Tuesday, November 18, 2025
Menu

ಸಿಎಂ ಬದಲಾವಣೆ: ಹೈಕಮಾಂಡ್‌ ನಿರ್ಧಾರವೇ ಅಂತಿಮವೆಂದ ಮುಖ್ಯಮಂತ್ರಿ

ಜನರು ಅಭಿಪ್ರಾಯವೇನೇ ಇದ್ದರೂ ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಸಿಎಂ ಬದಲಾವಣೆ ಬಗ್ಗೆ ಏನೂ ಹೇಳಿರುವುದಿಲ್ಲ. ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನರ್‌ ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ನೆಲೆಸಿರುವ ಬಿಹಾರಿ ಮತದಾರರು, ಕರ್ನಾಟಕದ ಮುಖ್ಯಮಂತ್ರಿಗಳ ಬದಲಾವಣೆ ಕುರಿತ ಮಾತನಾಡಿರುವ ಬಗ್ಗೆ ಸಿಎಂ ಹೀಗೆ ಪ್ರತಿಕ್ರಿಯಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ

ಆಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ: ಕನಿಷ್ಠ 20 ಮಂದಿ ಬಲಿ

ಆಫ್ಘಾನಿಸ್ತಾನದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಕನಿಷ್ಠ 20 ಮಂದಿ ಅಸುನೀಗಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ಸಮಂಗನ್ ಪ್ರಾಂತ್ಯದಲ್ಲಿ ಕೇಂದ್ರೀಕೃತವಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಿಸಿದೆ. ದೇಶದ ವಾಯುವ್ಯ,

ಮಲ್ಪೆಯ ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಕುಸಿದು ಎಎಸ್‌ಐ ಸಾವು

ವೇದಿಕೆಯಲ್ಲಿ ನಿಂತು ಹಾಡುತ್ತಿದ್ದ ಎಎಸ್‌ಐ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವಿಶ್ವನಾಥ್ (58) ಸಹೋದ್ಯೋಗಿಯೊಬ್ಬರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿದ್ದ ವೇಳೆಯೇ ಹಠಾತ್ತನೆ ಕುಸಿದು ಬಿದ್ದು ಅಸು ನೀಗಿದ್ದಾರೆ. ಪೊಲೀಸ್ ಸಿಬ್ಬಂದಿಯೊಬ್ಬರ

ನ. 7ರಂದು ರಾಜ್ಯಾದ್ಯಂತ ಪಿಯು ಉಪನ್ಯಾಸಕರ ಪ್ರತಿಭಟನೆ

ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದಾದ್ಯಂತ ಪಿಯು ಉಪನ್ಯಾಸಕರು ನ. 7ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಪಿಯು ಪರೀಕ್ಷಾ ವಿಭಾಗವನ್ನು ಪ್ರತ್ಯೇಕಗೊಳಿಸಬೇಕು, ಪಿಯು ಇಲಾಖೆಯಲ್ಲಿ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗೆ ಅಕಾಡೆಮಿ ಕೌನ್ಸಿಲ್ ಸಮಿತಿ ರಚಿಸಬೇಕು ಎಂಬುದು

ಅನಿಲ್ ಅಂಬಾನಿಯ 3,000 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ವಿರುದ್ಧ ಹಣ ವರ್ಗಾವಣೆ ತಡೆ ಕಾಯ್ದೆಯಡಿ  ನಡೆಯುತ್ತಿರುವ ತನಿಖೆಯ ಹಿನ್ನೆಲೆಯಲ್ಲಿ ಇಡಿ 3,000 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳು ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯುನಿಕೇಶನ್, ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿದ್ದರಾಮಯ್ಯ

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರು  ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು

ಭಕ್ತಿ, ಕಷ್ಟ ಸುಖ, ದುಃಖ ದುಮ್ಮಾನ ವಿನಿಮಯ ಸ್ಥಳವೇ ದೇವಾಲಯ: ಡಿಸಿಎಂ

“ಭಕ್ತ ಹಾಗೂ ಭಗವಂತನ ನಡುವೆ ಭಕ್ತಿ ಸೇರಿದಂತೆ ನಮ್ಮ ಕಷ್ಟ ಸುಖ, ದುಃಖ ದುಮ್ಮಾನಗಳು ವಿನಿಮಯವಾಗುವ ಸ್ಥಳವೇ ದೇವಾಲಯ. ನಾವೆಲ್ಲರೂ ಪ್ರಾರ್ಥಿಸುವುದಕ್ಕೆ ದೇವಾಲಯಗಳಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌  ಹೇಳಿದರು. ಚಿಕ್ಕಬಾಣಾವರದ ರಾಮಚಂದ್ರ ದೇಗುಲ ಜೀರ್ಣೋದ್ದಾರ ಪುನಃ ಪ್ರತಿಷ್ಟಾಪನೆ ಹಾಗೂ

ಸುರಂಗ ರಸ್ತೆ ಯೋಜನೆಯಿಂದ ಆರ್ಥಿಕ ಸ್ಥಿತಿ ಪಾತಾಳಕ್ಕೆ: ಆರ್‌ ಅಶೋಕ ಆಕ್ರೋಶ

ಸುರಂಗ ರಸ್ತೆ ಯೋಜನೆಯ ಮೂಲಕ ಸಸ್ಯಕಾಶಿ ಲಾಲ್‌ಬಾಗ್‌ಗೆ ಕಾಂಗ್ರೆಸ್‌ ಸರ್ಕಾರ ಗುಂಡಿ ತೋಡುತ್ತಿದೆ. ಈ ಯೋಜನೆಯಿಂದ ನಗರದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಲಾಲ್‌ಬಾಗ್‌ನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಂಗಳೂರಿನ

ವಿದ್ಯಾರ್ಥಿನಿ ಗರ್ಭಿಣಿಯಾಗಲು ನಾನು ಕಾರಣನಲ್ಲ: ವಾಯ್ಸ್‌ ನೋಟ್‌ ಮಾಡಿಟ್ಟು ಪಿರಿಯಾಪಟ್ಟಣದಲ್ಲಿ ಯುವಕ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿ ಗರ್ಭಿಣಿಯಾಗಲು ಕಾರಣನೆಂಬ ಆರೋಪ ಎದುರಿಸುತ್ತಿದ್ದ ರಾಮು ಎಂಬ 27 ವರ್ಷದ ಯುವಕ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮೊದಲು ಆತ ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟಿದ್ದು, ತನ್ನ ಮೇಲಿನ ಆರೋಪ ಸುಳ್ಳು.

ವೈದ್ಯೆ ಕೃತಿಕಾ ರೆಡ್ಡಿ ಕೊಲೆ: ಮಹೇಂದ್ರ ರೆಡ್ಡಿಗಿತ್ತು ಹಲವು ಯುವತಿಯರ ಸಂಪರ್ಕ

ಇತ್ತೀಚೆಗೆ ಗಂಡ ಮಹೇಂದ್ರ ರೆಡ್ಡಿಯಿಂದಲೇ ಕೊಲೆಯಾಗಿರುವ ವೈದ್ಯೆ ಕೃತಿಕಾ ರೆಡ್ಡಿ ಪ್ರಕರಣದ ವಿಚಾರಣೆಯಲ್ಲಿ ಮಾರತ್ತಹಳ್ಳಿ ಪೊಲೀಸರು ಮಹತ್ವದ ವಿಚಾರವನ್ನು ಬಯಲಿಗೆಳೆದಿದ್ದಾರೆ.  ಆರೋಪಿಗೆ ಹಲವು ಯುವತಿಯರ ಜೊತೆ ಸಂಪರ್ಕ ಇರುವುದು ಪತ್ತೆಯಾಗಿದೆ. 2023 ರಲ್ಲಿ ಮುಂಬೈ ಮೂಲದ ಯುವತಿಯ ಹಿಂದೆ ಬಿದ್ದದ್ದ ಮಹೇಂದ್ರ