿ ಅಕ್ಷಯ್(27) ಮೃತಪಟ್ಟವರು, ರಾತ್ರಿ ಪಾಳಿಯಲ್ಲಿ

ಮಹದೇವಪುರದಲ್ಲಿ ಮತಗಳವು ಪ್ರಕರಣ ದಾಖಲು

ಬೆಂಗಳೂರು: ಕಳೆದ 2024 ರ ಲೋಕಸಭಾ ಚುನಾವಣೆಗೆ ಮುನ್ನ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂಬ ದೂರಿನ ಮೇರೆಗೆ ಇಲ್ಲಿನ ಪೊಲೀಸರು ಚುನಾವಣಾ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಎಫ್‌ಐಆರ್‌ ಪ್ರಕಾರ ನಲ್ಲೂರಹಳ್ಳಿ ನಿವಾಸಿ

ಜಮೀನಿನ ದಾರಿ ವಿವಾದಕ್ಕೆ ವಿಕಲಚೇತನ‌ ಮಗಳ ಕೊಂದು‌ ಆತ್ಮಹತ್ಯೆ ಕತೆ ಕಟ್ಟಿದ್ದ ತಂದೆ ಸೆರೆ

ಕಲಬುರಗಿ: ಜಮೀನಿನ ದಾರಿ ವಿವಾದ ಬಗೆಹರಿಸಿಕೊಳ್ಳಲು ತಂದೆಯೊಬ್ಬ ವಿಕಲಚೇತನ ಮಗಳನ್ನು ಕೊಲೆಗೈದು, ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿ ಸಬ್​ ಅರ್ಬನ್​​ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಜಿಲ್ಲೆಯ ಕಲ್ಲಹಂಗರಗಾ ಗ್ರಾಮದಲ್ಲಿ 17 ವರ್ಷದ ಮಂಜುಳಾಳನ್ನು ಕೊಲೆಗೈದಿದ್ದ ತಂದೆ ಗುಂಡೇರಾವನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಸಬ್​

2ನೇ ಟೆಸ್ಟ್: ಹರಿಣಗಳ ಅಬ್ಬರಕ್ಕೆ ಕುಲದೀಪ್ ಕಡಿವಾಣ

ಸ್ಪಿನ್ನರ್ ಕುಲದೀಪ್ ಯಾದವ್ ಚುರುಕಿನ ದಾಳಿ ನೆರವಿನಿಂದ 2ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ದಕ್ಷಿಣ ಆಫ್ರಿಕಾ ಮೇಲುಗೈ ಸಾಧಿಸದಂತೆ ಭಾರತ ನೋಡಿಕೊಂಡಿತು. ಈ ಮೂಲಕ ಸಮಬಲ ಸಾಧಿಸಿದೆ. ಗುವಾಹತಿಯಲ್ಲಿ ಶನಿವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು

ರಾಜ್ಯಕ್ಕೆ ಸಿಎಂ ಯಾರು ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಲಿ: ಆರ್.ಅಶೋಕ

ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ