Menu

ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಕ್ವಾಂಟಮ್‌ ಟೆಕ್ನಾಲಜಿ ರೌಂಡ್‌ಟೇಬಲ್‌: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ನವೆಂಬರ್‌ 19 ರಂದು ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ “ಕ್ವಾಂಟಮ್‌ ಟೆಕ್ನಾಲಜಿ ರೌಂಡ್‌ ಟೇಬಲ್‌” ಆಯೋಜಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ನವೆಂಬರ್‌ 19 ರಂದು ಆಯೋಜಿಸಲಾಗಿರುವಂತಹ ಕ್ವಾಂಟಮ್‌ ರೌಂಡ್‌ಟೇಬಲ್‌ ನಲ್ಲಿ, ಕ್ವಾಂಟಮ್‌ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವಂತಹ ಪ್ರಮುಖ ಕಂಪನಿಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಐಟಿ&ಬಿಟಿ ಸಚಿವರಾದ ಪ್ರಿಯಾಂಕಾ ಖರ್ಗೆ, ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್‌, ಉನ್ನತ

ಬಳ್ಳಾರಿಯ 36 ಜೀನ್ಸ್ ಘಟಕಗಳಿಗೆ ಬೀಗ ಜಡಿದ ಜಿಲ್ಲಾಡಳಿತ!

ಜೀನ್ಸ್ ವಾಷಿಂಗ್ ಘಟಕಗಳಿಂದ ಪರಿಸರಕ್ಕೆ ಹಾನಿ ಆಗುತ್ತದೆ ಎಂಬ ವರದಿ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ಬಳ್ಳಾರಿಯ 36 ಘಟಕಗಳಿಗೆ ಬೀಗ ಜಡಿಯಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಬಳ್ಳಾರಿ

ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು: ಡಿಕೆ ಶಿವಕುಮಾರ್

“ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು.  ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ನಲ್ಲಿ ಬೆಂಗಳೂರು ಟೆಕ್ ಸಮಿಟ್ 2025 ‘ಫ್ಯೂಚರೈಸ್ ‘ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

ನಾಳೆ ಬೆಂಗಳೂರಿನ ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ

ನವೆಂಬರ್‌ 19 ಬುಧವಾರದಂದು ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಅಧಿಕೃತ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ರಾಜಾಜಿನಗರ, ವಿಜಯನಗರ, ಮಲ್ಲೇಶ್ವರಂ

ಮೇಕೆದಾಟು ಯೋಜನೆಗೆ ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕೇಂದ್ರದ ಜೊತೆಗೆ ವಿಶ್ವಾಸದಲ್ಲಿ ಸೌಹಾರ್ದತೆಯಲ್ಲಿ ಅನುಮತಿ ಪಡೆದರೆ ಮುಂದೆ ಕಾನೂನು ಹೋರಾಟದಲ್ಲಿ ಅನುಕೂಲವಾಗಲಿದೆ. ಇದರಲ್ಲಿ ರಾಜಕೀಯ ಬೆರೆಸಿದರೆ, ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ

ಪತಿಯ ಕಿರುಕುಳ: ಅರಕಲಗೂಡಿನಲ್ಲಿ ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಹಾಸನದ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತ ಮನನೊಂದ ಮಹಿಳೆ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾದೇವಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ

ಸಂಪನ್ಮೂಲ ಸಂರಕ್ಷಣೆಗೆ ಪುನರ್ ಬಳಕೆಗೆ ಒತ್ತು ಅಗತ್ಯ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು8: ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ನಗರದ ಖಾಸಗಿ ಹೊಟೆಲ್ ನಲ್ಲಿಂದು ನಡೆದ ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 14 ಕೋಟಿ ರೂ ಮೌಲ್ಯದ ಗಾಂಜಾ ವಶ

ಬೆಂಗಳೂರು ದೇವನಹಳ್ಳಿಯ ಕೆಂಪೇಗೌಡ ಏರ್​​ಪೋರ್ಟ್‌ನಲ್ಲಿ 14 ಕೋಟಿ ರೂ ಮೌಲ್ಯದ ಮಾದಕ ವಸ್ತುವನ್ನು ಕಸ್ಟಮ್ಸ್‌ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಕಳೆದ 18 ದಿನಗಳಲ್ಲಿ ನಡೆಸಿದ ತಪಾಸಣೆಯಲ್ಲಿ 14.22 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ, ಇ-ಸಿಗರೇಟ್ ವಶಪಡಿಸಿಕೊಂಡಿದ್ದು, ಪ್ರತ್ಯೇಕ

ಬೆಳಗಾವಿಯಲ್ಲಿ ಕೃಷ್ಣಮೃಗಗಳ ಸಾವು: ರಾಷ್ಟ್ರೀಯ ಸಂಸ್ಥೆ ಮೂರು ತಿಂಗಳ ಹಿಂದೆಯೇ ನೀಡಿತ್ತಾ ಎಚ್ಚರಿಕೆ

ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣ ಮೃಗಗಳ ಸಾವಿಗೆ ಸಂಬಂಧಿಸಿದಂತೆ ಮೂರು ತಿಂಗಳ ಮೊದಲೇ ಎಚ್ಚರಿಕೆ ಮಾಹಿತಿ ಲಭಿಸಿತ್ತು ಎಂಬ ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗಮಾಹಿತಿ ಸಂಸ್ಥೆಯಿಂದ ಮೂರು

ಗೌರಿಬಿದನೂರಿನಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕೊಲೆಗೈದ ಪತಿ

ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪಾವನಿ(30) ಕೊಲೆಯಾದ ಮಹಿಳೆ.  ಕೊಲೆ ಆರೋಪಿ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಐದು ವರ್ಷಗಳ ಹಿಂದೆ ಪಾವನಿ ಹಾಗೂ ರಾಘವೇಂದ್ರ ಮದುವೆಯಾಗಿದ್ದರು. ಇತ್ತೀಚೆಗೆ ರಾಘವೇಂದ್ರ