Menu

ಮುಂಬೈ ಪೊಲೀಸ್ ಹೆಸರಲ್ಲಿ ಬೆದರಿಕೆ: 56.05 ಲಕ್ಷ ರೂ. ಕಳೆದುಕೊಂಡ ನಿವೃತ್ತ ಕರ್ನಲ್

ಮುಂಬೈ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬಂಧಿಸುವ ಬೆದರಿಕೆ ಹಾಕಿದ್ದರಿಂದ ಭಯಗೊಂಡ ಬೆಂಗಳೂರಿನ ನಿವೃತ್ತ ಸೇನಾ ಕರ್ನಲ್ 56.05 ಲಕ್ಷ ರೂ. ಕಳೆದುಕೊಂಡಿದ್ದಾರೆ. ನವೆಂಬರ್ 18 ರಂದು ಕೇಂದ್ರ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ 27 ರಂದು ಕರ್ನಲ್‌ಗೆ ಕರೆ ಮಾಡಿದ ವ್ಯಕ್ತಿಯೊಬ್ಬ ತಾನು ಮುಂಬೈ ಪೊಲೀಸ್ ಇನ್ಸ್‌ಪೆಕ್ಟರ್ ಸಂಜಯ್ ಪಿಶೆ ಎಂದು ಹೇಳಿಕೊಂಡಡು, ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್

ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ: ಡಿಕೆ ಶಿವಕುಮಾರ್‌

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಬೆಂಗಳೂರಿನಲ್ಲಿ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ  ಅವರು ಉತ್ತರಿಸಿದರು. ಐದೂ ವರ್ಷವೂ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಹೇಳಿರುವ ಬಗ್ಗೆ ಕೇಳಿದಾಗ

ಕಡೂರಿನಲ್ಲಿ ಪೋಷಕರೆದುರೇ ಮಗುವನ್ನು ಹೊತ್ತೊಯ್ದ ಚಿರತೆ: ಗುಡ್ಡದಲ್ಲಿ ಶವ ಪತ್ತೆ

ಕಡೂರು ತಾಲೂಕಿನ ನವಿಲೇಕಲ್ ಪ್ರದೇಶದಲ್ಲಿ ಚಿರತೆಯು ಪೋಷಕರೆದುರೇ ಮಗುವನ್ನು ಹೊತ್ತೊಯ್ದಿದ್ದು, ನವಿಲೇಕಲ್ ಗುಡ್ಡದಲ್ಲಿ ಶವ ಪತ್ತೆಯಾಗಿದೆ. ಚಿರತೆಯು ಐದು ವರ್ಷದ ಮಗು ಸಾನ್ವಿಯನ್ನು ಹೊತ್ತೊಯ್ದಿತ್ತು. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ ಮೇಲೆ ಚಿರತೆ ದಾಳಿ ಮಾಡಿದಾಗ ಚೀರಾಟ ಕೇಳಿ ಪೋಷಕರು ಬಂದಿದ್ದಾರೆ.

ಕಿಚ್ಚ ಸುದೀಪ್‌ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲು

ಬಿಗ್‌ ಬಾಸ್‌ ಕಾರ್ಯಕ್ರಮ ನಿರೂಪಕ ಆಗಿರುವ ನಟ ಕಿಚ್ಚ ಸುದೀಪ್‌ ವಿರುದ್ಧ ಮಹಿಳಾ ಆಯೋಗದಲ್ಲಿ ಪ್ರಕರಣ ದಾಖಲಾಗಿದೆ, ಜೊತೆಗೆ ಸ್ಪರ್ಧಿ ಅಶ್ವಿನಿ ಗೌಡ ಅವರ ವಿರುದ್ಧವೂ ದೂರು ದಾಖಲಾಗಿದೆ. ಸ್ಪರ್ಧಿ ರಕ್ಷಿತಾ ಶೆಟ್ಟಿ ವಿರುದ್ಧ ಸುದೀಪ್ ಗರಂ ಆಗಿದ್ದು, ವಾರಾಂತ್ಯ ಸುದೀಪ್‌

ಸರ್ಕಾರ 2.5 ವರ್ಷದಲ್ಲಿ ರಾಜ್ಯಕ್ಕೆ ಕೊಟ್ಟಿದ್ದು ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತ: ಆರ್‌ ಅಶೋಕ

ಮುಖ್ಯಮಂತ್ರಿ @Siddaramaiah ನೇತೃತ್ವದ @INCKarnataka ಸರ್ಕಾರ 2.5 ವರ್ಷಗಳಲ್ಲಿ ಕರ್ನಾಟಕಕ್ಕೆ ಕೊಟ್ಟಿದ್ದು  ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತ. ಕಾಂಗ್ರೆಸ್ ಪಕ್ಷ ಕೊಟ್ಟ ಪ್ರತಿ ಭರವಸೆಯೂ ಹುಸಿಯಾಗಿದೆ, ಪ್ರತಿ ಗ್ಯಾರಂಟಿಯೂ ಹೊರೆಯಾಗಿದೆ. ಕಳೆದ 30 ತಿಂಗಳುಗಳಲ್ಲಿ ಕಾಂಗ್ರೆಸ್ ಸರ್ಕಾರ ಪ್ರತಿಯೊಂದು ದಾಖಲೆಯನ್ನು ಮುರಿದಿದೆ, 

ಸ್ವಿಗ್ಗಿಯಲ್ಲಿ ತರಿಸಿದ್ದ ಸ್ಯಾಂಡ್‌ವಿಚ್‌ನಲ್ಲಿ ಸೀಗಡಿ: ಗ್ರಾಹಕಿಗೆ ಒಂದು ಲಕ್ಷ ರೂ. ಪರಿಹಾರಕ್ಕೆ ಕೋರ್ಟ್‌ ಆದೇಶ

ಸ್ವಿಗ್ಗಿಯಲ್ಲಿ ಸಸ್ಯಾಹಾರ ಆರ್ಡರ್ ಮಾಡಿದ್ದ ಗ್ರಾಹಕಿಗೆ ಸ್ಯಾಂಡ್‌ವಿಚ್‌ನಲ್ಲಿ ಸೀಗಡಿ ಸಿಕ್ಕಿದ್ದು, ಆಕೆ ಕೋರ್ಟ್‌ ಮೊರೆ ಹೋಗಿ ಒಂದು ಲಕ್ಷ ರೂ. ಪರಿಹಾರ ಪಡೆದುಕೊಂಡಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಗ್ರಾಹಕರ ನ್ಯಾಯಾಲಯ ಮಹಿಳೆಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ಸ್ವಿಗ್ಗಿ

ಬಾಲಕಿ ಹೊಟ್ಟೆಯಲ್ಲಿತ್ತು ಮೂರು ಕೆಜಿ ಕೂದಲು

ಬೆಂಗಳೂರಿನಲ್ಲಿ ವೈದ್ಯರೇ ಅಚ್ಚರಿಪಡುವಂತೆ ಎಂಟು ವರ್ಷದ ಬಾಲಕಿಯ ಹೊಟ್ಟೆಯೊಳಗೆ ಮೂರು ಕೆಜಿ ಕೂದಲು ಪತ್ತೆಯಾಗಿದೆ. ಬೆಂಗಳೂರಿನ ನಾಯಂಡಹಳ್ಳಿಯ ನೇಟಸ್‌ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯೊಳಗಿದ್ದ ಮೂರು ಕೆಜಿ ತೂಕದ ಕೂದಲು ಗಂಟನ್ನು ಹೊರ ತೆಗೆದಿದ್ದಾರೆ.

ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಅತಿಕ್ರಮಣ, ರಿಯಲ್‌ ಎಸ್ಟೇಟ್‌ಗೆ ಅವಕಾಶವಿಲ್ಲ: ಹೈಕೋರ್ಟ್‌

ಧರ್ಮ, ದೇವರ ಹೆಸರಲ್ಲಿ ಸರಕಾರಿ ಜಾಗ ಅತಿಕ್ರಮಿಸಲು ಹಾಗೂ ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸಲು ಅವಕಾಶ ನೀಡುವುದಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಎಚ್ಚರಿಕೆ ನೀಡಿದೆ. ಕೋಲಾರದ ವೇಮಗಲ್‌ ಹೋಬಳಿಯ ಕ್ಯಾಲನೂರು ಗ್ರಾಮದ ಸರಕಾರಿ ಶಾಲೆಯ ಕಾಂಪೌಂಡ್‌ ಹಾಗೂ ಗ್ರಾಮದ ರಸ್ತೆಯ

ಪಿಎಂಎಲ್‌ಎ: ರಾಬರ್ಟ್ ವಾದ್ರಾ ವಿರುದ್ಧ ಇಡಿ ಹೊಸ ಚಾರ್ಜ್​​ಶೀಟ್

‌ಬ್ರಿಟನ್‌ ಮೂಲದ ರಕ್ಷಣಾ ವ್ಯಾಪಾರಿ ಸಂಜಯ್ ಭಂಡಾರಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ ಹೊಸ ಚಾರ್ಜ್​​ಶೀಟ್ ಸಲ್ಲಿಸಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿದೆ.

ಬೆಂಗಳೂರಿನಲ್ಲಿ ಏಳು ಕೋಟಿ ದರೋಡೆ: ರೂವಾರಿ ಎನ್ನಲಾದ ಪಿಸಿ ಅರೆಸ್ಟ್‌

ಬೆಂಗಳೂರಿನ ಜಯನಗರದಲ್ಲಿ ಎಟಿಎಂಗೆ ಸಾಗಿಸುತ್ತಿದ್ದ ಹಣವಿದ್ದ ವಾಹನವನ್ನು ದರೋಡೆ ಮಾಡಿ ಏಳು ಕೋಟಿ ರೂ. ಒಯ್ದು ಪರಾರಿಯಾಗಿರುವ ಪ್ರಕರಣದ ಮಾಸ್ಟರ್‌ ಮೈಂಡ್‌ ಎನ್ನಲಾದ ಪೊಲೀಸ್ ಕಾನ್ಸ್‌ಟೇಬಲ್‌ವೊಬ್ಬರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತಿರುಪತಿಯಲ್ಲಿ ಇಬ್ಬರನ್ನು ಬಂಧಿಸಿ ವಿಚಾರಣೆ