Menu

ಆಂಧ್ರಪ್ರದೇಶದ ಪಟಾಕಿ ತಯಾರಿ ಘಟಕದಲ್ಲಿ ಸ್ಫೋಟ: ಬೆಂಕಿಗೆ ಆರು ಕಾರ್ಮಿಕರು ಬಲಿ

ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ಪಟಾಕಿ ತಯಾರಿಕೆ ಘಟಕವೊಂದರಲ್ಲಿ ಬೃಹತ್‌ ಸ್ಫೋಟ ಸಂಭವಿಸಿ ಆರು ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ರಾಯವರಂ ಮಂಡಲದ ರಾಯವರಂ ಲಕ್ಷ್ಮಿ ಗಣಪತಿ ಪಟಾಕಿ ತಯಾರಿಕೆ ಕೇಂದ್ರದಲ್ಲಿ ಪಟಾಕಿ ತಯಾರಿಸುತ್ತಿದ್ದಾಗ ಈ ಅಗ್ನಿ ದುರಂತ ಸಂಭವಿಸಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ

ಹೊನ್ನಾಳಿಯಲ್ಲಿ ಬಾಯ್ಲರ್‌ ಸ್ಫೋಟ: ಬಾಲಕಿ ಸಾವು

ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಉತ್ತರ ಭಾಗದಲ್ಲಿ ಮನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 11 ವರ್ಷದ ಬಾಲಕಿ ಮೃತಪಟ್ಟಿದ್ದು, ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಸ್ವೀಕೃತಿ ಮೃತ ಬಾಲಕಿ, ತೀರ್ಥಿಬಾಯಿ, ಹೂವಾ ನಾಯ್ಕ್, ಸುನೀತಾ ಬಾಯಿ ಗಂಭೀರವಾಗಿ ಗಾಯಗೊಂಡವರು. ಮನೆಯಲ್ಲಿ ಬೆಳಗ್ಗೆ ಬಾಯ್ಲರ್ ಆನ್

ಬೆಂಗಳೂರು ಪೊಲೀಸರಿಂದ 23 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು ಸಿಟಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 23 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ. ಸಿಟಿ ಪೊಲೀಸರು  ಮತ್ತು ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸೇರಿ ಒಟ್ಟು ಆರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಅವರಲ್ಲಿ

ಅರಣ್ಯ ಉಳಿದರೆ ಭೂಮಿ ಉಳಿಯುತ್ತದೆ, ಪ್ರಾಣಿ ಹಂತಕರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ

ಕುವೈತ್‌ ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ

ಕುವೈತ್‌ ಡಿಫೆನ್ಸ್ ಆಸ್ಪತ್ರೆಯಲ್ಲಿ ಉತ್ತಮ ಸಂಬಳದ ಉದ್ಯೋಗವಿದೆ ಎಂದು ನಂಬಿಸಿ 30 ಯುವಕರಿಂದ 52 ಲಕ್ಷ ರೂಪಾಯಿ  ಪಡೆದು ತಂಡವೊಂದು ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬಹಿರಂಗಗೊಂಡಿದೆ. ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ

ಸಿಜೆಐ ಮೇಲೆ ಷೂ ಎಸೆತ: ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದು ಸಲ್ಲದು ಎಂದ ಡಿಸಿಎಂ

ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿಕೆಶಿವಕುಮಾರ್  ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ

ಇನ್ಮುಂದೆ ರೈಲು ಟಿಕೆಟ್‌ ದಿನಾಂಕ ಬದಲಾವಣೆಗೆ ಅವಕಾಶ

ರೈಲು ಪ್ರಯಾಣಿಕರು ರೈಲು ಟಿಕೆಟ್‌ ಬುಕ್‌ ಮಾಡಿದ್ದರೆ ಇನ್ಮುಂದೆ ದಿನಾಂಕ ಬದಲಾವಣೆ ಮಾಡಲು ಸಾಧ್ಯವಾಗಲಿದೆ. ಬುಕ್ ಆದ ಟಿಕೆಟ್‌ನ ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಒಮ್ಮೆ ರೈಲ್ವೆ ಟಿಕೆಟ್ ಬುಕ್

ಸಹಕರಿಸಿದರೆ ಫುಲ್ ಮಾರ್ಕ್ಸ್ ಕೊಡ್ತೀನಿ: ಮನೆಗೆ ಕರೆದು ವಿದ್ಯಾರ್ಥಿನಿಗೆ ಕಿರುಕುಳವಿತ್ತ ಹೆಚ್‌ಒಡಿ ಅರೆಸ್ಟ್‌

ಬೆಂಗಳೂರಿನ ತಿಲಕ್‌ ನಗರದಲ್ಲಿ ಮನೆಗೆ ಊಟಕ್ಕೆ ಕರೆದು ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿಯಾಗಿರುವ ಖಾಸಗಿ ಕಾಲೇಜಿನ ವಿಭಾಗವೊಂದರ ಮುಖ್ಯಸ್ಥನನ್ನು ಪೊಲೀಸರು ಬಂಧಿಸಿದ್ದಾರೆ. ಸಂಜೀವ್ ಕುಮಾರ್ ಮಂಡಲ್‌ ಬಂಧಿತ. ಆತ ಖಾಸಗಿ ಕಾಲೇಜಿನ ಹೆಡ್ ಆಫ್ ಡಿಪಾರ್ಟ್‌ಮೆಂಟ್.

ಕೆಆರ್‌ಪೇಟೆ ಬಾಲಕಿಯ ಸಾಮೂಹಿಕ ಅತ್ಯಾಚಾರ: ವೃದ್ಧನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ 68 ವರ್ಷದ ವ್ಯಕ್ತಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲು ಕೋರಿ ಆರೋಪಿ ಚನ್ನಪ್ಪರ್ ಅಲಿಯಾಸ್​ ರಾಜಯ್ಯ (68) ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ

ಕೆಮ್ಮು ಸಿರಪ್‌: ಮಧ್ಯಪ್ರದೇಶದಲ್ಲಿ ಮತ್ತೆ ಆರು ಮಕ್ಕಳ ಸಾವು

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಆರು ಮಕ್ಕಳು ಮತ್ತೆ ಮೃತಪಟ್ಟಿದ್ದು, ಈ ರಾಜ್ಯದಲ್ಲಿ ಕೆಮ್ಮು ಸಿರಪ್‌ ಸೇವನೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಛಿಂದ್ವಾರದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್