Menu

Karur Stampede- ಕರೂರ್‌ ರ‍್ಯಾಲಿ ದುರಂತ: ವಿಜಯ್‌ ದಳಪತಿ ಮನೆಗೆ ಬಾಂಬ್‌ ಬೆದರಿಕೆ

ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ನೇತೃತ್ವದ ಬೃಹತ್ ರ‍್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿ 30ಕ್ಕೂ ಹೆಚ್ಚು ಜನ ಮೃತಪಟ್ಟ ಬಳಿಕ ದಳಪತಿ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಹಾಕಲಾಗಿದೆ. ಶ್ವಾನದಳ ಹಾಗೂ ಬಾಂಬ್‌ ನಿಷ್ಕ್ರಿಯ ದಳ ಮನೆಯ ಸುತ್ತ ಪರಿಶೀಲನೆ ನಡೆಸಿವೆ. ಚೆನ್ನೈನಲ್ಲಿರುವ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಮನೆಯ ಸುತ್ತ ನಿಯೋಜಿಸಲಾಗಿದೆ.

ಮಳೆಯಿಂದ ಭಾರಿ ಹಾನಿ ವಿಶೇಷ ಪ್ಯಾಕೇಜ್‌ಗಾಗಿ ಸಿಎಂ ಸಿದ್ದರಾಮಯ್ಯಗೆ ಈಶ್ವರ ಖಂಡ್ರೆ ಮನವಿ

ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರಿ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ

ರೈತರ ಒಂದಿಂಚೂ ಭೂಮಿಯನ್ನ ಕಸಿಯಲು ಬಿಡಲ್ಲ: ನಿಖಿಲ್ ಕುಮಾರಸ್ವಾಮಿ

ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡದಿಯ ಟೌನ್ ಶಿಪ್ ಯೋಜನೆಯನ್ನು ಹಿಂಪಡೆಯದಿದ್ದರೇ ವಿಧಾನಸೌಧ ಹಾಗೂ ಮುಖ್ಯಮಂತ್ರಿಗಳ ನಿವಾಸ ಕೃಷ್ಣ ಕಛೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು. ಬಿಡದಿಯಲ್ಲಿ ಟೌನ್ ಶಿಪ್

ಕಲ್ಯಾಣ ಕರ್ನಾಟಕದಲ್ಲಿ ವರುಣನ ಆರ್ಭಟ: ತುರ್ತು ಕ್ರಮಕ್ಕೆ ಸಿಎಂ ಸೂಚನೆ

ಕಳೆದ ಮೂರು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಪ್ರವಾಹದ ಸಮಸ್ಯೆ ನಿರ್ವಹಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ತಲೆಮರೆಸಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಅರೆಸ್ಟ್‌

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಪೊಲೀಸರು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಿದ್ದಾರೆ. ದೆಹಲಿ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯನಾಗಿರುವ ಆರೋಪಿ, ಪ್ರಕರಣ ಬಹಿರಂಗವಾದ ನಂತರ ತಲೆಮರೆಸಿಕೊಂಡಿದ್ದನು.

ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿಯುವ ಲಕ್ಷಣಗಳಿವೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 4ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ವಿಶೇಷವಾಗಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆ

ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ, 30ಕ್ಕೂ ಹೆಚ್ಚು ಮಂದಿ ಸಾವು!

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ನೇತೃತ್ವದ ಬೃಹತ್ ರ‍್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿ 30ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಡೆದ ರ‍್ಯಾಲಿಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಜನಸಮೂಹ ನಿಯಂತ್ರಿಸಲಾಗದೆ ಇದ್ದಕ್ಕಿದ್ದಂತೆ ಕಾಲ್ತುಳಿತ ಸಂಭವಿಸಿದೆ. ಈ

ಬಿಡದಿಯಲ್ಲಿ ಭಾರತದ ಪ್ರಪ್ರಥಮ ಎಐ ಸಿಟಿ ನಿರ್ಮಾಣ: ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲ

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಹೋಬಳಿಯ 2000 ಎಕರೆ ಜಾಗದಲ್ಲಿ ದೇಶದ ಮೊದಲ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ಆಧಾರಿತ ವಿಶ್ವದರ್ಜೆಯ ಎ.ಐ ನಗರ (ಎ.ಐ ಸಿಟಿ) ನಿರ್ಮಾಣ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ರಾಜ್ಯ ಘಟಕ ಬೆಂಬಲ ಸೂಚಿಸಿದೆ. ಇಂದು

ರಸ್ತೆ ಗುಂಡಿ ಮುಚ್ಚಲು ಗಡುವು ಕೊಟ್ಟ ಸಿಎಂ; ಸಿಟಿ ರೌಂಡ್ಸ್‌ ವೇಳೆ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲ

ರಸ್ತೆಗಳಲ್ಲಿ ಹೆಚ್ಚುತ್ತಿರುವ ಗುಂಡಿಗಳನ್ನು ಕೂಡಲೇ ದುರಸ್ತಿಗೊಳಿಸಿ ಸಂಚಾರ ಯೋಗ್ಯವಾಗಿಸುವಂತೆ ಸೂಚನೆ ನೀಡಲಾಗಿದ್ದು, ಇದಕ್ಕಾಗಿ ಒಂದು ತಿಂಗಳ ಗಡುವು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ,

ಜಾತಿಗಣತಿ ವೇಳೆ ಮಾಹಿತಿ ನೀಡೋದು ಕಡ್ಡಾಯವಲ್ಲ: ಸರ್ಕಾರ ಸ್ಪಷ್ಟನೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ರಾಜ್ಯಾದ್ಯಂತ ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಿದೆ. ಆಯೋಗವು ಸಮೀಕ್ಷೆಯಲ್ಲಿ ಭಾಗವಹಿಸುವುದು ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿದ್ದು, ಯಾವುದೇ ವ್ಯಕ್ತಿ ಅಥವಾ ಕುಟುಂಬ ಬಲವಂತದಿಂದ ಮಾಹಿತಿ ನೀಡಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್