Featured
ಪಾಕ್ ಧ್ವಜ ಮಾರಾಟ: ಅಮೆಜಾನ್, ಫ್ಲಿಪ್ ಕಾರ್ಟ್‌ಗೆ ಕೇಂದ್ರ ನೋಟಿಸ್
ಪಾಕಿಸ್ತಾನದ ಧ್ವಜ ಮಾರಾಟ ಮಾಡಿದ್ದಕ್ಕಾಗಿ ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿದೆ. ಪಾಕಿಸ್ತಾನ ಧ್ವಜ ಸೇರಿದಂತೆ ಆ ದೇಶದ ಇತರ ವಸ್ತುಗಳ ಮಾರಾಟವನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಹಾಗೂ ಆ ವಸ್ತುಗಳನ್ನು ತೆಗೆದುಹಾಕಬೇಕು ಎಂದು ಗ್ರಾಹಕರ ಕ್ಷೇಮಾಭಿವೃದ್ಧಿ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ಅಮೆಜಾನ್, ಫ್ಲಿಪ್ ಕಾರ್ಟ್, ಯುಬೈ ಇಂಡಿಯಾ, ಇಟ್ಸೆ, ದಿ ಫ್ಲಾಗ್ ಕಂಪನಿ, ದಿ ಫ್ಲಾಗ್ ಕಾರ್ಪೊರೇಷನ್ ಕಂಪನಿಗಳಿಗೆ ನೋಟಿಸ್
ಕೌಶಲ್ಯಪೂರ್ಣ ತಂತ್ರಜ್ಞರು, ದಾದಿಯರಿಗಾಗಿ ಕರ್ನಾಟಕ ಕಾರ್ಯಪಡೆಯತ್ತ ಜಪಾನ್ ಕಣ್ಣು
ನಾನಾ ಕ್ಷೇತ್ರಗಳಲ್ಲಿ ಕೌಶಲ್ಯಪೂರ್ಣ ವೃತ್ತಿಪರರರು, ನರ್ಸ್ ಗಳ ಅಗತ್ಯವಿದೆ ಎಂದು ಬೆಂಗಳೂರಿನಲ್ಲಿರುವ ಜಪಾನ್‌ನ ಕಾನ್ಸುಲ್-ಜನರಲ್ ನಕೇನ್ ಸ್ಟಮೊ ಸ್ಪಷ್ಟಪಡಿಸಿದ್ದು, ಕರ್ನಾಟಕದಲ್ಲಿ ತಾಂತ್ರಿಕ ಮತ್ತು ವಿಶೇಷ ಕೋರ್ಸ್ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಜಪಾನ್‌ನಲ್ಲಿ ಕಾರ್ಯಪಡೆಯ ಕೊರತೆ ಇದೆ. ವಿಶೇಷವಾಗಿ ಆರೋಗ್ಯ
ಸ್ಲೀಪರ್ ಬಸ್‌ನಲ್ಲಿ ಹೊತ್ತಿಕೊಂಡ ಬೆಂಕಿ: ಮಲಗಿದ್ದಲ್ಲೇ ಐವರು ಸಜೀವ ದಹನ
ಲಕ್ನೋದ ಮೋಹನ್ ಲಾಲ್ ಗಂಜ್ ಪ್ರದೇಶದ ಕಿಸಾನ್ ಪಥದಲ್ಲಿ ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಐವರು ಸಜೀವ ದಹನಗೊಂಡಿದ್ದಾರೆ. ಬಸ್‌ನಲ್ಲಿ 60 ಪ್ರಯಾಣಿಕರಿದ್ದರು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದಾಗ ಏಕಾಏಕಿ
ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ನ್ಯಾಯದ ಭರವಸೆ, ಪರಿಹಾರ ಚೆಕ್ ನೀಡಿದ ಡಿಸಿಎಂ
ರಾಮನಗರ ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ
ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್
ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಗುರುವಾರ ಬೆಳಿಗ್ಗೆಯೇ ಲೋಕಾಯುಕ್ತ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದೆ. ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟ ಏಳು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು
ಬಿ-ಖಾತಾ ವಿತರಣೆ ಅವಧಿ 3 ತಿಂಗಳವರೆಗೆ ವಿಸ್ತರಣೆ: ಸಚಿವ ಬಿ.ಎಸ್.ಸುರೇಶ
ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ
ಬಿಬಿಎಂಪಿ ಇಂದಿನಿಂದ ಗ್ರೇಟರ್ ಬೆಂಗಳೂರು: ಆದೇಶ ಜಾರಿ
ಬಿಬಿಎಂಪಿಯಾಗಿದ್ದ ಬೆಂಗಳೂರನ್ನು ಗ್ರೇಟರ್ ಬೆಂಗಳೂರನ್ನಾಗಿ ಪರಿವರ್ತನೆ ಮಾಡಿರುವ ಆದೇಶ ಹೊರ ಬಿದ್ದಿದ್ದು, ಆದೇಶದಲ್ಲಿ ಗುರುವಾರ (ಇಂದು)ದಿಂದಲೇ ಗ್ರೇಟರ್ ಬೆಂಗಳೂರು (ಜಿಬಿಎ)ಆಡಳಿತ ಜಾರಿಗೆ ಬರುತ್ತಿದೆ . ನಗರ ಪಾಲಿಕೆ, ಮಹಾನಗರ ಪಾಲಿಕೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿದ್ದ ಬೆಂಗಳೂರು ಗುರುವಾರದಿಂದ ಗ್ರೇಟರ್ ಬೆಂಗಳೂರಾಗುತ್ತಿದೆ.
ಡಿಸಿಎಂ ನಿರ್ದೇಶನದಂತೆ ಪರಂಪರೆ ಮುಂದುವರಿಯುವ ಕಾರ್ಯಕ್ರಮವಾಗಿ ಕಾವೇರಿ ಆರತಿ: ಡಾ.ವಿ.ರಾಮ್ ಪ್ರಸಾತ್ ಮನೋಹರ್
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ KRS ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಕಾರ್ಯಕ್ರಮವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಕಾವೇರಿ ಆರತಿ ಕುರಿತಂತೆ
ವರ್ಕ್ ಫ್ರಂ ಹೊಮ್ ಪ್ರಾಜೆಕ್ಟ್ ನೆಪದಲ್ಲಿ ವಂಚನೆ: ಅಂತರಾಜ್ಯ ಗ್ಯಾಂಗ್ ಬಂಧನ
ಬೆಂಗಳೂರು: ವರ್ಕ್ ಫ್ರಂ ಹೊಮ್ ಪ್ರಾಜೆಕ್ಟ್ ನೆಪದಲ್ಲಿ ಸಾರ್ವಜನಿಕರಿಂದ ಫೋನ್‍ಪೇ,ಗೂಗಲ್ ಪೇ ಬ್ಯಾಂಕ್‍ಗಳ ಮೂಲಕ ಹಣ ವರ್ಗಾವಣೆ ಪಡೆದು ಮೋಸ ಮಾಡುತ್ತಿದ್ದ ಅಂತರಾಜ್ಯ ಗ್ಯಾಂಗ್ ನ್ನು ಬೇಧಿಸಿರುವ ಆಡುಗೊಡಿ ಪೊಲೀಸರು 12 ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರಪ್ರದೇಶದ ಬಲಿಯಾ ಜಿಲ್ಲೆಯ ಹರ್ಷವರ್ದನ್ ಓಜಾ
ಬ್ಯಾಲಾಳು ಇಸ್ರೋ ಕೇಂದ್ರಕ್ಕೆ ಪೊಲೀಸ್ ಸರ್ಪಗಾವಲು
ಬೆಂಗಳೂರು: ಪಾಕಿಸ್ತಾನದ ಮೇಲೆ ದಾಳಿ ನಡೆಸಿ, ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ಭಾರತೀಯ ಸೇನೆಗೆ ನೆರವು ನೀಡಿದ್ದ ಭಾರತೀಯ ಬಾಹ್ಯಾಕಾಶ ಕೇಂದ್ರ (ಇಸ್ರೋ)ದ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ನಗರದ ಹೊರವಲಯದ ತಾವರೆಕೆರೆ ಬಳಿಯ ಬ್ಯಾಲಾಳುವಿನ 120 ಎಕರೆ ಪ್ರದೇಶದಲ್ಲಿರುವ ಇಸ್ರೋದ ಭಾರತೀಯ