Featured
ಯಾರೇ ದ್ವೇಷ ಭಾಷಣ ಮಾಡಿದರೂ ಎಫ್‌ಐಆರ್ ದಾಖಲು: ಸಿಎಂ ಸಿದ್ದರಾಮಯ್ಯ
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರ ಬಗ್ಗೆ ಭಾಷಣದಲ್ಲಿ ಅಗೌರವದಿಂದ ಮಾತನಾಡಿದ್ದಾರೆ ಎಂದು ಹೇಳಿದರು.
ಒಂದು ಲೇಯರ್ ಡಾಂಬರೀಕರಣಕ್ಕೆ 4-5 ಸಾವಿರ ಕೋಟಿ ಎಲ್ಲಿಂದ ತರುತ್ತಾರೆ: ಆರ್.ಅಶೋಕ ಪ್ರಶ್ನೆ
ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿಯಿಂದಾಗಿ ಸುಮಾರು
ಏಪ್ರಿಲ್‌ವರೆಗೆ ಕೊಪ್ಪಳ ನಗರಸಭೆಯಲ್ಲಿ ಹಣ ಇಲ್ಲ, ಖಜಾನೆ ಖಾಲಿ: ಪೌರಾಯುಕ್ತ
2026ರ ಏಪ್ರಿಲ್‌ವರೆಗೆ ಕೊಪ್ಪಳ ನಗರಸಭೆಯಲ್ಲಿ ಹಣ ಇಲ್ಲ, ಖಜಾನೆ ಖಾಲಿಯಾಗಿದೆ ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ಪೌರಾಯುಕ್ತ ವೆಂಕಟೇಶ ನಾಗನೂರು ಹೇಳಿದ್ದಾರೆ. ಕೊಪ್ಪಳ ನಗರಸಭೆಯ 31 ಸದಸ್ಯರಿಗೆ ಕಳೆದ 10 ತಿಂಗಳಿನಿಂದ ಗೌರವಧನ ಬಂದಿಲ್ಲ. ಖಜಾನೆಯಲ್ಲಿ ಹಣವಿಲ್ಲ ಎಂದು ಮಾಹಿತಿ ನೀಡಿದರು.
ಒಲಂಪಿಕ್ ಪದಕದಲ್ಲೂ ದೇಶ ನಂಬರ್ ಒನ್ ಆಗಬೇಕು: ಮುಖ್ಯಮಂತ್ರಿ
ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಮಾತನಾಡಿದರು. ಒಲಂಪಿಕ್ಸ್,
ಯೋಜನಾ ವರದಿ ಧಾರವಾಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಲಿ: ಸಚಿವ ಲಾಡ್
ಸುಮಾರು ವರ್ಷಗಳ ನಂತರ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೆಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು
ಮುಖ್ಯಮಂತ್ರಿ ಸ್ಥಾನ: ಸಿಎಂ ಹೇಳಿದ ಮೇಲೆ ಇನ್ನೇನಿದೆ ಎಂದ ಡಿಕೆ ಶಿವಕುಮಾರ್
“ಸಿಎಂ ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು. “ಹೈಕಮಾಂಡ್ ಒಪ್ಪಿದರೇ ನಾನೇ
ಬೆಳಗಾವಿಯಲ್ಲಿ ಎರಡು ಸಾವಿರ ರೂ. ವಾಪಸ್ ಕೊಡದ್ದಕ್ಕೆ ಸ್ನೇಹಿತನ ಕೊಲೆ
ಬೆಳಗಾವಿ ಬೈಲಹೊಂಗಲ ತಾಲೂಕಿನ ಗಿರಿಯಾಲ್ ಗ್ರಾಮದಲ್ಲಿ ಕೊಟ್ಟ ಸಾಲ ವಾಪಸ್ ಕೊಡದಿದ್ದಕ್ಕೆ ಸ್ನೇಹಿತನನ್ನು ಕೊಲೆ ಮಾಡಿ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಗಿರಿಯಾಲ‌್ ಗ್ರಾಮದ ಮಂಜುನಾಥ ಗೌಡರ (30) ಕೊಲೆಯಾದವ. ಕಳೆದ ವಾರ ಸ್ನೇಹಿತ ದಯಾನಂದ ಗುಂಡ್ಲೂರನಿಂದ 2 ಸಾವಿರ ಸಾಲ ಪಡೆದಿದ್ದ
ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಐಸಿಯುನಲ್ಲಿ
ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವಾಗ ಶ್ರೇಯಸ್ ಅಯ್ಯರ್ ಅವರ
ಪರಮೇಶ್ವರ್‌ಗೆ ಸಿಎಂ ಆಗುವ ಅವಕಾಶ: ಸಿದ್ದರಬೆಟ್ಟ ಸ್ವಾಮೀಜಿ
ಡಾ.ಜಿ.ಪರಮೇಶ್ವರ್‌ಗೆ ಸಿಎಂ ಆಗುವ ಅವಕಾಶ ಬರಲಿದೆ ಎಂದು ಸಿದ್ದರಬೆಟ್ಟದ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ತುಮಕೂರಿನ ಕೊರಟಗೆರೆಯ ಚಟ್ಟೆನಹಳ್ಳಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಲಿ ಎನ್ನುವುದು ನಮ್ಮೆಲ್ಲರ ಹಲವು ವರ್ಷಗಳ ಬೇಡಿಕೆಯಾಗಿದೆ, ಇತ್ತೀಚೆಗೆ ಮುಖ್ಯ ಮಂತ್ರಿ
ಕೆಆರ್‌ಎಸ್‌ನಲ್ಲಿ ರಿವರ್ಸ್ ತೆಗೆಯುತ್ತಿದ್ದ ಬಸ್‌ಗೆ ಊಟ ಮಾಡುತ್ತಿದ್ದ ಮಹಿಳೆ ಬಲಿ
ಮಂಡ್ಯದ ಕೆಆರ್‌ಎಸ್ ನಲ್ಲಿ ಬಸ್ ರಿವರ್ಸ್ ತೆಗೆಯುವಾಗ ನಡೆದ ಅವಘಡದಲ್ಲಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕೆಆರ್‌ಎಸ್‌ಗೆ ಪ್ರವಾಸ ಬಂದಿದ್ದ ಕೇರಳದ ಮಹಿಳೆ ಕೌಸಲ್ಯಾ ಪಾರ್ಕಿಂಗ್ ಬಳಿ ಊಟ ಮಾಡುತ್ತ ಕುಳಿತಿದ್ದಾಗ ಈ ದುರಂತ ಸಂಭವಿಸಿದ್ದು, ಮತ್ತೊಬ್ಬರು ಕೇರಳದ ಮಹಿಳೆ ಗಾಯಗೊಂಡಿದ್ದಾರೆ. ಕೆಆರ್‌ಎಸ್




