Sunday, September 21, 2025
Menu

ಸಿಕ್ಕಿಬಿದ್ದ ಕಾಡಾನೆ ಕುಳ್ಳ: ನಿಟ್ಟುಸಿರು ಬಿಟ್ಟ ಮಲೆನಾಡು ಜನ

ಚಿಕ್ಕಮಗಳೂರು: ದಾಂಧಲೆ ಮಾಡುತ್ತಾ ಮಲೆನಾಡು ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ಕುಳ್ಳ ಎಂದೇ ಕುಖ್ಯಾತಿ ಪಡೆದಿದ್ದ ಕಾಡಾನೆ ಕಳೆದ ನಾಲ್ಕು ದಿನಗಳಿಂದ ನಡೆದ ಆಪರೇಷನ್ ಯಶಸ್ವಿಯಾಗಿ ಸಿಕ್ಕಿಬಿದ್ದಿದ್ದಾನೆ. ಕುಳ್ಳ ಕಾಡಾನೆ ಸೆರೆಸಿಕ್ಕಿದ್ದರಿಂದ ಹಾಸನ, ಚಿಕ್ಕಮಗಳೂರು ಜಿಲ್ಲೆಯ ಅರಣ್ಯದಂಚಿನ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸಂಚರಿಸಿ ದಾಂಧಲೆ ಮಾಡುತ್ತಾ ಉಪಟಳ ನೀಡುತ್ತಿದ್ದ ಕಾಡಾನೆ ಕುಳ್ಳನ ಸೆರೆಗಾಗಿ ಕಳೆದ ನಾಲ್ಕು ದಿನದಿಂದ

ಮಹಿಳಾ ಸೇನಾಧಿಕಾರಿ ಸೋಫಿಯಾ ಖುರೇಷಿಗೆ ನಿಂದನೆ: ಬಿಜೆಪಿ ಸಚಿವನ ವಿರುದ್ಧ ಎಫ್ ಐಆರ್ ದಾಖಲು!

ಭೂಪಲ್: ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ. ಮಧ್ಯಪ್ರದೇಶದ ಹೈಕೋರ್ಟ್ ಸೂಚನೆ ಮೇರೆಗೆ ಸಚಿವ ಹಾಗೂ ಬಿಜೆಪಿ ಮುಖಂಡರ ವಿಜಯ್ ಶಾ ವಿರುದ್ಧ

ಆಪರೇಷನ್ ಸಿಂಧೂರ್‌ನಲ್ಲಿ ಮೃತ ಉಗ್ರರಿಗೆ ಪಾಕ್‌ ಸರ್ಕಾರದಿಂದ ತಲಾ ಕೋಟಿ ರೂ. ಪರಿಹಾರ

ಭಾರತದ ಆಪರೇಷನ್ ಸಿಂಧೂರ್‌ನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸುವ ಮೂಲಕ ಆ ರಾಷ್ಟ್ರವು ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ವ್ಯಕ್ತಪಡಿಸಿದಂತಾಗಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆದ ಈ ಕಾರ್ಯಾಚರಣೆಯಲ್ಲಿ, ಉಗ್ರ ಮಸೂದ್

ಮೇ 27ಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ; ಮುಂಗಾರು ಮಾರುತ ವಾಡಿಕೆಗಿಂತ ಮುಂಚಿತವಾಗಿಯೇ ಮೇ 27ರಂದು ಕೇರಳ ಪ್ರವೇಶಿಸಲಿವೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ಮಂಗಳವಾರ ಮುಂಗಾರು ಮಾರುತಗಳು ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ದಕ್ಷಿಣ ಅಂಡಮಾನ್ ಸಮುದ್ರ, ನಿಕೋಬಾರ್ ದ್ವೀಪಗಳು ಮತ್ತು

ಯಾದಗಿರಿಯಲ್ಲಿ ಸಾಲ ಮರಳಿಸು ಅಂದ ಅಳಿಯನ ಕೊಲೆಗೈದ ಮಾವ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಶಾಖಾಪುರ(ಎಸ್‌.ಕೆ) ಗ್ರಾಮದಲ್ಲಿ ಕೊಟ್ಟ ಸಾಲ ಮರಳಿ ಕೊಡುವಂತೆ ಕೇಳಿದ ಅಳಿಯನನ್ನು ಆತನ ಸೋದರ ಮಾವ ಕೊಲೆ ಮಾಡಿರುವ ಘಟನೆ ನಡೆದಿದೆ. ಲಕ್ಷ್ಮಣ ಚಿಗರಿಹಾಳ (25) ಹತ್ಯೆಗೀಡಾದ ಯುವಬಕ. ಆತನ ಸೋದರ ಮಾವ ಮಾನಪ್ಪ ಎಂಬಾತ ಕೊಲೆ

ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರು: ಸಿಎಂ

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬರುತ್ತಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ  ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿ, ರಾಜ್ಯ

ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು: ಪ್ರಿಯಾಂಕ್‌ ಖರ್ಗೆ

ಏಪ್ರಿಲ್ 22ರಂದು ಪೆಹಲ್ಗಾಮ್‌ನಲ್ಲಿ ದಾಳಿ ನಡೆದಾಗ ಪ್ರಧಾನಿ ಮೋದಿ ಬಿಹಾರ ಚುನಾವಣೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಜಮ್ಮು ಕಾಶ್ಮೀರ, ಆದಂಪುರ ಸೇರಿದಂತೆ ಎಲ್ಲೆಡೆ ಬ್ಲಾಕ್‌ಔಟ್ ಆಗಿದ್ದಾಗ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು ಎಂದು ಐಟಿ-ಬಿಟಿ ಸಚಿವ

ಭಾರತಕ್ಕೆ ಬಿಎಸ್ ಎಫ್ ಯೋಧ ಹಸ್ತಾಂತರಿಸಿದ ಪಾಕಿಸ್ತಾನ!

ನವದೆಹಲಿ: ಆಕಸ್ಮಿಕವಾಗಿ ಗಡಿ ದಾಟಿದ್ದ ಭಾರತದ ಬಿಎಸ್ ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ಭಾರತಕ್ಕೆ ಹಸ್ತಾಂತರಿಸಿದೆ. ಆರ್ಟರಿ ಗಡಿಯಲ್ಲಿ ಬುಧವಾರ ಬೆಳಿಗ್ಗೆ 10.30ರ ಸುಮಾರಿಗೆ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು

ಬೆಂಗಳೂರು ಸೇರಿದಂತೆ ದೇಶದ 13 ನಗರಗಳಲ್ಲಿ ಇ-ಪಾಸ್‌ಪೋರ್ಟ್‌

ದೇಶಾದ್ಯಂತ ಚಿಪ್ ಆಧಾರಿತ ಇ-ಪಾಸ್‌ಪೋರ್ಟ್‌ಗಳನ್ನು ನೀಡಲು ಆರಂಭಿಸಲಾಗಿದೆ. ಕಳೆದ ವರ್ಷ ಪ್ರಾಯೋಗಿಕವಾಗಿ ಜಾರಿಗೊಂಡಿದ್ದ ಈ ಯೋಜನೆ ಈಗ ದೇಶದ 13 ಪ್ರಮುಖ ನಗರಗಳಲ್ಲಿ ಲಭ್ಯವಿದೆ. ಪಾಸ್‌ಪೋರ್ಟ್ ಸೇವಾ ಕಾರ್ಯಕ್ರಮಡಿ ಜಾರಿಗೊಳಿಸಲಾದ ಈ ವ್ಯವಸ್ಥೆಯು ಭದ್ರತೆಯನ್ನು ದ್ವಿಗುಣಗೊಳಿಸುವು ದರ ಜೊತೆಗೆ ಅಂತರರಾಷ್ಟ್ರೀಯ ಪ್ರಯಾಣವನ್ನು

ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಕೊಡಿ : ಆಮ್ ಆದ್ಮಿ ಪಾರ್ಟಿ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ ಹಳೇ ಮೈಸೂರು ಭಾಗಕ್ಕೆ ಘೋಷಣೆ ಮಾಡಿದಂತೆ ಹಿಂದುಳಿದ ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ರಮೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು ಇತ್ತೀಚಿಗೆ ಚಾಮರಾಜನಗರ