Featured
ಕೋರ್ಟ್ ಆದೇಶಿಸಿದ್ದರೂ ಹಾಸಿಗೆ, ದಿಂಬು ಕೊಡುತ್ತಿಲ್ಲ: ದರ್ಶನ್ ವಕೀಲರಿಂದ ಮತ್ತೆ ಅರ್ಜಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್ಗೆ ಹಾಸಿಗೆ, ದಿಂಬು ನೀಡುವಂತೆ ಕೋರ್ಟ್ ಇತ್ತೀಚೆಗೆ ಆದೇಶಿಸಿದ್ದರೂ ಅಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ಅವರ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ತುಂಬಾ ಚಳಿಯಿದೆ, ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ಗೆ ಕಷ್ಟವಾಗುತ್ತಿದೆ. ಹೀಗಾಗಿ ದಿಂಬು, ಹಾಸಿಗೆ ಕೊಡಿಸಬೇಕು ಎಂದು ಮನವಿ ಮಾಡಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯ ದಿಂಬು,
ದೇಶದ ಭವಿಷ್ಯಕ್ಕೆ ಬುನಾದಿ ಹಾಕುವಲ್ಲಿ ಇಂಜಿನಿಯರ್ ಗಳ ಜವಾಬ್ದಾರಿ ಮಹತ್ವದ್ದು: ಡಿಕೆ ಶಿವಕುಮಾರ್
“ಈ ದೇಶದ ಭವಿಷ್ಯಕ್ಕೆ ಬುನಾದಿ ಹಾಕುವಲ್ಲಿ ಇಂಜಿನಿಯರ್ ಗಳ ಜವಾಬ್ದಾರಿ ಮಹತ್ವದ್ದಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂಜಿನಿಯರುಗಳ ದಿನಾಚರಣೆ ಅಂಗವಾಗಿ ನಗರದ ಕೆ.ಆರ್. ವೃತ್ತದಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಪುಷ್ಪನಮನ
ಲಿವ್ ಇನ್ ಟುಗೆದರ್: ಮದುವೆ ನಿರಾಕರಣೆ ಗಂಭೀರ ಅಪರಾಧವಲ್ಲವೆಂದ ಅಲಹಾಬಾದ್ ಹೈಕೋರ್ಟ್
ಲಿವ್ ಇನ್ ಟುಗೆದರ್ನಲ್ಲಿದ್ದ ವ್ಯಕ್ತಿ ನಂತರ ಮದುವೆಗೆ ನಿರಾಕರಿಸಿದರೆ ಅದು ಗಂಭೀರ ಅಪರಾಧವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ನಾಲ್ಕು ವರ್ಷ ಒಪ್ಪಿತ ದೈಹಿಕ ಸಂಬಂಧ ಹೊಂದಿದ್ದರೂ ಮದುವೆಯ ಭರವಸೆಯನ್ನು ಮುರಿದರೆ ಅದು ಕಾನೂನಿನ ದೃಷ್ಟಿಯಲ್ಲಿ ಅಪರಾಧವಲ್ಲ ಎಂದು ಕೋರ್ಟ್
ನೆಲಮಂಗಲದಲ್ಲಿ 24ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ನೆಲಮಂಗಲದ ಅಪಾರ್ಟ್ಮೆಂಟ್ವೊಂದರ 24ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಲಸೂರು ಮೂಲದ ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡವರು. ಲೋಕೇಶ್ನ ಅಕ್ಕ ಹಾಗೂ ಭಾವ ಇದೇ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದರು. ಭಾವ ಕೆಲಸದ ಮೇಲೆ ಹೊರಗೆ ಹೋಗಿದ್ದರು.
ದಸರಾ ಮತ್ತು ಬಾನು ಮುಷ್ತಾಕ್: ಯಾವುದೇ ಹಕ್ಕು ಉಲ್ಲಂಘನೆಯಾಗಿಲ್ಲವೆಂದು ಮೂರು ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಸರ್ಕಾರ ಸಾಹಿತಿ, ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೈಕೋರ್ಟ್ಗೆ ಸಲ್ಲಿಕೆಯಾಗಿರುವ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿಗಳ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ
ಸಮಾನತೆಯ ವಿಚಾರದಲ್ಲಿ ಮುಸ್ಲಿಮರನ್ನು ಪ್ರಶ್ನಿಸುವ ಧೈರ್ಯ ಸಿಎಂಗೆ ಇದೆಯಾ: ಆರ್.ಅಶೋಕ
ಇಸ್ಲಾಂ ಧರ್ಮದಲ್ಲಿ ಸಮಾನತೆ ಇದ್ದಿದ್ದರೆ, ಇಸ್ಲಾಂ ಶಾಂತಿ ಪ್ರಿಯ ಮತವಾಗಿದ್ದರೆ, ಮುಸ್ಲಿಮರಲ್ಲಿ ಭ್ರಾತೃತ್ವದ ಭಾವನೆ ಇದ್ದಿದ್ದರೆ ಪಹಲ್ಗಾಮ್ ನಲ್ಲಿ ಉಗ್ರವಾದಿಗಳು ಪ್ರವಾಸಿಗರ ಹೆಸರು ಕೇಳಿ, ಹೆಣ್ಣು ಮಕ್ಕಳ ಹಣೆಯಲ್ಲಿ ಕುಂಕುಮ ನೋಡಿ, ಕಲ್ಮಾ ಪಠಣೆ ಮಾಡಲು ಹೇಳಿ, ಹಿಂದುಗಳನ್ನು ಮಾತ್ರ ಯಾಕೆ
ರಜೆಯಲ್ಲಿ ಊರಿಗೆ ಬಂದಿದ್ದ ಕೋಲಾರದ ಯೋಧ ಹೃದಯಾಘಾತಕ್ಕೆ ಬಲಿ
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಆಚಂಪಲ್ಲಿ ಗ್ರಾಮದಲ್ಲಿ ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುನಿ ನಾರಾಯಣ ಹೃದಯಾಘಾತದಿಂದ ಮೃತಪಟ್ಟವರು. ಮುನಿ ನಾರಾಯಣ ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕಳೆದ ಎರಡು ತಿಂಗಳ ಹಿಂದೆ ರಜೆಯ ಮೇಲೆ
ಬೆನ್ನು ನೋವೆಂದು ಬಾಸ್ಗೆ ಮೆಸೇಜ್: ಹತ್ತೇ ನಿಮಿಷದಲ್ಲಿ ಉದ್ಯೋಗಿ ಸಾವು
ಖಾಸಗಿ ಕಂಪನಿಯೊಂದರ ಉದ್ಯೋಗಿ 40 ವರ್ಷದ ಶಂಕರ್ ಎಂಬವರು ಬೆನ್ನು ನೋವು ಎಂದು ಸಿಕ್ ಲೀವ್ ಕೇಳಿ ಬಾಸ್ಗೆ ಮೆಸೇಜ್ ಮಾಡಿದ ಹತ್ತೇ ನಿಮಿಷಗಳಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಾಸ್ ಕೆ. ವಿ. ಅಯ್ಯರ್ ಎಂಬವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಹಂಚಿಕೊಂಡ
ಅಭಿಮಾನಿಗಳ ನಿರೀಕ್ಷೆಯಂತೆ ಏಷ್ಯಾಕಪ್ ಟೂರ್ನಿಯಲ್ಲಿ ಪಾಕ್ಗೆ ಸೋಲುಣಿಸಿ ಬೀಗಿದ ಭಾರತ
ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿ ಬಹಳಷ್ಟು ಕುತೂಹಲ, ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದಂತೆಯೇ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 7 ವಿಕೆಟ್ ಅಂತರದೊಂದಿಗೆ ಭರ್ಜರಿ ಗೆಲುವನ್ನು ತನ್ನದಾಗಿಸಿಕೊಂಡಿದೆ. ಆರಂಭಿಕ ಬ್ಯಾಟರ್ ಅಭೀಷೇಕ್ ಶರ್ಮಾ, ನಾಯಕ
ರಾಯಚೂರಿನಲ್ಲಿ 120ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್ ಬಂದ್
ರಾಯಚೂರು ನಗರ ಸೇರಿ ಜಿಲ್ಲೆಯಾದ್ಯಂತ ಒಟ್ಟು 120ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಪತ್ತೆ ಮಾಡಿರುವ ಆರೋಗ್ಯ ಇಲಾಖೆ, ಅವರ ಕ್ಲಿನಿಕ್ಗಳನ್ನು ಬಂದ್ ಮಾಡಿದೆ. ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಆರ್ಎಂಪಿ ವೈದ್ಯರ ವಿರುದ್ಧ ಎಂಎಲ್ಸಿ ಶರಣಗೌಡ ಬಯ್ಯಾಪುರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಿಗೆ