Featured
ಬಿಡದಿ ಈಗಲ್‌ಟನ್ ರೆಸಾರ್ಟ್‌ನಲ್ಲಿ ಬಿಗ್ ಬಾಸ್ ಸ್ಪರ್ಧಿಗಳ ಠಿಕಾಣಿ
ಬಿಗ್‌ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋ ಮಾಲಿನ್ಯ ನಿಯಮ ಪಾಲನೆ ಮಾಡದ ಹಿನ್ನೆಲೆಯಲ್ಲಿ ವಾಯು ನಿಯಂತ್ರಣ ಮಂಡಳಿ ಅಧಿಕಾರಿಗಳು ಬೀಗ ಜಡಿದ ಕಾರಣ ಸ್ಪರ್ಧಿಗಳನ್ನು ಬಿಡದಿಯ ಈಗಲ್‌ಟನ್ ರೆಸಾರ್ಟ್‌ನಲ್ಲಿ ಇರಿಸಲಾಗಿದೆ. ಸ್ಪರ್ಧಿಗಳಿಗೆ ಬಿಗ್‌ಬಾಸ್ ಮನೆಯ ನಿಯಮಗಳೇ ಇಲ್ಲೂ ಅನ್ವಯವಾಗುತ್ತಿದೆ. ಜಾಲಿವುಡ್ ಸ್ಟುಡಿಯೋ ಮಾಲಿನ್ಯ ನಿಯಮ ಪಾಲನೆ ಮಾಡದ್ದಕ್ಕೆ ಈ ರೆಸಾರ್ಟ್‌ಗ ನಿಮ್ಮನ್ನು ಕರೆತರಲಾಗಿದೆ ಎಂದು ಆಯೋಜಕರು ಸ್ಪರ್ಧಿಗಳಿಗೆ ತಿಳಿಸಿದ್ದಾರೆ. ಮತ್ತೆ ಶೋ ನಡೆಯುವವರೆಗೂ ನೀವು ನಮ್ಮ ಸುಪರ್ದಿಯಲ್ಲೇ ಇರಬೇಕಾಗುತ್ತದೆ ಎಂದು
ನಾಳೆಯಿಂದ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಳ್ಳುತ್ತಿದೆ. ಅದ್ಧೂರಿಯಾಗಿ ಜಾತ್ರೆ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ. ಅ.9 ರಂದು ಮಧ್ಯಾಹ್ನ 12 ಗಂಟೆ ನಂತರ ಅರಸು ವಂಶಸ್ಥರು ಬನ್ನಿ ಕಡಿದ
ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಬಿಡುತ್ತೇವೆ, ನಾವು ಮಧ್ಯಪ್ರವೇಶ ಮಾಡುವುದಿಲ್ಲ: ಡಿಕೆ ಶಿವಕುಮಾರ್
ನಾವು ಯಾರನ್ನೂ ವಿಭಜಿಸುವುದಿಲ್ಲ. ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಈ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಅವರ ಸಮುದಾಯದ ಗುರುತು ಕೇಳುತ್ತಿದ್ದೇವೆ. ಇದರ ಹೊರತಾಗಿ
ಸಿಜೆಐ ಮೇಲೆ ಷೂ ಎಸೆತ: ಸುಪ್ರೀಂಕೋರ್ಟ್‌ಗೆ ಮಾಡಿದ ಅಪಚಾರ
ಸಹನೆ ಮತ್ತು ವೃತ್ತಿ ಸಂಹಿತೆಯನ್ನು ಕಾಪಾಡಿಕೊಳ್ಳಬೇಕಿರುವ ಜ್ಞಾನಸಂಪನ್ನ ನ್ಯಾಯವಾದಿಯೊಬ್ಬರು (ಲರ್ನೆಡ್ ಕೌನ್ಸಿಲ್) ಎಸಗಿದ ಈ ಕೃತ್ಯವೊಂದು ಎಪ್ಪತೈದು ವರ್ಷಗಳ ಸುಪ್ರೀಂಕೋರ್ಟ್ ಇತಿಹಾಸದಲ್ಲಿ ಕಪ್ಪು ಮಚ್ಚೆ. ವಕೀಲರು ಅಪಮಾನ ಎಸಗಿದ್ದು ಸುಪ್ರೀಂಕೋರ್ಟಿಗೆ. ಸಿಜೆಐ ಅವರಿಗಲ್ಲ. ಸುಪ್ರೀಂಕೋರ್ಟ್‌ನಲ್ಲಿ ಹೀಗೊಂದು ದುರದೃಷ್ಟಕರ ಘಟನೆ. ಪ್ರಜಾತಂತ್ರಕ್ಕೆ ಘೋರ
ಬೆಂಗಳೂರಿನ ಸಮೀಕ್ಷೆಯಲ್ಲಿ ಅಸಂಬದ್ಧ ಪ್ರಶ್ನೆಗಳಿಗೆ ಕತ್ತರಿ!
ಬೆಂಗಳೂರು:ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ವೇಳೆ ಕೇಳಲಾಗುತ್ತಿದ್ದ ಕೆಲವು ಅಸಂಬದ್ಧ ಪ್ರಶ್ನೆಗಳಿಗೆ ವಿನಾಯಿತಿ ನೀಡಿ ಸರ್ಕಾರ ಮೌಖಿಕ ಅದೇಶ ಹೊರಡಿಸಿದೆ. ಸಮೀಕ್ಷೆಯಲ್ಲಿ ಕೇಳಲಾಗುತ್ತಿದ್ದ ಮನೆಯಲ್ಲಿ ಎಷ್ಟು ಕುರಿ ಮತ್ತು ಕೋಳಿಗಳಿವೆ, ಎಷ್ಟು ಚಿನ್ನ ಇದೆ, ಮನೆ ಸ್ವಂತದ್ದಾ, ನಿಮಗೆ ಜಮೀನು ಎಷ್ಟಿದೆ ಎಂಬ
ಜಾಲಿವುಡ್ ಸ್ಟುಡಿಯೊಗೆ ಬೀಗ: ಮುಚ್ಚಿದ ಬಿಗ್ ಬಾಸ್ ಮನೆ!
ಬೆಂಗಳೂರು ಹೊರವಲಯದ ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೊಗೆ ಬೀಗ ಜಡಿಯಲಾಗಿದ್ದು, ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಶೋ ಎರಡನೇ ವಾರಕ್ಕೆ ಬಾಗಿಲು ಮುಚ್ಚಿದೆ. ಪರವಾನಗಿ ಪಡೆದಿಲ್ಲ. ಅನುಮತಿಗಾಗಿ ಸರ್ಕಾರಕ್ಕೆ ಪತ್ರವೂ ಬರೆದಿಲ್ಲ ಹಾಗೂ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ
ಮೈಸೂರಿನಲ್ಲಿ ಹಾಡುಹಾಗಲೇ ಆಟೋ ಚಾಲಕನ ಬರ್ಬರ ಹತ್ಯೆ
ಹಾಡುಹಾಗಲೇ ಅರಮನೆ ಸಮೀಪ ಪ್ರವಾಸಿಗರ ಎದುರಿನಲ್ಲೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಗುಂಪೊಂದು ಕೊಚ್ಚಿ ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ಮಂಗಳವಾರ ನಡೆದಿದೆ. ಮೈಸೂರಿನ ದೊಡ್ಡಕೆರೆ ಮೈದಾನದ ಬಳಿ ದಸರಾ ವಸ್ತುಪ್ರದರ್ಶನ ರಸ್ತೆಯಲ್ಲಿ ಆಟೋ ಓಡಿಸುತ್ತಿದ್ದ ಮೈಸೂರಿನ ಕ್ಯಾತಮಾರನಹಳ್ಳಿಯ ಅಶ್ವತ್ಥಕಟ್ಟೆ ಬಳಿಯ ನಿವಾಸಿ ವೆಂಕಟೇಶ್
ಅಕ್ಟೋಬರ್ 18 ರವರೆಗೆ ಮನೆ ಮನೆ ಸಮೀಕ್ಷೆ: ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ
ಮನೆ ಮನೆ ಸಮೀಕ್ಷೆ ಅಕ್ಟೋಬರ್ 18 ರ ವರೆಗೆ ನಡೆಯಲಿದ್ದು, ಅಲ್ಲಿವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ. PUC ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ, ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ, ವಿಶೇಷ ಬೋಧನಾ ತರಗತಿಗಳ ಮೂಲಕ ಶಿಕ್ಷಕರು ಪಠ್ಯ ಪೂರ್ಣಗೊಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕುರುಬರನ್ನೂ ST ಗೆ ಸೇರಿಸಿದರೆ ST ಮೀಸಲು ಪ್ರಮಾಣ ಹೆಚ್ಚಾಗಬೇಕು: ಮುಖ್ಯಮಂತ್ರಿ
ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ
ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಟ್ರಂಪ್ ಪುಂಗಿ
ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭಾವ್ಯ ಯುದ್ಧ ನಿಲ್ಲಿಸಿದ್ದು ನಾನೇ, ಸುಂಕಾಸ್ತ್ರ ಹಾಗೂ ವ್ಯಾಪಾರ ಒತ್ತಡ ಪ್ರಮುಖ ಪಾತ್ರ ವಹಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿದ್ದಾರೆ. ಟ್ರಂಪ್ ತಾನು ವಿಧಿಸಿರುವ ಸುಂಕ ನೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಸುಂಕ ನೀತಿಗಳು




