Menu

ಡಿಕೆ ಶಿವಕುಮಾರ್ ದಾರಿ ತಪ್ಪಿದ ಮಗ, ಪಂಗನಾಮ ಪಕ್ಕಾ ಎಂದ ಆರ್‌. ಅಶೋಕ

ಡಿಸಿಎಂ ಡಿಕೆ ಶಿವಕುಮಾರ್ ದಾರಿ ತಪ್ಪಿದ ಮಗ. ಅವರು ಚಾಮುಂಡಿ, ಮಾರಮ್ಮ, ಗೌರಮ್ಮ, ರಾಘವೇಂದ್ರ ಸ್ವಾಮಿ ಎಂದು ಟೆಂಪಲ್ ರನ್ ಮಾಡುವುದರಿಂದ ಪ್ರಯೋಜನವಿಲ್ಲ. ಇಟಲಿ ಟೆಂಪಲ್ ಸುತ್ತಬೇಕು. ಅಲ್ಲಿ ಸರಿಯಾದ ಕಪ್ಪ ಕಾಣಿಕೆ ಕೊಟ್ಟು, ಪ್ರದಕ್ಷಿಣೆ ಹಾಕಿದರೆ ಮಾತ್ರ ಮುಖ್ಯಮಂತ್ರಿ ಆಗುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ವ್ಯಂಗ್ಯವಾಡಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಮಗ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ನವೆಂಬರ್ ಕ್ರಾಂತಿ ಹೇಳಿಕೆಗೆ ಪ್ರತಿಕ್ರಿಯಿಸಿ, ಯತೀಂದ್ರ

ನವೆಂಬರ್‌ನಿಂದ ದೇಶಾದ್ಯಂತ ಚುನಾವಣಾ ಪಟ್ಟಿ ವಿಶೇಷ ಪರಿಷ್ಕರಣೆ

ಚುನಾವಣಾ ಆಯೋಗವು ನವೆಂಬರ್ ಆರಂಭದಿಂದ ಹಂತ ಹಂತವಾಗಿ ದೇಶಾದ್ಯಂತ ಚುನಾವಣಾ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR ) ನಡೆಸಲಿದೆ. 2026 ರಲ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಮೊದಲು ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. ಈ ಸಂಬಂಧ ದೇಶದ ಎಲ್ಲಾ ರಾಜ್ಯಗಳು ಮತ್ತು

ಖಾದ್ಯ ತೈಲ ಘಟಕ: ಪಾಲುದಾರರ ನೋಂದಣಿ ಕಡ್ಡಾಯವೆಂದ ಸಚಿವ ಪ್ರಲ್ಹಾದ್ ಜೋಶಿ

ಖಾದ್ಯ ತೈಲ ತಯಾರಕರು, ಸಂಸ್ಕರಣಾ ಘಟಕಗಳು, ಮಿಶ್ರಣಕಾರರು, ಮರು-ಪ್ಯಾಕರ್‌ಗಳು ಮತ್ತಿತರ ಪಾಲುದಾರರ ನೋಂದಣಿ ಕಡ್ಡಾಯವಾಗಿದೆ. ಆನ್‌ಲೈನ್ ಪೋರ್ಟಲ್ ಮೂಲಕ ಮಾಸಿಕ ಉತ್ಪಾದನೆ ಮತ್ತು ಸ್ಟಾಕ್ ರಿಟರ್ನ್‌ ಸಲ್ಲಿಕೆ ಕೂಡ ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್

ಹೀಗೆಲ್ಲ ತನಿಖೆಯಾಗುವುದು ಗೊತ್ತಿದ್ದರೆ ಕೃತಿಕಾಳ ಕೊಲೆ ಮಾಡುತ್ತಿರಲಿಲ್ಲವೆಂದ ಪತಿ ಡಾ. ಮಹೇಂದ್ರ ರೆಡ್ಡಿ

ಅನಸ್ತೇಷಿಯಾ ಕೊಟ್ಟು ಸಾಯಿಸಿದರೆ ಸಾವಿನ ನಿಖರ ಕಾರಣ ಪೊಲೀಸರ ತನಿಖೆಯಲ್ಲಿ ಗೊತ್ತಾಗುವುದಿಲ್ಲ ಎಂದು ಭಾವಿಸಿದ್ದೆ. ಪೊಲೀಸರು ಇಷ್ಟು ಟೆಕ್ನಿಕಲ್ ಆಗಿ ಮತ್ತು ಆಳವಾಗಿ ತನಿಖೆ ನಡೆಸುತ್ತಾರೆ ಎಂದು ಗೊತ್ತಿರಲಿಲ್ಲ. ಹೀಗೆ ತನಿಖೆಯಾಗುತ್ತದೆ ಎಂದು ತಿಳಿದಿದ್ದರೆ ಕೊಲೆಯೇ ಮಾಡುತ್ತಿರಲಿಲ್ಲ ಎಂದು ವೈದ್ಯೆ ಕೃತಿಕಾ

ಮೈಸೂರು ರೈಲು ನಿಲ್ದಾಣದಲ್ಲಿ ಮಗು ಅಪಹರಣ: ರಕ್ಷಿಸಿದ ಪೊಲೀಸ್‌

ಮೈಸೂರು ರೈಲು ನಿಲ್ದಾಣದಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಅಪಹರಣ ಮಾಡಲು ವೃದ್ಧ ಮಹಿಳೆಯೊಬ್ಬರು ಯತ್ನಿಸಿ ಪೊಲೀಸ್‌ ಕೈಗೆ ಸಿಕ್ಕಿ ಬಿದ್ದಿದ್ದಾರೆ, ಮಗುವನ್ನು ಕೂಡ ಪೊಲೀಸರು ಸುರಕ್ಷಿತವಾಗಿ ಕುಟುಂಬಕ್ಕೆ ಒಪ್ಪಿಸಿದ್ದಾರೆ. 50 ವರ್ಷದ ಆರೋಪಿ ವೃದ್ಧೆಯನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪೊಲೀಸರು

ಸರ್ಕಾರಿ ಆಸ್ಪತ್ರೆ ವಿರುದ್ಧ ದೂರಿತ್ತ ಕೆಆರ್‌ಎಸ್‌ ಪಕ್ಷದ ಸದಸ್ಯನಿಗೆ ಜೀವ ಬೆದರಿಕೆ, ಕೇಸ್ ದಾಖಲು

ಬೀದರ್‌ನ ಸರ್ಕಾರಿ ಆಸ್ಪತ್ರೆಯೊಂದರ ಬಗ್ಗೆ ದೂರು ನೀಡಿದ KRS ಪಕ್ಷದ ಸದಸ್ಯನಿಗೆ ಜೀವ ಬೆದರಿಕೆ ಬಂದಿದ್ದು, ಪ್ರಕರಣ ದಾಖಲಾಗಿದೆ. ಧನ್ನೂರ (ಕೆ) ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಅಶ್ವಿನಿ ವಿರುದ್ಧ ದೂರು ನೀಡಿದ್ದಕ್ಕೆ ಅವರ ತಾಯಿಯಿಂದ ಬೆದರಿಕೆ ಬಂದಿರುವುದಾಗಿ ಸಂಗಮೇಶ್ ಬಿರದಾರ

ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ, ಹತ್ಯೆ ಗ್ಯಾಂಗ್‌: ಮೂವರು ಪೊಲೀಸ್‌ ವಶ

ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದ ಗ್ಯಾಂಗ್‌ವೊಂದನ್ನು ಬಯಲಿಗೆಳೆದಿರುವ ಆರೋಗ್ಯ ಇಲಾಖೆ‌ ಅಧಿಕಾರಿಗಳು ಮಹಿಳೆ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬನ್ನೂರಿನ ಪ್ರತಿಷ್ಠಿತ ನರ್ಸಿಂಗ್ ಹೋಂ ಈ ಗ್ಯಾಂಗ್‌ ಜೊತೆ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ವರುಣ ಪೊಲೀಸ್ ಠಾಣೆಯಲ್ಲಿ

ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ: ಬಿಜೆಪಿಯವರಿಗೆ ಡಿಕೆ ಶಿವಕುಮಾರ್ ಸವಾಲು

ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ ಎಂದು ಡಿಸಿಎಂ ಡಿಕೆ ಶಿವಕುಮಾರ್  ಸವಾಲೆಸೆದರು.

ನಮ್ಮ ಮೆಟ್ರೊದಲ್ಲಿ ಶೇ.87 ರಾಜ್ಯದ ಹಣವಿದ್ದರೂ, ಕೇಂದ್ರದ ಯೋಜನೆಯೆಂದು ಬಿಜೆಪಿಯಿಂದ ಸುಳ್ಳು ಪ್ರಚಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ಈ ನಗರದ ಜನಸಂಖ್ಯೆ ಹೆಚ್ಚುತ್ತಿದ್ದು ಈ ಸವಾಲಿನ ಜೊತೆಗೇ ಬೆಂಗಳೂರಿನ‌ ರಸ್ತಡಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ. ಬೆಂಗಳೂರಿನ ಮೆಟ್ರೋಗೆ ಶೇ87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ87

ಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ: ಡಿಕೆ ಶಿವಕುಮಾರ್ ತಿರುಗೇಟು

ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಪಾರ್ಟಿ ಏನು ಹೇಳುತ್ತದೆಯೋ ಅದರಂತೆ ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತಿವಿ ಎಂಬ ಮಾತಿಗೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.