Featured
ಬಡವರಿಗಾಗಿ ಪ್ರತಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ
ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ, ಬೆಳಗಾವಿ ಸ್ಮಾರ್ಟ್ ಸಿಟಿ
ಭಾರತ ತಂಡಕ್ಕೆ ರೋಹಿತ್, ಕೊಹ್ಲಿ ವಾಪಸ್, ಏಕದಿನಕ್ಕೆ ಗಿಲ್ ನಾಯಕ!
ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತದ ಟಿ-20 ಮತ್ತು ಏಕದಿನ ತಂಡಗಳನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಅಳೆದು ತೂಗಿ ಅಕ್ಟೋಬರ್ 19ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ತಂಡವನ್ನು ಪ್ರಕಟಿಸಿದೆ. ಟೆಸ್ಟ್ ಹಾಗೂ ಟಿ-20ಗೆ ನಿವೃತ್ತಿ
ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಶಂಕಾಸ್ಪದ ಅಸ್ಥಿಪಂಜರ ಪತ್ತೆ
ಬೆಂಗಳೂರು: ಕೊತ್ತನೂರು ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೊತ್ತನೂರು ಬಳಿಯ ಸಮೃದ್ಧಿ ಅಪಾರ್ಟ್ ಮೆಂಟ್‌ನಲ್ಲಿ ಸುಮಾರು 6ರಿಂದ 8 ತಿಂಗಳ ಹಿಂದೆ ಮೃತಪಟ್ಟಿರಬಹುದಾದ ವ್ಯಕ್ತಿಯ ಅಸ್ಥಿಪಂಜರವು ಗುರುವಾರ ಸಂಜೆ ಕಟ್ಟಡ ಕಾರ್ಮಿಕರಿಗೆ ಕಾಣಿಸಿದೆ. ಅಪಾರ್ಟ್
ಸಾಲಬಾಧೆಗೆ ರೈತ ಆತ್ಮಹತ್ಯೆಗೆ ಶರಣು
ಧಾರಾಕಾರ ಸುರಿದ ಬಾರಿ ಮಳೆಗೆ ಸಂಪೂರ್ಣ ಬೆಳೆಗಳು ಹಾನಿಯಾಗಿದ್ದು, ನಷ್ಟದಿಂದ ಬೇಸತ್ತು ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಸುಂಬಡ ಗ್ರಾಮದಲ್ಲಿ ಶುಕ್ರವಾರ ಮೌನೇಶ (25) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು
ಗ್ಯಾರಂಟಿಗಳನ್ನು ಟೀಕಿಸಲು ದೇವೇಗೌಡರನ್ನು ಕಣಕ್ಕಿಳಿಸಿದ ಬಿಜೆಪಿ: ಸುರ್ಜೇವಾಲಾ ತಿರುಗೇಟು
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು ‘ಸಾಮಾಜಿಕ ನ್ಯಾಯ’ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ವಿರೋಧಿಸಲು ಮಾಜಿ ಪ್ರಧಾನಿ ಎಚ್.ಡಿ.
ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ ಅಬ್ಬರ
ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯ ಅಬ್ಬರ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು
ಹೈಕೋರ್ಟ್ ಸೇರಿ 6 ಕಡೆ ಬಾಂಬ್ ಸ್ಫೋಟದ ಬೆದರಿಕೆ
ಬೆಂಗಳೂರು: ಹೈಕೋರ್ಟ್,ಇಸ್ರೇಲ್ ರಾಯಭಾರಿ ಕಚೇರಿ ಸೇರಿ 6 ಕಡೆಗಳಲ್ಲಿ ಆರ್‌ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ. ಶುಕ್ರವಾರ ಪ್ರಾರ್ಥನೆಯ ವೇಳೆಗೆ ಸ್ಫೋಟ ಆಗುತ್ತದೆ ಎಂದು ಬೆದರಿಕೆ ಸಂದೇಶ ಬಂದಿದ್ದು, ತಕ್ಷಣವೇ ಅಲರ್ಟ್ ಆದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ
ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: “ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ
`ಶಕ್ತಿ’ ಚಂಡಮಾರುತ ಅಬ್ಬರ: ಅಕ್ಟೋಬರ್ 7ರವರೆಗೆ ಭಾರೀ ಮಳೆ
ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ `ಶಕ್ತಿ’ ಚಂಡಮಾರುತದ ಪರಿಣಾಮ ಕರಾವಳಿ ರಾಜ್ಯಗಳಲ್ಲಿ ಅಕ್ಟೋಬರ್ 7ವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಗುಜರಾತ್‌ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಚಂಡಮಾರುತ ಕೇಂದ್ರೀಕೃತವಾಗಿದ್ದು, ಶನಿವಾರ ಈ
ವೆಸ್ಟ್ ಇಂಡೀಸ್ ಇನಿಂಗ್ಸ್ ಸೋಲು; ಭಾರತದ ಗೆಲುವಿನಲ್ಲಿ ಮಿಂಚಿದ ಜಡೇಜಾ, ಸಿರಾಜ್!
ಅಹಮದಾಬಾದ್ : ಉಪನಾಯಕ ರವೀಂದ್ರ ಜಡೇಜಾ ಅವರ ಆಲ್ ರೌಂಡ್ ಪ್ರದರ್ಶನದ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 140 ರನ್ ಗಳ ಭಾರೀ ಅಂತರದಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ




