Featured
ಆಗುಂಬೆಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ
ಶಿವಮೊಗ್ಗ ಜಿಲ್ಲೆಯ ತಿರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿಯ ಮಲಂದೂರಿನಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ. ಕಾಡಾನೆ ತಡರಾತ್ರಿ ಗದ್ದೆಗೆ ನುಗ್ಗಿ ಬೆಳೆ ಹಾಳು ಮಾಡಿದೆ, ಕಾಡಾನೆ ಕಾಟದಿಂದ ಮಲೆನಾಡಿನ ರೈತರು ಕಂಗಾಲಾಗಿದ್ದಾರೆ. ಕಳೆದ ತಿಂಗಳು ಆಗುಂಬೆ ಐಬಿ ಬಳಿ ಕಾಡಾನೆ ಕಾಣಿಸಿಕೊಂಡಿತ್ತು. ಈಗ ಮತ್ತೊಮ್ಮೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಗಾಂಭಿರ್ಯದಿಂದ ರಾಷ್ಟ್ರೀಯ ಹೆದ್ದಾರಿ ದಾಟುತ್ತಿರುವ ವೀಡಿಯೊ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಅರಕಲಗೂಡು, ಶಿವಮೊಗ್ಗ, ಕಡಬ ಮತ್ತು ಚಿಕ್ಕಮಗಳೂರು ಮುಂತಾದ ಪ್ರದೇಶಗಳಲ್ಲಿ
ಬಲೂಚಿಸ್ತಾನ ಪ್ರತ್ಯೇಕ ದೇಶ: ಸಲ್ಮಾನ್ ಖಾನ್ಗೆ ಭಯೋತ್ಪಾದಕ ಪಟ್ಟವಿತ್ತ ಪಾಕ್
ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಪ್ರತ್ಯೇಕ ದೇಶ ಎಂದು ಬಣ್ಣಿಸಿದ್ದರಿಂದ ಪಾಕಿಸ್ತಾನದ ಶಹಬಾಜ್ ಸರ್ಕಾರ ನಟ ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದಕ ಎಂದು ಘೋಷಿಸಿದೆ. ಪಾಕ್ ಗೃಹ ಸಚಿವಾಲಯ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಸಲ್ಮಾನ್ ಖಾನ್ ಇತ್ತೀಚೆಗೆ ಸೌದಿ ಅರೇಬಿಯಾದಲ್ಲಿ ನಡೆದ ಜಾಯ್
ಕೆಎಸ್ಡಿಎಲ್ 451 ಕೋಟಿ ರೂ. ನಿವ್ವಳ ಲಾಭ, 21 ಹೊಸ ಉತ್ಪನ್ನ ಮಾರುಕಟ್ಟೆಗೆ
ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಾರ್ವಜನಿಕ ಉದ್ದಿಮೆ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್ಡಿಎಲ್), 2024-2025 ನೇ ಆರ್ಥಿಕ ವರ್ಷದಲ್ಲಿ ದಾಖಲೆಯ ಸಾಧನೆ ಮಾಡುವ ಮೂಲಕ ಭಾರಿ ಲಾಭದೊಂದಿಗೆ ಮುನ್ನಡೆಯುತ್ತಿದೆ. 2024- 25ರ ಆರ್ಥಿಕ ವರ್ಷದಲ್ಲಿ 1786 ಕೋಟಿ ರೂ. ವಹಿವಾಟು
ರೈತರಿಗೆ ವಂಚಿಸಿದ ಆರೋಪಿಗಳ ರಕ್ಷಣೆಗೆ ಜಮೀರ್ ಪೊಲೀಸ್ ಮೇಲೆ ಒತ್ತಡ ಖಂಡನೀಯ: ಆರ್. ಅಶೋಕ
ರೈತರಿಗೆ ವಂಚಿಸಿದ ಆರೋಪಿಗಳನ್ನು ರಕ್ಷಿಸುವಂತೆ ಮುಖ್ಯಮಂತ್ರಿಗಳ ಆಪ್ತ, ಸಚಿವ ZameerAhmed ಅವರು ಪೊಲೀಸರ ಮೇಲೆ ಒತ್ತಡ ಹಾಕಿರುವುದು ಖಂಡನೀಯ. ಸಚಿವ ಸಂಪುಟ ಸದಸ್ಯರೇ ಹೀಗೆ ಕಾನೂನು ಬಾಹಿರವಾಗಿ ನಡೆದುಕೊಳ್ಳುವುದಾದರೆ ರಾಜ್ಯದಲ್ಲಿ ಸಂವಿಧಾನ, ಕಾನೂನು ನಿಯಮಗಳು ಇದ್ದು ಪ್ರಯೋಜನವೇನು ಎಂದು ಪ್ರತಿಪಕ್ಷ ನಾಯಕ
ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀ
ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್ ಹೇಳಿದರು. ಶ್ರೀ ಜಚನಿ ಅಧ್ಯಯನ ಪೀಠ ಮತ್ತು ಸಂಶೋಧನಾ ಸಂಸ್ಥೆಯ ಪ್ರಾರಂಭೋತ್ಸವದಲ್ಲಿ “ಶಿವ ಸಾಹಿತ್ಯ ಸೂರ್ಯ ಶ್ರೀ ಜಚನಿ”
ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಹಿಳೆ ಬಿಎಂಟಿಸಿ ಬಸ್ಗೆ ಬಲಿ
ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಹಿಳೆ ಬೆಂಗಳೂರಿನ ವಿಜಯನಗರ ಸಮೀಪದ ಹಂಪಿನಗರದಲ್ಲಿ ಬಿಎಂಟಿಸಿ ಬಸ್ಗೆ ಬಲಿಯಾಗಿರುವ ಘಟನೆ ನಡೆದಿದೆ. ಯಲಹಂಕದಿಂದ ಹಂಪಿನಗರದತ್ತ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಹಂಪಿನಗರ ಬಸ್ ನಿಲ್ದಾಣದೊಳಗೆ ಪ್ರವೇಶಿಸುತ್ತಿದ್ದ ವೇಳೆ ಡಿಕ್ಕಿ ಹೊಡೆದು 58 ವರ್ಷದ ಮಹಿಳೆ ಮಾಲಾ ಅಸು ನೀಗಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪ್ರದೋಶ್ಗೆ ಮಧ್ಯಂತರ ಜಾಮೀನು
ರೇಣುಕಾ ಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ಗೆ 20 ದಿನಗಳ ಮಧ್ಯಂತರ ಜಾಮೀನು ಮಂಜೂರಾಗಿದೆ. ಆರೋಪಿ ಪ್ರದೋಶ್ ತಂದೆ ಸುಬ್ಬಾರಾವ್ ಇತ್ತೀಚೆಗೆ ನಿಧನರಾಗಿದ್ದು, ಅವರ ಉತ್ತರಾದಿ ಕ್ರಿಯೆಗಳಿಗಾಗಿ ಜಾಮೀನು ನೀಡಬೇಕೆಂದು ಬೆಂಗಳೂರಿನ 57 ಸಿಸಿಹೆಚ್ ಕೋರ್ಟ್ಗೆ ಅರ್ಜಿ ಹಾಕಲಾಗಿತ್ತು. ಪರಿಶೀಲಿಸಿದ
ಮೂಡಿಗೆರೆ ಹೋಂಸ್ಟೇ ಬಾತ್ರೂಮ್ನಲ್ಲಿ ಕುಸಿದು ಬಿದ್ದು ಯುವತಿ ಸಾವು
ಬೆಂಗಳೂರಿನಿಂದ ಸ್ನೇಹಿತೆಯ ಮದುವೆ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದ ಹೋಂಸ್ಟೇ ಬಾತ್ರೂಮ್ನಲ್ಲಿ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ರಂಜಿತಾ (27) ಮೃತ ಯುವತಿ, ಈಕೆ ಬೇಲೂರು ತಾಲೂಕಿನ ದೇವಲಾಪುರ ಗ್ರಾಮದ ನಿವಾಸಿ. ಶುಕ್ರವಾರ ಈ
ಬಾಗಲಕೋಟೆ ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು
ಬಾಗಲಕೋಟೆಯ ನವನಗರದ 49ನೇ ಸೆಕ್ಟರ್ನಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಬದಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಕೆಲವು ದಿನಗಳಿಂದ ನೆಲಕ್ಕೆ ಬಿದ್ದುಕೊಂಡಿದ್ದ ವಿದ್ಯುತ್ ತಂತಿ ತುಳಿದು ಈ ಸಾವು ಸಂಭವಿಸಿದೆ.
ಬೆಂಗಳೂರಿನಲ್ಲಿ ಮಹಿಳೆಯ ಕೊಂದು ಶವ ಆಟೋದಲ್ಲಿಟ್ಟು ಪ್ರಿಯಕರ ಪರಾರಿ
ಬೆಂಗಳೂರಿನ ತಿಲಕ್ನಗರ ಮುಖ್ಯರಸ್ತೆಯಲ್ಲಿ ನಾಲ್ಕು ಮಕ್ಕಳ ತಾಯಿಯನ್ನು ಹತ್ಯೆಗೈದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ ಆಗಿದ್ದಾನೆ. ಸಲ್ಮಾ(35) ಹತ್ಯೆಯಾದ ಮಹಿಳೆ, ಪ್ರಿಯಕರ ಸುಬ್ಬುಮಣಿ ಕೊಲೆ ಆರೋಪಿ. ಆಟೋದಲ್ಲಿ ಮೃತದೇಹ ಇರುವುದನ್ನು ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೇಸ್ ದಾಖಲಿಸಿಕೊಂಡು ತಿಲಕ್ನಗರ




