Menu

ಸೆಪ್ಟೆಂಬರ್ 1ರಿಂದ ಆನ್ ಲೈನ್ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಮುಳ್ಳಯ್ಯನಗಿರಿ ಪ್ರವೇಶ

ಪ್ರಮುಖ ಪ್ರವಾಸಿತಾಣಗಳಲ್ಲಿ ಒಂದಾದ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ಸೆಪ್ಟೆಂಬರ್ 1ರಿಂದ ಅನ್ವಯವಾಗುವಂತೆ ಹೊಸ ನಿಯಮ ಜಾರಿಗೆ ತಂದಿದೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವುದು ಹಾಗೂ ವಾಹನಗಳ ಸಂಖ್ಯೆ ಹೆಚ್ಚಾಗುವುದರಿಂದ ಉಂಟಾಗುವ ಸಂಚಾರಿ ದಟ್ಟಣೆ ತಗ್ಗಿಸಲು ಜಿಲ್ಲಾಡಳಿತ ಹೊಸ ನಿಯಮ ಜಾರಿಗೆ ತಂದಿದೆ. ಹೊಸ ನಿಯಮದ ಪ್ರಕಾರ ಆನ್ ಲೈ ನ್ ನಲ್ಲಿ ಬುಕ್ಕಿಂಗ್ ಮಾಡಿಕೊಂಡವರಿಗೆ ಮಾತ್ರ ಮುಳ್ಳಯ್ಯನಗಿರಿಗೆ ಪ್ರವೇಶ ದೊರೆಯಲಿದೆ. ಪ್ರತಿದಿನ 600

ರಾಜಸ್ಥಾನ್ ರಾಯಲ್ಸ್ ಕೋಚ್ ಹುದ್ದೆ ತ್ಯಜಿಸಿದ ರಾಹುಲ್ ದ್ರಾವಿಡ್

ಭಾರತದ ಬ್ಯಾಟಿಂಗ್ ದಂತಕತೆ ರಾಹುಲ್ ದ್ರಾವಿಡ್ ಐಪಿಎಲ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಸ್ಥಾನ ತ್ಯಜಿಸಿ ಅಚ್ಚರಿ ಮೂಡಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ 2025ನೇ ಸಾಲಿನ ಐಪಿಎಲ್ ಟೂರ್ನಿ ವೇಳೆಗೆ ಮುಖ್ಯ

ದಂಡ ಪಾವತಿಗೆ ಶೇ.50 ರಿಯಾಯಿತಿ: ವಾರದಲ್ಲಿ 22 ಕೋಟಿ ರೂ.ದಾಖಲೆ ಮೊತ್ತ ಸಂಗ್ರಹ!

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ಒಂದೇ ವಾರದಲ್ಲಿ ದಾಖಲೆಯ 21.86 ಕೋಟಿ ರೂ. ಸಂಗ್ರಹವಾಗಿದೆ. ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರು 21 ಕೋಟಿ 86 ಸಾವಿರ

ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ

`ಮಾನವ ಜಿಪಿಎಸ್’ ಖ್ಯಾತಿಯ ಬಾಗುಖಾನ್ ಹತ್ಯೆಗೈದ ಭಾರತೀಯ ಸೇನೆ

ಶ್ರೀನಗರ: ಪಾಕಿಸ್ತಾನದಿಂದ ಉಗ್ರರನ್ನು ಭಾರತದ ಗಡಿಯೊಳಗೆ ನುಸುಳಲು 100ಕ್ಕೂ ಅಧಿಕ ಬಾರಿ ಸಹಾಯ ಮಾಡಿದ್ದ `ಮಾನವ ಜಿಪಿಎಸ್’ ಎಂದೇ ಖ್ಯಾತಿ ಪಡೆದಿದ್ದ ಉಗ್ರ ಬಾಗು ಖಾನ್ ನನ್ನು ಭಾರತೀಯ ಸೇನೆ ಜಮ್ಮು ಕಾಶ್ಮೀರದಲ್ಲಿ ಎನ್ ಕೌಂಟರ್ ಮಾಡಿದೆ. 1995ರಿಂದ ಜಮ್ಮು ಕಾಶ್ಮೀರದ

ಜೀ ಕನ್ನಡದಲ್ಲಿ ಸೆಪ್ಟೆಂಬರ್ 1ರಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ ಪ್ರಸಾರ

ಬೆಂಗಳೂರು: ಕರ್ನಾಟಕದ ಎಲ್ಲರ ಅಚ್ಚುಮೆಚ್ಚಿನ ವಾಹಿನಿ ಜೀ಼ ಕನ್ನಡ ವಿಭಿನ್ನ ಕಥೆಗಳ ಮೂಲಕ ಪ್ರೇಕ್ಷಕರ ಹೃದಯಕ್ಕೆ ನಿರಂತರವಾಗಿ ಲಗ್ಗೆ ಇಡುತ್ತಾ ಬಂದಿದೆ. ಇದಕ್ಕೂ ಮೊದಲು ಉಘೆ ಉಘೆ ಮಾದೇಶ್ವರ ಮತ್ತು ವಿಷ್ಣು ದಶಾವತಾರ ಎಂಬ ಭಕ್ತಿಪ್ರಧಾನ ಧಾರಾವಾಹಿಗಳನ್ನು ನೀಡಿ ಕನ್ನಡಿಗರ ಮನಗೆದ್ದ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ: ಒಂದೇ ಕುಟುಂಬದ 7 ಮಂದಿ ಸೇರಿ 11 ಜನ ಸಾವು

ರಾಂಬನ್ (ಜಮ್ಮು ಕಾಶ್ಮೀರ): ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕಾಶ್ಮೀರದ ಅವಳಿ ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಭೂಕುಸಿತ ಮತ್ತು ಮೇಘಸ್ಫೋಟದಿಂದ ದಿಢೀರ್ ಪ್ರವಾಹ ಸಂಭವಿಸಿದೆ. ಪ್ರಕೃತಿಯ ವಿಕೋಪದ ಪ್ರತ್ಯೇಕ ಘಟನೆಗಳಲ್ಲಿ ದಂಪತಿ, ಐವರು ಮಕ್ಕಳು ಸೇರಿ

ರಾಮಕೃಷ್ಣ ಹೆಗಡೆ ಅವರನ್ನು ಏಣಿಯಂತೆ ಬಳಸಿಕೊಂಡು ಬಿಸಾಡಿದರು: ಡಿಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ

ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಸಭ್ಯ ಕಾಮೆಂಟ್: 5 ಯೂಟ್ಯೂಬ್ ಚಾನೆಲ್ ವಿರುದ್ಧ ಎಫ್‌ಐಆರ್

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಸಭ್ಯವಾಗಿ ಕಾಮೆಂಟ್ ಮಾಡಿದ್ದ ಐದು ಯೂಟ್ಯೂಬ್ ಚಾನೆಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಜಯಲಕ್ಷ್ಮಿ ಬಗ್ಗೆ ಯೂಟ್ಯೂಬ್ ಚಾನೆಲ್‌ವೊಂದು ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದ ವಿಡಿಯೋಗೆ ಕೆಲವರು ವಿಜಯಲಕ್ಷ್ಮಿ ಬಗ್ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದರು.

ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ: ಹಂದಿ ಸಾಗಾಟ ನಿಷೇಧ

ಚಿಕ್ಕಬಳ್ಳಾಪುರ: ಆಫ್ರಿಕನ್ ಹಂದಿ ಜ್ವರ ಕರ್ನಾಟಕದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದು, ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದಲ್ಲಿರುವ ಫಾರ್ಮ್ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಹಂದಿ ಸಾಗಾಟ ನಿಷೇಧಿಸಲಾಗಿದೆ. ಆಗಸ್ಟ್ 19ರಿಂದ 10 ದಿನಗಳ ಅಂತರದಲ್ಲಿ ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ