Menu

ನವ ಕಲಬುರಗಿ ನಿರ್ಮಾಣಕ್ಕೆ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಜಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಪ್ರೌಢಶಾಲೆಯಲ್ಲಿ ನಡೆದ 70 ನೆಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು. ಕಲಬುರಗಿ ಜಿಲ್ಲೆಯಲ್ಲಿ ನವೋದ್ಯಮಕ್ಕೆ ಉತ್ತೇಜನ, ಪ್ರವಾಸೋದ್ಯಮ ಅಭಿವೃದ್ದಿ, ಯುವ ಸಬಲೀಕರಣ, ಶೈಕ್ಷಣಿಕ ಹಾಗೂ

ಆರ್. ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆ ಶಿವಕುಮಾರ್

ಬೆಂಗಳೂರು: ಟನಲ್ ರಸ್ತೆ ವಿಚಾರವಾಗಿ ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ ಬಾಗ್ ಬಳಿ ಪ್ರವೇಶ- ನಿರ್ಗಮನ ತಾಣ ರೂಪಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮುಂಬೈ ಆಸ್ಪತ್ರೆಗೆ ನಟ ಧರ್ಮೆಂದ್ರ ದಾಖಲು

ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ಮುಂಬೈನ ಖಾಸಗಿ ಆಸ್ಪತ್ರೆಗೆ ಶುಕ್ರವಾದ ದಾಖಲಿಸಲಾಗಿದೆ. ಡಿಸೆಂಬರ್ 8ಕ್ಕೆ 90ನೇ ವಸಂತಕ್ಕೆ ಕಾಲಿಡಲಿರುವ ಧರ್ಮೆಂದ್ರ ಅವರನ್ನು ಸಹಜ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, 4-5 ದಿನ ಆಸ್ಪತ್ರೆಯಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ಏಪ್ರಿಲ್

ಆಂಧ್ರಪ್ರದೇಶ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ 9 ಭಕ್ತರು ಬಲಿ

ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಮೃತಪಟ್ಟಿದ್ದಾರೆ. ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದು,

ಸಹಾಯ ನೆಪದಲ್ಲಿ ಮಹಿಳೆ ಮೇಲೆ ದೌರ್ಜನ್ಯ: ಪ್ರೊ. ಬಿಸಿ ಮೈಲಾರಪ್ಪ ಅರೆಸ್ಟ್

ಗಂಡನನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಹಲ್ಲೆ ನಡೆಸಿದ ಆರೋಪ ಮೇಲೆ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ.ಮೈಲಾರಪ್ಪ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬಸವೇಶ್ವರ ನಗರ ಠಾಣೆ ಪೊಲೀಸರು 37 ವರ್ಷದ ಮಹಿಳೆ ನೀಡಿದ

ದೇಶದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ವಲ್ಲಭಭಾಯಿ ಪಟೇಲರು ಅಗ್ರಗಣ್ಯರು: ಸಿದ್ದರಾಮಯ್ಯ

ಬೆಂಗಳೂರು: ಇಂದಿರಾ ಗಾಂಧಿಯವರು ಹುತಾತ್ಮರಾಗಿ ಅವರ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರ

ಅಭಿಷೇಕ್ ಹೋರಾಟ ವ್ಯರ್ಥ: ಭಾರತಕ್ಕೆ 4 ವಿಕೆಟ್ ಸೋಲುಣಿಸಿದ ಆಸ್ಟ್ರೇಲಿಯಾ

ಆರಂಭಿಕ ಅಭಿಷೇಕ್ ಶರ್ಮ ಅರ್ಧಶತಕದ ಹೊರತಾಗಿಯೂ ಅಲ್ಪ ಮೊತ್ತಕ್ಕೆ ಕುಸಿದ ಭಾರತ ತಂಡ 4 ವಿಕೆಟ್ ಗಳಿಂದ ಸೋಲುಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ 5 ಪಂದ್ಯಗಳ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್

ಬಿಹಾರದಲ್ಲಿ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ: ಭರಪೂರ ಭರವಸೆಗಳು

ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಎನ್​ಡಿಎ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಡುಗಡೆ ಮಾಡಿದ್ದಾರೆ. ಎನ್‌ಡಿಎ ಪ್ರಣಾಳಿಕೆಯಲ್ಲಿ ಮತದಾರರಿಗೆ ಭರಪೂರ ಭರವಸೆಗಳನ್ನು ನೀಡಲಾಗಿದೆ. ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು

ಅಲೆಮಾರಿ ಸಮುದಾಯಕ್ಕೆ ಶೇ 1ರಷ್ಟು ಮೀಸಲು ಬೇಡಿಕೆಗೆ ಸರ್ಕಾರ ಬದ್ಧವೆಂದ ಸಿಎಂ 

” ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ 

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆ: ಆನ್ ಲೈನ್ ನಲ್ಲಿ ಸ್ವಯಂ ನೋಂದಣಿಗೆ ಅವಕಾಶ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಆನ್ ಲೈನ್ ಮೂಲಕ ನೋಂದಣಿಗೆ ಅವಧಿ ವಿಸ್ತರಣೆ, ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ