Featured
ಮೈಸೂರು: ಸಂಪಾದಿಸಿದ ಹಣವನ್ನೇ ಕೊಡದ ಪತ್ನಿ ಕೊಲೆಗೆ ಸುಪಾರಿ ನೀಡಿದ ಪತಿ!
ಗಂಡನೊಬ್ಬತಾನು ದುಡಿದು ಸಂಪಾದಿಸಿದ ಹಣವನ್ನು ಹೆಂಡತಿ ತನಗೆ ಕೊಡುತ್ತಿಲ್ಲವೆಂದು ಆಕೆಯನ್ನು ಕೊಲ್ಲಲು ಸುಪಾರಿ ನೀಡಿರುವ ಪ್ರಕರಣ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರು ಸಹಕರಿಸಿದ್ದು, ಮೇಟಗಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಡುತ್ತಿದ್ದ ಪತ್ನಿಯು ಮಹೇಶ್ಗೆ ಹಣ ನೀಡುತ್ತಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಮಹೇಶ್, ತನಗೆ
ರಾಯಚೂರಿನಲ್ಲಿ ಬೀದಿ ಬದಿ ವ್ಯಾಪಾರಿಯ ಹತ್ಯೆ
ರಾಯಚೂರು ನಗರದ ರೇಡಿಯೋ ಸ್ಟೇಷನ್ ಸಮೀಪ ನಾಲ್ವರು ದುಷ್ಕರ್ಮಿಗಳ ಗುಂಪು ಬೀದಿಬದಿ ವ್ಯಾಪಾರಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದೆ. ಹತ್ಯೆಯಾದ ಯುವಕನನ್ನು ಆಂಧ್ರಪ್ರದೇಶ ಕಡಪದ ಇಮಾಮ್ ಹುಸೇನ್ (24) ಎಂದು ಗುರುತಿಸಲಾಗಿದೆ. ಮೃತ ಇಮಾಮ್ ಹುಸೇನ್ 15 ದಿನಗಳಿಂದ ರಾಯಚೂರಿನ ಬೀದಿಬದಿಯಲ್ಲಿ
ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದೆ ಬೀಳಲು ಡೈರಿ ಚಟುವಟಿಕೆ ದುರ್ಬಲ ಕಾರಣ: ಸಿಎಂ ಸಿದ್ದರಾಮಯ್ಯ
ಈ ಬಾರಿ ಅಧಿವೇಶನ ಪ್ರಾರಂಭವಾಗಿ ಎರಡನೇ ದಿನದಿಂದಲೇ ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತಂತೆ ಚರ್ಚೆ ಆರಂಭಗೊಂಡಿದೆ. ಈ ಕಾರಣಕ್ಕಾಗಿ ವಿರೋಧ ಪಕ್ಷದವರೂ ಸರ್ಕಾರವನ್ನೂ ಹಾಗೂ ಸಭಾಧ್ಯಕ್ಷರನ್ನು ಅಭಿನಂದಿಸಿದ್ದಾರೆ. ನಾನೂ ಸಹ ಮಾನ್ಯ ಸಭಾಧ್ಯಕ್ಷರನ್ನು ಅಭಿನಂದಿಸುತ್ತೇನೆ. ಇದೊಂದು ದಾಖಲೆ. ನಾವು ಈ ಭಾಗದ
ನನಗೆ ಭ್ರಷ್ಟಾಚಾರದ ಪಿತಾಮಹ ಎಂದ ವಿಜಯೇಂದ್ರಗೆ ಕಾಲವೇ ಉತ್ತರಿಸಲಿದೆ: ಡಿಕೆ ಶಿವಕುಮಾರ್
“ವಿಜಯೇಂದ್ರ ಅವರಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡೋಣ. ಉತ್ತರಕ್ಕೆ ಸಮಯ ಬರುತ್ತದೆ, ಕಾಲವೇ ಉತ್ತರ ನೀಡುತ್ತದೆ. ಅವರಿಗೆ ಏನು ಬೇಕೋ ಆ ಉತ್ತರ ಈಗಾಗಲೇ ನೀಡಿದ್ದೇನೆ. ಹೈಕಮಾಂಡ್ ಗೆ ನಾವು ಎಟಿಎಂ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನು ಅವರು ಸಾಬೀತು ಮಾಡಬೇಕು.
ಚಿಕ್ಕಬಳ್ಳಾಪುರ: ಕಾರಲ್ಲಿ ಬಂದು ಕೆಎಸ್ಸಾರ್ಟಿಸಿ ಬಸ್ನಲ್ಲಿ ಉದ್ಯಮಿಯ 55 ಲಕ್ಷ ರೂ. ಇದ್ದ ಬ್ಯಾಗ್ ದರೋಡೆ
ಹೈದರಾಬಾದ್ನ ಉದ್ಯಮಿಯೊಬ್ಬರು ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿಕ್ಕಬಳ್ಳಾಪುರದಲ್ಲಿ 55 ಲಕ್ಷ ರೂಪಾಯಿ ಇದ್ದ ಅವರ ಹಣದ ಬ್ಯಾಗ್ ಅನ್ನು ಕಳ್ಳ ದೋಚಿಕೊಂಡು ಹೋಗಿದ್ದಾನೆ. ಉದ್ಯಮಿ ಬೆಂಗಳೂರಿನಲ್ಲಿ ಮನೆ ಮಾರಾಟ ಮಾಡಿದ್ದು, ಅದರಿಂದ ಬಂದ ಹಣವನ್ನು ಬಸ್ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಳ್ಳರು ಎಗರಿಸಿ
ಮುಂದಿನ ಜೂನ್ ಒಳಗೆ ತುಂಗಭದ್ರಾ ಡ್ಯಾಂನ ಎಲ್ಲ ಗೇಟ್ ಬದಲಾವಣೆ: ಡಿಕೆ ಶಿವಕುಮಾರ್
“2026ರ ಜೂನ್ ತಿಂಗಳ ವೇಳೆಗೆ ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಗೇಟ್ ಗಳನ್ನು ಬದಲಾವಣೆ ಕಾರ್ಯ ಪೂರ್ಣಗೊಳ್ಳಲಿದ್ದು, ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ವಿಧಾನ ಪರಿಷತ್
ಬಿಜೆಪಿ ವಿರೋಧದ ನಡುವೆಯೇ ದ್ವೇಷ ಭಾಷಣ ಅಪರಾಧಗಳ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಪ್ರತಿಪಕ್ಷ ಬಿಜೆಪಿ ಸದಸ್ಯರ ತೀವ್ರ ವಿರೋಧ ಮತ್ತು ಪ್ರತಿಭಟನೆ ಸಭಾತ್ಯಾಗದ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಕಲಾಪದಲ್ಲಿ ಅಂಗೀಕಾರಗೊಂಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಡನೆಯಾಗಿದ್ದ ವಿಧೇಯಕ ಕುರಿತು
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿಗೆ ದಿಲ್ಲಿ ಹೈಕೋರ್ಟ್ ಚಾಟಿ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಸೋನಿಯಾಗಾಂಧಿ ಮತ್ತು ರಾಹುಲ್ಗಾಂಧಿ ಅವರ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್ಶೀಟ್ ದಾಖಲಿಸುವ ವಿಚಾರದಲ್ಲಿ ಕಾನೂನು ಪ್ರಕ್ರಿಯೆಗೆ ಸಂಬಂಧಿಸಿದ ವಿಧಿ ವಿಧಾನಗಳನ್ನು (ಪ್ರೊಸೀಜರ್) ಗಾಳಿಗೆ ತೂರಿದೆ ಎಂಬುದನ್ನು ದೆಹಲಿ ಹೈಕೋರ್ಟ್ ಪರೋಕ್ಷವಾಗಿ ಎತ್ತಿ ತೋರಿದೆ.
ಬೆಂಗಳೂರು-ಮೈಸೂರು ಕಾರಿಡಾರ್ ಯೋಜನೆಯಲ್ಲಿ ಬದಲಾವಣೆ ಸಾಧ್ಯವಿಲ್ಲ: ಡಿಕೆ ಶಿವಕುಮಾರ್
ಬೆಳಗಾವಿ: ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಜಲಸಂಪನ್ಮೂಲ
ಸರಕಾರಿ ಕನ್ನಡ ಶಾಲೆ ಮುಚ್ಚಲ್ಲ, 11 ಸಾವಿರ ಶಿಕ್ಷಕರ ನೇಮಕ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ
ಬೆಳಗಾವಿ: ರಾಜ್ಯದಲ್ಲಿ ಯಾವುದೇ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗುರುವಾರ ವಿಧಾನಸಭೆಯಲ್ಲಿ ಶಾಸಕ ಶರಣು ಸಲಗರ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದರು. ಸರಕಾರಿ




