Menu

ಜೈಲಿನಲ್ಲಿ ದರ್ಶನ್‌ ಆತ್ಮಹತ್ಯೆ ಯತ್ನ: ಕೇವಲ ವದಂತಿ ಎಂದ ಗೃಹ ಸಚಿವ ಪರಮೇಶ್ವರ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧಿಕೃತವಾಗಿ ನಿರಾಕರಿಸಿದ್ದಾರೆ. ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಗಮನಕ್ಕೆ ಬಂದ ತಕ್ಷಣ ಕಾರಾಗೃಹದ ಹಿರಿಯ ಅಧಿಕಾರಿಗಳಿಂದ ಮೌಖಿಕವಾಗಿ ಮಾಹಿತಿ ಪಡೆದಿದ್ದೇನೆ. ಜೈಲಿನಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ

ಕೋರಮಂಗಲದಲ್ಲಿ ಬಿಎಂಟಿಸಿ ಬಸ್‌ಗೆ ಯುವಕ ಬಲಿ

ಬೆಂಗಳೂರಿನ ಕೋರಮಂಗಲದಲ್ಲಿ ಶುಕ್ರವಾರ ರಾತ್ರಿ ನಡೆದ ನಡೆದ ಬಿಎಂಟಿಸಿ ಬಸ್‌ ಅಪಘಾತದಲ್ಲಿ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದು, ಯಶವಂತಪುರ ಸರ್ಕಲ್‌ನಲ್ಲಿ ಶನಿವಾರ ನಡೆದ ಅಪಘಾತದಲ್ಲಿ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಕೋರಮಂಗಲದ ನೆಕ್ಸಸ್ ಮಾಲ್ ಬಳಿ ಅಪಘಾತ ಸಂಭವಿಸಿದ್ದು, ಆಂಧ್ರಪ್ರದೇಶ

ಮುಂದುವರಿದ ಪೆಟ್ರೋಲ್, ಡೀಸೆಲ್ ದರ ಏರಿಕೆ

ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ 91 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ., ಡೀಸೆಲ್ ಬೆಲೆ 95.04 ರೂ. ಆಗಿದೆ. ಮೇ ತಿಂಗಳಲ್ಲಿ ಮೂರನೇ ಬಾರಿಗೆ ತೈಲ ಬೆಲೆಗಳು ಏರಿಕೆ ಕಂಡಿವೆ.

ಚಿತ್ತಾಪುರದಲ್ಲಿ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಐವರು ಬಲಿ

ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ನಡೆದಿರುವ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರು ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45),

ಜೆನ್‌ಜೀ ಹಾಗೂ ಕಾಕ್ರೋಚ್ ಪಾರ್ಟಿ

ಲಂಚಗುಳಿತನ, ಆಡಳಿತದಲ್ಲಿ ಅಡಿಗಡಿಗೂ ತಾಂಡವವಾಡಿದ ಅಪ್ರಮಾಣಿಕತೆ, ಭ್ರಷ್ಟತೆ, ಸ್ವಜನಪಕ್ಷಪಾತ, ಧರ್ಮ ಪ್ರಚೋದನೆ, ಜಾತಿ ನಿಂದನೆ, ತಾರತಮ್ಯ ಇವೇ ಇಂದಿನ ಪ್ರಜಾತಂತ್ರದ ಮಹಾಪೀಡೆಗಳು. ಇದರಿಂದ ಸಂಪೂರ್ಣವಾಗಿ ಮುಕ್ತವಾಗಿ ಸರ್ವರಿಗೂ ಸಮಪಾಲು ಮತ್ತು ಸರ್ವರಿಗೂ ಸಮಬಾಳು ಎಂಬುದು ಧ್ಯೇಯ ವಾಕ್ಯ. ಆದರೆ ಸ್ವತಂತ್ರ ಭಾರತದಲ್ಲಿ

ಬಡವರ ಮತಗಳನ್ನು ಕಸಿಯಲು ಎಸ್ ಐಆರ್ ಮೂಲಕ ಸಂಚು: ಡಿಕೆ ಶಿವಕುಮಾರ್ ಕಿಡಿ

“ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದದ ಡಿಸಿಎಂ, ಶಾಸಕರು,

ಗಂಡನ ಕಿರುಕುಳಕ್ಕೆ ಬೇಸತ್ತ ಗರ್ಭಿಣಿ ಆತ್ಮಹತ್ಯೆ, ಕ್ಯಾನ್ಸರ್‌ಗೆ ಹೆದರಿ ಡಾಕ್ಟರ್‌ ಸುಸೈಡ್‌

ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ಗಂಡನ ಕಿರುಕುಳ ಮತ್ತು ಹಿಂಸೆಗೆ ಬೇಸತ್ತು 22 ವರ್ಷದ 4 ತಿಂಗಳ ಗರ್ಭಿಣಿ ಶೃತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶೃತಿ ಮತ್ತು ಗೋಪಾಲ್ ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ನಂತರ

ವಿನೇಶ್ ಫೋಗಟ್‌ ಅನರ್ಹತೆಗೆ ಹೈಕೋರ್ಟ್‌ ತಡೆ, ತಾಯ್ತನ ಗೌರವಿಸಿಯೆಂದು WFI ಗೆ ತರಾಟೆ

ಮೇ 30 ಮತ್ತು 31ರಂದು ನಡೆಯಲಿರುವ 2026ರ ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಲು ಅನರ್ಹರೆಂದು ಪರಿಗಣಿಸುತ್ತಿರುವುದಕ್ಕೆ ಭಾರತೀಯ ಕುಸ್ತಿ ಒಕ್ಕೂಟವನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಟ್ರಯಲ್ಸ್‌ನಲ್ಲಿ ಫೋಗಟ್ ಭಾಗವಹಿಸುವುದನ್ನು ಖಚಿತಪಡಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ

ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಆದ್ಯತೆ: ಕೆವಿ ಪ್ರಭಾಕರ್

ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ. ಸ್ಥಳೀಯ ಮತ್ತು ಸಣ್ಣ ಪತ್ರಿಕೆಗಳಿಗೆ ಜಾಹಿರಾತಿನಲ್ಲಿ ತೊಂದರೆ ಆಗಬಾರದು ಎನ್ನುವ ನಿಲುವು ಮುಖ್ಯಮಂತ್ರಿಗಳದ್ದೂ ಆಗಿದೆ, ನನ್ನದೂ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್  ಹೇಳಿದ್ದಾರೆ. ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ

ಪೋಕ್ಸೊ ಆರೋಪಿ ವಚನಾನಂದ ಶ್ರೀ ಜಾಮೀನು ರದ್ದುಗೊಳಿಸಲು ಕೋರ್ಟ್‌ಗೆ ಪೊಲೀಸ್‌ ಮನವಿ

ಪೋಕ್ಸೊ ಪ್ರಕರಣದ ಆರೋಪಿ, ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಪ್ರಕರಣ ದಾಖಲಾಗುವ ಮೊದಲೇ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ  ಮನವಿ ಸಲ್ಲಿಸಿದ್ದಾರೆ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ವರದಿ ಜೊತೆ ಮನವಿ ಸಲ್ಲಿಕೆ ಮಾಡಿದ ತನಿಖಾಧಿಕಾರಿ, ಜಾಮೀನು ರದ್ದು