Menu

ಹಣೆಯಲ್ಲಿ ಬರೆದಿದ್ದರೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಡಿಕೆ ಸುರೇಶ್

“ನಮ್ಮ ಸಹೋದರ ಡಿಕೆಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು” ಎಂದು ಬಮೂಲ್ ಅಧ್ಯಕ್ಷ, ನಿಕಟಪೂರ್ವ ಸಂಸದ ಡಿಕೆ ಸುರೇಶ್  ಹೇಳಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಸಹೋದರನ ರಾಜಕೀಯ ಭವಿಷ್ಯ ಬದಲಾಗಲಿದೆ ಹಾಗೂ ಅಣ್ಣನನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡುವ ಆಸೆಯಿದೆ ಎನ್ನುವ ಹಿಂದಿನ ಹೇಳಿಕೆ ಬಗ್ಗೆ ಕೇಳಿದಾಗ, “ಆಸೆಯಿದೆ ಎಂದು ಹೇಳಿದ್ದೆ. ಅವರ ಹಣೆಯಲ್ಲಿ ‌ಬರೆದಿದ್ದರೆ ಅದು ಆಗುತ್ತದೆ, ಇಲ್ಲದಿದ್ದರೆ ಇಲ್ಲ.

ಬೆಂಗಳೂರಿನಲ್ಲಿ ಕಾರ್‌ ಮಿರರ್‌ಗೆ ಬೈಕ್‌ ಟಚ್‌: ಯುವಕನ ಬೆನ್ನಟ್ಟಿ ಕೊಂದ ದಂಪತಿ

ಕಾರಿನ ಸೈಡ್ ಮಿರರ್‌ಗೆ ಬೈಕ್ ಟಚ್ ಆಗಿದ್ದಕ್ಕೆ ಕೋಪಗೊಂಡ ದಂಪತಿ ಬೈಕ್ ಸವಾರನನ್ನು ಎರಡು ಕಿ.ಮೀವರೆಗೆ ಬೆನ್ನಟ್ಟಿ ಕಾರಿನಿಂದ ಗುದ್ದಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.  ಮನೋಜ್ ಕುಮಾರ್

ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನ: ಬಸವರಾಜ ಬೊಮ್ಮಾಯಿ

ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ

ಜೈಲಿನಲ್ಲಿ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ದಿಂಬು ಇಲ್ಲವೆಂದ ಕೋರ್ಟ್‌

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಸಲ್ಲಿಸಿದ್ದ ಮನವಿಯನ್ನು ಕೋರ್ಟ್‌ ನಿರಾಕರಿಸಿದೆ. ಜೈಲಿನ ಕೈಪಿಡಿ ಪ್ರಕಾರ ಸವಲತ್ತುಗಳನ್ನು ಮಾತ್ರ ನೀಡಲಾಗುತ್ತದೆ. ತಿಂಗಳಿಗೆ ಒಂದು ಬಾರಿ ಚಾದರ್ ಮತ್ತು

ಜಿಮೇಲ್ ಬಳಕೆದಾರರು ಪಾಸ್‌ವರ್ಡ್‌ ಬದಲಿಸಿ: ಸೈಬರ್ ಸೆಕ್ಯುರಿಟಿ ತಜ್ಞರ ಎಚ್ಚರಿಕೆ

18 ಕೋಟಿ 30 ಲಕ್ಷ ಜಿಮೇಲ್ ಖಾತೆಗಳ ಪಾಸ್‌ವರ್ಡ್‌ಗಳನ್ನು ಸೈಬರ್ ಕ್ರಿಮಿನಲ್‌ಗಳು ಕಳವು ಮಾಡಿದ್ದಾರೆ.  ಜಿಮೇಲ್ ಬಳಕೆದಾರರ ವೈಯಕ್ತಿಕ ಮಾಹಿತಿಗಳು, ಫೋಟೋಗಳು, ವೀಡಿಯೊಗಳು, ಬ್ಯಾಂಕ್ ವಿವರಗಳು ಮತ್ತು ಇತರ ಖಾಸಗಿ ಡೇಟಾ ಅಪಾಯದಲ್ಲಿದೆ ಎಂದು ಸೈಬರ್‌ ಸೆಕ್ಯುರಿಟಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. 

ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿಗೆ 30 ಮಂದಿ ಬಲಿ

ಗಾಜಾ ಮತ್ತು ಇಸ್ರೇಲ್‌ ಪರಸ್ಪರ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಇಸ್ರೇಲ್‌ ಗಾಜಾ ಪಟ್ಟಿ ಪ್ರದೇಶದ ಮೇಲೆ ವೈಮಾನಿಕ ದಾಳಿ ಪ್ರಾರಂಭಿಸಿದೆ. ಕದನ ವಿರಾಮದ ನಡುವೆಯೂ ಇಸ್ರೇಲ್ ಗಾಜಾದಲ್ಲಿ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಕನಿಷ್ಠ 30 ಮಂದಿ ಪ್ರಾಣ ಕಳೆದುಕೊಂಡಿದ್ದಾರೆಂದು ಗಾಜಾದ ನಾಗರಿಕ

ನೆಲಮಂಗಲ: ಪಿಡಿಒ ಕಿರುಕುಳಕ್ಕೆ ನೊಂದ ಲೈಬ್ರೆರಿಯನ್ ಆತ್ಮಹತ್ಯೆ

ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳದಿಂದ ಬೇಸತ್ತ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯತ್‌ ಲೈಬ್ರೆರಿಯನ್ ಆಗಿದ್ದ ರಾಮಚಂದ್ರಯ್ಯ ಆತ್ಮಹತ್ಯೆ ಮಾಡಿಕೊಂಡವರು, ಇವರು 25 ವರ್ಷದಿಂದ ಅರೆಕಾಲಿಕ ಗ್ರಂಥಾಲಯ

ಆರೆಸ್ಸೆಸ್‌ಗೆ ನಿರ್ಬಂಧ: ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು ಎಂದ ಆರ್‌ ಅಶೋಕ

RSS ಪಥಸಂಚನಲಕ್ಕೆ ಅವಕಾಶ ನೀಡದಿರುವ @INCKarnataka ಸರ್ಕಾರದ ನಿರಂಕುಶವಾದಿ ನಡೆಗೆ  ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಈ ಮೂಲಕ ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು  ನೀಡಿದೆ ಎಂದು ಪ್ರತಿಪಕ್ಷ ನಾಯಕ

ವಿಜಯಪುರ ರಸ್ತೆ ಬದಿ ಯುವಕನ ಶವ ಪತ್ತೆ

ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ತಾರಾಪೂರ ಗ್ರಾಮದ ಬಳಿ ರಸ್ತೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸಂತೋಷ ಬಿರಾದಾರ (36) ಶವವಾಗಿ ಪತ್ತೆಯಾಗಿರುವ ಯುವಕ. ತಾರಾಪೂರ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಸಂತೋಷ ಬೈಕ್ ಮೇಲಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ, ತಲೆಗೆ ಏಟು