Featured
ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಮುಂದೆ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ
ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ ತಾವು ಬಾಲ್ಯದಲ್ಲಿ ಹಾಡುತ್ತಿದ್ದ, ವೀರ ಕುಣಿತದಲ್ಲಿ ನರ್ತಿಸುತ್ತಿದ್ದದ್ದನ್ನು ಉಲ್ಲೇಖಿಸಿ ಲಾವಣಿ ಹಾಡಿದರು. ಸಿದ್ದರಾಮೇಶ್ವರ ಪೂಜೆಗೆ ವೀರಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಕುಣಿತ ಸೇರಿದ್ದೆ.
ನವೀಕೃತ ಸಂಪನ್ಮೂಲ ಬಳಸಿ ಭೂಮಿ ಉಳಿಸೋಣ
ನವೀಕರಿಸಬಹುದಾದ ಶಕ್ತಿಯು ಭೂಮಿಗೆ ಗೇಮ್-ಚೇಂಜರ್ ಆಗಿದ್ದು, ಅದು ಅಗ್ಗದ ಮತ್ತು ಹೆಚ್ಚು ಸುಸ್ಥಿರ ಶಕ್ತಿಯನ್ನು ಒದಗಿಸಬಹುದು. ಪಳೆಯುಳಿಕೆ ಇಂಧನ ಬಳಕೆ ಬಿಟ್ಟು, ೨೦೩೦ ರ ಹೊತ್ತಿಗೆ ಶೇ. ೬೦ ಕ್ಕಿಂತ ಹೆಚ್ಚು ನವೀಕರಿಸಬಹುದಾದ ಇಂಧನವನ್ನು ಜಗತ್ತಿನ ಎಲ್ಲ ದೇಶಗಳು ಉತ್ಪಾದಿಸಲು ಮತ್ತು
ಸ್ಪೀಕರ್ ಖಾದರ್‌ಗೆ ಮಾತ್ರವಲ್ಲ, ನನಗೂ ಬೆದರಿಕೆ ಕರೆಗಳು ಬರುತ್ತವೆ ಎಂದ ಮುಖ್ಯಮಂತ್ರಿ
ಸ್ಪೀಕರ್ ಯು.ಟಿ ಖಾದರ್ ಗುರುವಾರ ಬೀದರ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದರು. ಈ ವಿಚಾರವಾಗಿ ಮಾಧ್ಯಮದವರು ಶುಕ್ರವಾರ ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಪ್ರಶ್ನಿಸಿದಾಗ , ನನಗೂ ಬೆದರಿಕೆ ಕರೆಗಳು ಬರುತ್ತವೆ. ಏನು ಮಾಡುವುದು, ಈ
ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ: ಡಿ.ಕೆ. ಶಿವಕುಮಾರ್
ಈ ವರ್ಷ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಫಾ) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
ಬಿಜೆಪಿ, ಆರೆಸ್ಸೆಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ತೂಬಿನಕೆರೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ನೂರು ವರ್ಷಗಳ ಇತಿಹಾಸ ನೋಡಿದರೆ ಅವರು
ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ
ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ, ಕೃಷಿ ಮಾರುಕಟ್ಟೆ ಸಚಿವ ಎಸ್. ಶಿವಾನಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜಯಪುರ ನಗರ ಶಾಸಕ ಬಸವನಗೌಡ ಆರ್. ಪಾಟೀಲ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ
ಪಾಕಿಸ್ತಾನ ಜಿಂದಾಬಾದ್ ಎಂದಾಗಲೇ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಿತ್ತು: ಆರ್ ಅಶೋಕ
ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗಲೇ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯ
ಭಾರತ ತೊರೆದ ತನ್ನ ಪ್ರಜೆಗಳು ದೇಶ ಪ್ರವೇಶಿಸದಂತೆ ಅಟ್ಟಾರಿ ಗಡಿ ಬಂದ್ ಮಾಡಿದ ಪಾಕ್
ಪಹಲ್ಗಾಂನಲ್ಲಿ ಉಗ್ರರು ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆ ಮಾಡಿದ ಬಳಿಕ ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಸೃಷ್ಟಿಯಾಗಿದೆ. ಭಾರತವು ತನ್ನ ನೆಲದಿಂದ ಪಾಕ್ ಪ್ರಜೆಗಳನ್ನು ತವರಿಗೆ ವಾಪಸ್ ಆಗುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೆ ಪಾಕಿಸ್ತಾನವು ತನ್ನಲ್ಲಿಗೆ ಬರುತ್ತಿರುವ ತನ್ನ
ಇಂದಿನಿಂದ ಚಾರ್‌ಧಾಮ್ ಯಾತ್ರೆ ಆರಂಭ, ವಿಶೇಷ ಭದ್ರತೆ
ಪವಿತ್ರ ಚಾರ್‌ಧಾಮ್ ಯಾತ್ರೆಯು ಇಂದಿನಿಂದ ಆರಂಭಗೊಳ್ಳಲಿದೆ. ಈ ಬಾರಿ ಚಾರ್‌ಧಾಮ್ ಯಾತ್ರೆಗೆ ವಿಶೇಷ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಈ ಪ್ರಯಾಣ ಮಾರ್ಗದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುತ್ತಿದೆ. ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಚಾರ್‌ಧಾಮ್ ಯಾತ್ರೆ ಸಾಗುವ ಹಾದಿಯ ಮತ್ತು ಸುತ್ತಮುತ್ತ
ಎಸ್ಎಸ್ಎಲ್ಸಿ ಫಲಿತಾಂಶ: ದಕ್ಷಿಣ ಕನ್ನಡ ಮೊದಲ ಸ್ಥಾನ
2024-2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಈ ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ




