Featured
ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶನ: ಯುವಕರಿಬ್ಬರ ಬಂಧನ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬಮ್ಮನಟ್ಟಿ ಗ್ರಾಮದ ನಿವಾಸಿ ಹಾಲಪ್ಪ ದ್ಯಾಮಪ್ಪ ಕಾಟಾಬಳಿ, ಹುಕ್ಕೇರಿ ತಾಲೂಕಿನ ಚಿಕಲದಿನ್ನಿ ಗ್ರಾಮದ ನಾಗರಾಜ ದ್ಯಾಮಪ್ಪ ಕಟಾಬಳಿ(21) ಬಂಧಿತ ಯುವಕರು. ಹಾಲಪ್ಪ ಹಾಗೂ ದ್ಯಾಮಪ್ಪ ಶಹಬಂದರ ಕ್ರಾಸ್‌ನ ವಾಲ್ಮೀಕಿ ಸರ್ಕಲ್ ಬಳಿ ಕೈಯಲ್ಲಿ ತಲ್ವಾರ್ ಹಿಡಿದು ಓಡಾಡಿದ್ದರು. ಸಾರ್ವಜನಿಕರನ್ನು ನಿಂದಿಸಿ, ಭಯದ ವಾತಾವರಣ ಹುಟ್ಟಿಸಿದ್ದರು
ಬೈಕ್‌ಗೆ ಲಾರಿ ಡಿಕ್ಕಿ: ಪೊಲೀಸ್ ಕಾನ್ಸ್‌ಟೇಬಲ್ ಸಾವು
ಹಾಸನ ಹೊರವಲಯದ ಕೆಂಚನಹಳ್ಳಿ ಬಳಿ ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಪೊಲೀಸ್ ಕಾನ್ಸ್‌ಟೇಬಲ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಕಾಶ್ (38) ಮೃತಪಟ್ಟ ಪೊಲೀಸ್ ಕಾನ್ಸ್‌ಟೇಬಲ್. ಅವರು 1ನೇ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರಕಾಶ್ ಹಾಸನ
ಪಾಕ್ ಪರ ಬೇಹುಗಾರಿಕೆ ಮಾಡುತ್ತಿದ್ದ ಇಬ್ಬರ ಬಂಧನ
ಭಾರತದ ವಿರುದ್ಧ ಉಗ್ರರ ಕಾರ್ಯಾಚರಣೆಯನ್ನು ಬೆಂಬಲಿಸುತ್ತ ಬಂದಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಕೆಲಸ ಮಾಡುತ್ತಿದ ಇಬ್ಬರನ್ನು ಪಂಜಾಬ್‌ನ ಅಮೃತಸರ ಪೊಲೀಸರು ಬಂಧಿಸಿದ್ದಾರೆ. ಅಮೃತಸರ ಗ್ರಾಮೀಣ ಪೊಲೀಸರು ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆನೇಕಲ್ ತಾಲೂಕು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ: ಡಿಕೆ ಶಿವಕುಮಾರ್
ಆನೇಕಲ್, ಸರ್ಜಾಪುರಕ್ಕೆ ಮೆಟ್ರೋ ವಿಸ್ತರಣೆಗೆ ಡಿಪಿಆರ್ ತಯಾರಾಗುತ್ತಿದೆ. ಆನೇಕಲ್ ತಾಲೂಕು ವ್ಯಾಪ್ತಿಯನ್ನು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಆನೇಕಲ್ ತಾಲೂಕು ಪಂಚಾಯಿತಿ ಹಾಗೂ ಹೆನ್ನಾಗರ ಗ್ರಾಮ ಪಂಚಾಯಿತಿ ವತಿಯಿಂದ ಎಚ್.ಹೊಸಹಳ್ಳಿ
ರಾಜಸ್ಥಾನ ಅಂತರರಾಷ್ಟ್ರೀಯ ಗಡಿಯಲ್ಲಿ ಬಿಎಸ್‌ಎಫ್ ವಶಕ್ಕೆ ಪಾಕ್ ರೇಂಜರ್
ರಾಜಸ್ಥಾನದ ಅಂತರರಾಷ್ಟ್ರೀಯ ಗಡಿಯಲ್ಲಿ ಭದ್ರತಾ ಪಡೆ ಪಾಕಿಸ್ತಾನಿ ರೇಂಜರ್ ಒಬ್ಬರನ್ನು ವಶಕ್ಕೆ ಪಡೆದಿದೆ. ಬಿಎಸ್‌ಎಫ್ ಕಾನ್‌ಸ್ಟೆಬಲ್ ಪೂರ್ಣಮ್ ಕುಮಾರ್ ಸಾಹು ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಪಂಜಾಬ್‌ನ ಫಿರೋಜ್‌ಪುರ ವಲಯದಲ್ಲಿ ರೈತರನ್ನು ಕರೆದೊಯ್ಯುತ್ತಿ ದ್ದಾಗ ಆಕಸ್ಮಿಕವಾಗಿ
ಪಹಲ್ಗಾಮ್ ದಾಳಿಗೂ ಮೊದಲೇ ಎಚ್ಚರಿಸಿತ್ತಾ ಗುಪ್ತಚರ ಇಲಾಖೆ
ಉಗ್ರರು ಕಾಶ್ಮೀರದಲ್ಲಿ ದಾಳಿ ನಡೆಸಬಹುದು ಎಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಹತ್ಯೆಗೆ ಮೊದಲೇ ಗುಪ್ತಚರ ಇಲಾಖೆಯು ಎಚ್ಚರಿಕೆ ನೀಡಿದ್ದ ವಿಚಾರ ಬಹಿರಂಗಗೊಂಡಿದೆ. ಶ್ರೀನಗರ ಮತ್ತು ಸುತ್ತಮುತ್ತಲಿನ ಹೋಟೆಲ್‌ಗಳಲ್ಲಿ ತಂಗಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆ ಮತ್ತು
ಪಹಲ್ಗಾಂ ದಾಳಿ ಬೆನ್ನಲ್ಲೇ ದೇಶದ ಶಸ್ತ್ರಾಸ್ತ್ರ ಕಾರ್ಖಾನೆಗಳಲ್ಲಿ ದೀರ್ಘ ರಜೆ ರದ್ದು
ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನತೆ ತೀವ್ರಗೊಂಡಿದ್ದು, ಯುದ್ಧ ಭೀತಿ ಆವರಿಸಿರುವ ಮಧ್ಯೆಯೇ ದೇಶಾದ್ಯಂತ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ದೀರ್ಘ ರಜೆ ರದ್ದುಗೊಳಿಸಲಾಗಿದೆ. 12 ಶಸ್ತ್ರಾಸ್ತ್ರ ಕಾರ್ಖಾನೆಗಳ ಸಮೂಹವಾದ ಮುನಿಷನ್ಸ್
ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಾಸ್ 60 ಸಾವಿರ ಕೋಟಿ ಮಾತ್ರ: ಸಿಎಂ
ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಶೇ50 ರಷ್ಟು ತೆರಿಗೆ ರಾಜ್ಯಗಳಿಗೆ ವಾಪಾಸ್ ಕೊಡಬೇಕು ಎಂದು ಕೇಂದ್ರದ ಮೇಲೆ ಒತ್ತಡ ಹೇರಿದ್ದರು. ಈಗ ಇವರೇ ಪ್ರಧಾನಿ ಆದಾಗ ರಾಜ್ಯಗಳಿಗೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದ್ದಾರೆ. ಅನ್ಯಾಯಕ್ಕೆ ಒಳಗಾಗಿರುವ ದಕ್ಷಿಣದ ರಾಜ್ಯಗಳ ಜೊತೆ ಸೇರಿ ಅನ್ಯಾಯದ
ಯುವ ಕಾಂಗ್ರೆಸ್ ಮೂಲಕ ಬೆಳೆದವರು ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದಾರೆ: ಡಿ.ಕೆ.ಸುರೇಶ್
“ರಾಜ್ಯದ ಮಂತ್ರಿ ಮಂಡಲದಲ್ಲಿರುವ ಶೇ 50 ಕ್ಕೂ ಹೆಚ್ಚು ನಾಯಕರು ಯುವ ಕಾಂಗ್ರೆಸ್ ನಿಂದ ಬಂದವರು. ರಾಮಲಿಂಗಾರೆಡ್ಡಿ ಅವರು, ಯು.ಟಿ.ಖಾದರ್ , ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಹೀಗೆ ಹಲವಾರು ನಾಯಕರು ಕಾಂಗ್ರೆಸ್ ಪಕ್ಷದ ಆಸ್ತಿಗಳಾಗಿ ಬೆಳೆದಿದ್ದಾರೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್
ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್
ಕಾರ್ಯಕ್ರಮವೊಂದರಲ್ಲಿ ಕನ್ನಡಿಗರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿ ಕನ್ನಡಾಭಿಮಾನವನ್ನು ಮೆರೆದಾಗ ಅದನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ) ಬೆಂಗಳೂರು ನಗರ ಘಟಕದ ಅಧ್ಯಕ್ಷ




