Featured
Accident deaths- ದಕ್ಷಿಣಕನ್ನಡದಲ್ಲಿ ರಸ್ತೆ ಅಪಘಾತಕ್ಕೆ ಐವರು ಬಲಿ
ದಕ್ಷಿಣ ಕನ್ನಡದ ತಲಪಾಡಿ ಟೋಲ್ ಗೇಟ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್‌ನ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎಂದು ಹೇಳಲಾಗಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಬಸ್ಸು ಕಾಸರಗೋಡಿನಿಂದ ಮಂಗಳೂರು ಬಸ್ ನಿಲ್ದಾಣಕ್ಕೆ ಬರುತ್ತಿತ್ತು. ಮಂಜೇಶ್ವರ ಠಾಣೆಯಲ್ಲಿ
ಭೀಕರ ಮಳೆ, ಭೂಕುಸಿತ: ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮೃತರ ಸಂಖ್ಯೆ 35ಕ್ಕೆ ಏರಿಕೆ
ಜಮ್ಮುವಿನಲ್ಲಿ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಭೂ ಕುಸಿತವಾಗಿದ್ದು, ಕತ್ರಾ ಜಿಲ್ಲೆಯಲ್ಲಿರುವ ವೈಷ್ಣೋದೇವಿ ಯಾತ್ರಾ ರಸ್ತೆ ಮಾರ್ಗದಲ್ಲಿ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಕತ್ರಾದ ಅರ್ಧಕುವರಿ ಸಮೀಪ ಅವಶೇಷಗಳಿಂದ ಮೂವತ್ತೈದು ಮೃತದೇಹಗಳನ್ನು ಈವರೆಗೆ ಹೊರತೆಗೆಯಲಾಗಿದೆ ಎಂದು ವೈಷ್ಣೋದೇವಿ ದೇವಾಲಯ ಮಂಡಳಿಯ
97 ಲಕ್ಷ ರೂ. ಸಮೇತ ಚಾಲಕ ಪರಾರಿ: ಕೆಲವೇ ಗಂಟೆಗಳಲ್ಲಿ ಬಂಧಿಸಿದ ಚಳ್ಳಕೆರೆ ಪೊಲೀಸ್
ಬಾಡಿಗೆ ಕಾರು ಚಾಲಕನೊಬ್ಬ ಸಿಬಿಐ ನಿವೃತ್ತ ಎಸ್ಪಿಯನ್ನು ಯಾಮಾರಿಸಿ 97 ಲಕ್ಷ ರೂ. ಸಮೇತ ಪರಾರಿಯಾಗಿದ್ದು, ಕೆಲವೇ ಗಂಟೆಯಲ್ಲಿ ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನವರರಾದ ಸಿಬಿಐನ ನಿವೃತ್ತ ಎಸ್ಪಿ ಗುರುಪ್ರಸಾದ್ ಪತ್ನಿ ಲಲಿತಾ ಜತೆ ಬಾಡಿಗೆ ಕಾರಿನಲ್ಲಿ ಬಳ್ಳಾರಿಗೆ ಹೋಗಿ ಜಮೀನು
Suicide death- ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ: ಪತಿ ಅರೆಸ್ಟ್
ಬೆಂಗಳೂರಿನ ಎಸ್‍ಜಿ.ಪಾಳ್ಯದಲ್ಲಿ ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡವರು. ಶಿಲ್ಪಾ ಅವರು ಪ್ರವೀಣ್ ಎಂಬಾತನನ್ನು ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಈ ದಂಪತಿಗೆ ಒಂದೂವರೆ ವರ್ಷದ ಮಗುವಿದೆ. ಶಿಲ್ಪಾಳನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಪ್ರವೀಣ್ ಬಿಂಬಿಸುತ್ತಿದ್ದಾನೆ ಎಂದು
Suicide death- ಬೀದರ್ ಸಾರಿಗೆ ಸಂಸ್ಥೆ ಬಸ್‌ನಲ್ಲೇ ಚಾಲಕ ಆತ್ಮಹತ್ಯೆ: ಮ್ಯಾನೇಜರ್ ಕಿರುಕುಳ ಕಾರಣವೆಂದ ಕುಟುಂಬ
ರಾಜ್ಯ ಸಾರಿಗೆ ಸಂಸ್ಥೆಯ ಬೀದರ್ ಡಿಪೋ ನಂ.1ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಚಾಲಕರೊಬ್ಬರು ಮ್ಯಾನೇಜರ್ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಣದೂರು ಗ್ರಾಮದ ನಿವಾಸಿ ರಾಜಪ್ಪ (59) ಬಳ್ಳಾರಿ–ಬೀದರ್ ಮಾರ್ಗದ ಸ್ಲಿಪರ್ ಕೋಚ್ ಬಸ್‌ನಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಕರ್ತವ್ಯ ನಿರ್ವಹಿಸುತ್ತಿದ್ದ
ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿಕೆ ಶಿವಕುಮಾರ್
“ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ದಸರಾ ಉದ್ಘಾಟಕರ ಆಯ್ಕೆ ವಿಚಾರವಾಗಿ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ಅವರ ಸಾಮಾಜಿಕ ಜಾಲತಾಣದಲ್ಲಿನ
41 ದಿನ ಐದು ದೇಶ ಸುತ್ತಿ ಸಿಐಡಿಗೆ ಲಾಕ್ ಆದ ಬಿಕ್ಲ ಶಿವ ಕೊಲೆ ಆರೋಪಿ ಜಗ್ಗ
ರೌಡಿಶೀಟರ್ ಬಿಕ್ಲ ಶಿವ ಕೊಲೆ ಆರೋಪಿ ಜಗದೀಶ್ ಅಲಿಯಾಸ್ ಜಗ್ಗ ಎಂಬಾತನನ್ನು ದೆಹಲಿಯ ಏರ್ ಪೋರ್ಟ್‌ನಲ್ಲಿ ಸಿಐಡಿ ತಂಡ ಬಂಧಿಸಿದೆ. ಕೊಲೆ ಬಳಿಕ ಆರೋಪಿ ಜಗದೀಶ್ 41 ದಿನ ಐದು ದೇಶ ಸುತ್ತಿ ಬಂದ ಬಳಿಕ ಸಿಐಡಿಯಿಂದ ಸೆರೆಯಾಗಿದ್ದಾನೆ. ಜುಲೈ 15
ಶಹಾಪುರ ವಸತಿ ಶಾಲೆ ಶೌಚಾಲಯದಲ್ಲೇ ವಿದ್ಯಾರ್ಥಿನಿ ಹೆರಿಗೆ
ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಸರ್ಕಾರಿ ವಸತಿ ಶಾಲೆಯ ಶೌಚಾಲಯದಲ್ಲೇ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದು, ವ್ಯವಸ್ಥೆಗೆ ಸಂಬಂಧಿಸಿದಂತೆ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ವಿಷಯ ತಿಳಿದು ಆತಂಕಗೊಂಡ ಮಕ್ಕಳ ಪೋಷಕರು ವಸತಿ ಶಾಲೆಯ ಬಳಿ ಸೇರಿದ್ದಾರೆ. ವಿದ್ಯಾರ್ಥಿನಿ ಗರ್ಭಿಣಿ ಎನ್ನುವ ವಿಚಾರವನ್ನು
ನೆಲಮಂಗಲದಲ್ಲಿ ರೈಲು ಡಿಕ್ಕಿಯಾಗಿ ಬಾಲಕ ಸಾವು
ನೆಲಮಂಗಲ ತಾಲೂಕಿನ ಅಲ್ಪಯ್ಯನಪಾಳ್ಯದಲ್ಲಿ ಹಳಿ ದಾಟುವ ವೇಳೆ ತಂದೆ-ಮಗನಿಗೆ ರೈಲು ಡಿಕ್ಕಿಯಾಗಿದ್ದು, ಬಿಹಾರ ಮೂಲದ ಸೌರವ್(8) ಮೃತಪಟ್ಟಿದ್ದಾನೆ. ಆತನ ತಂದೆ ನಿತಿನ್(40) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಬಸ್ ಪೇಟೆಯಿಂದ ಅಲ್ಪಯ್ಯನಪಾಳ್ಯಕ್ಕೆ ತೆರಳುವಾಗ ಈ ದುರಂತ ನಡೆದಿದೆ. ಯಶವಂತಪುರ ರೈಲ್ವೆ
Accident Deaths: ಹಿರೇಬಾಗೇವಾಡಿಯಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ
ಬೆಳಗಾವಿ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳ ಮಠದ ಘಾಟ್‌ನಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಿಂದ ಪುಣೆಗೆ ಸಂಚರಿಸುತ್ತಿದ್ದ ಬಸ್ ಚಾಲಕನ ಅಜಾಗರೂಕತೆಯಿಂದಾಗಿ ಈ ದುರಂತ ನಡೆದಿದೆ ಎನ್ನಲಾಗಿದೆ. ಬಸ್‌ನಲ್ಲಿ 12 ಪ್ರಯಾಣಿಕರಿದ್ದರು. ದುರ್ಘಟನೆಯಲ್ಲಿ ಮಹಿಳೆ