Menu

ಪಾಕ್‌ ವಿರುದ್ಧ ವಿಶ್ವ ಸಂಸ್ಥೆಯಲ್ಲಿ ಭಾರತ ಕಿಡಿಕಿಡಿ

ಪಹಲ್ಗಾಂನಲ್ಲಿ ಉಗ್ರರ ದಾಳಿಯ ಬಳಿಕ ಭಾರತ-ಪಾಕಿಸ್ತಾನದ ಸಂಬಂಧ  ಹದಗೆಡುತ್ತಿದ್ದು, ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕಿಡಿ ಕಾರಿದೆ. ಪಾಕಿಸ್ತಾನವನ್ನು ಜಾಗತಿಕ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿರುವ ಧೂರ್ತ ದೇಶ ಎಂದು ಹೇಳಿದೆ. ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಚೇರಿಯ ‘ವಿಕ್ಟಿಮ್ಸ್ ಆಫ್ ಟೆರರಿಸಂ ಅಸೋಸಿಯೇಷನ್ ನೆಟ್‌ವರ್ಕ್’ ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತದ ಕಾಯಂ ಉಪ ಪ್ರತಿನಿಧಿ, ರಾಯಭಾರಿ ಯೋಜನಾ ಪಟೇಲ್, ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸಿ ತರಬೇತಿ

ಬಸವಣ್ಣ ಸ್ಮರಣೆ ಪ್ರತಿಯೊಬ್ಬ ಕನ್ನಡಿಗ ಹಾಗೂ ಭಾರತೀಯನ ಕರ್ತವ್ಯ: ಸಿಎಂ

ಬಸವಣ್ಣನಂಥವರನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು.  ಬೆಂಗಳೂರಿನಲ್ಲಿ ಬಸವ ಸಮಿತಿ  ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು

ಜೆನೆರಿಕ್‌ ಮೆಡಿಸಿನ್‌ ಪೂರೈಕೆ ಬಂದ್‌ ಮಾಡಿದ ಭಾರತ: ಹೈರಾಣಾದ ಪಾಕ್‌ ವೈದ್ಯ ವಲಯ

ಇಸ್ಲಾಮಾಬಾದ್‌: ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಭಾರತವು ಪಾಕಿಸ್ತಾನದೊಂದಿಗಿನ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದ ಬಳಿಕ ಪಾಕ್‌ ವಿರುದ್ಧ ಪ್ರತೀಕಾರಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಿರುವುದಾಗಿ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಆದೇಶಿಸಿರುವ ಮಧ್ಯೆಯೇ ಆ ದೇಶದಲ್ಲಿ ಅಗತ್ಯ ಔಷಧ ಬಿಕ್ಕಟ್ಟು ತೀವ್ರಗೊಂಡಿದೆ.

ಕಾನೂನು ಬಲ್ಲ ವಕೀಲರ ಜವಾಬ್ದಾರಿ ಇಂದು ಹೆಚ್ಚಾಗಿದೆ: ಸಿದ್ದರಾಮಯ್ಯ

ಪ್ರಜಾಪ್ರಭುತ್ವದ ಸಂಸ್ಥೆಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಸಮಾಜದ ಸಮ ಬಗೆಹರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕಾನೂನು ಬಲ್ಲ ವಕೀಲರ ಜವಾಬ್ದಾರಿ ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಕೀಲರ ಸಂಘದ ವತಿಯಿಂದ ಏರ್ಪಡಿಸಿದ್ದ

ಕೋಲ್ಕತ್ತಾದ ಹೋಟೆಲ್‌ನಲ್ಲಿ 14 ಮಂದಿ ಬೆಂಕಿಗೆ ಬಲಿ

ಕೋಲ್ಕತ್ತಾದ ಹೋಟೆಲ್‌ನಲ್ಲಿ ಬೆಂಕಿ ದುರಂತ ನಡೆದಿದ್ದು, ಕನಿಷ್ಠ 14 ಜನರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ರಿತುರಾಜ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ. 14 ಶವಗಳನ್ನು

ಸ್ಪಾರ್ ಎಕ್ಸ್’ ಮೂಲಕ ಜಪಾನಿನಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹೊಸ ಕಲಿಕಾ ಅನುಭವ

ಮಕ್ಕಳಲ್ಲಿ ಜಾಗತಿಕ ಮಟ್ಟದ ಉದ್ಯಮದ ಮನೋಭಾವ ಮೂಡಿಸಲು ಲರ್ನ್ ಎನ್ ಇನ್ಸ್ಪೈರ್ (LIN) ಹಾಗೂ ನಿಶ್ಚಲ್ಸ್ ಸ್ಮಾರ್ಟ್ ಲರ್ನಿಂಗ್ ಸೊಲ್ಯೂಷನ್ಸ್ ಸಹಯೋಗದಲ್ಲಿ ‘ಸ್ಪಾರ್ ಎಕ್ಸ್’ ಯೋಜನೆ ಮೂಲಕ ಬೆಂಗಳೂರಿನ 6 ಶಾಲೆಗಳು ಸೇರಿದಂತೆ ದೇಶದ ಒಟ್ಟು 9 ಪ್ರತಿಷ್ಠಿತ ಶಾಲೆಗಳ 32

ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದ ಕೆಕೆಆರ್ ಆಸೆ ಜೀವಂತ

ಸಂಘಟಿತ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 14 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅದರದ್ದೇ ನೆಲದಲ್ಲಿ ಸೋಲಿಸಿ ಐಪಿಎಲ್ ನಲ್ಲಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ದೆಹಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 9

ಜನರ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ ಸಲ್ಲದು: ಪಾಲಿಕೆ ಆಯುಕ್ತರಿಗೆ ಭೈರತಿ ಸುರೇಶ್ ಸೂಚನೆ

ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಗರಾಭಿವೃದ್ಧಿ ಮತ್ತು ಯೋಜನಾ ಖಾತೆ ಸಚಿವ ಬಿ.ಎಸ್.ಸುರೇಶ, ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಪಾಲಿಕೆಗಳ ವ್ಯಾಪ್ತಿಯಲ್ಲಿನ

ಉಗ್ರರ ವಿರುದ್ಧದ ಕಾರ್ಯಾಚರಣೆಗೆ ಪ್ರಧಾನಿ ಮೋದಿ ಸೇನೆಗೆ ಗ್ರೀನ್ ಸಿಗ್ನಲ್!

ಪಹಲ್ಗಾವ್ ನಲ್ಲಿ ಉಗ್ರರು ನಡೆದ ಮಾರಣಾಂತಿಕ ದಾಳಿಗೆ ಪ್ರತಿಯಾಗಿ ನಡೆಸುವ ಕಾರ್ಯಾಚರಣೆ ನಡೆಸಲು ಭಾರತೀಯ ಸೇನೆಗೆ ಪ್ರಧಾನಿ ನರೇಂದ್ರ ಮೋದಿ ಪೂರ್ಣ ಅಧಿಕಾರ ನೀಡಿದ್ದಾರೆ. ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಉಗ್ರರು ಹತ್ಯೆಗೈದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಗುಜರಾತ್ ನಲ್ಲಿ ಅಕ್ರಮ ವಲಸಿಗರ 800ಕ್ಕೂ ಹೆಚ್ಚು ವಲಸಿಗರ ಮನೆ ನೆಲಸಮ!

ಪಹಲ್ಗಾಮ್‌ ಉಗ್ರರ ದಾಳಿ ಬೆನ್ನಲ್ಲೇ ಗುಜರಾತ್‌ನಲ್ಲಿ ಅಕ್ರಮ ವಲಸಿಗರ ವಿರುದ್ಧ ಬೃಹತ್‌ ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಗಿದ್ದು, 800ಕ್ಕೂ ಹೆಚ್ಚು ಮನೆ ನೆಲಸಮ ಮಾಡಲಾಗಿದೆ. ದೇಶದಲ್ಲೇ ನಡೆದ ಅತಿ ದೊಡ್ಡ ಅಕ್ರಮ ಬುಲ್ಡೋಜರ್‌ ಕಾರ್ಯಾಚರಣೆ ಇದಾಗಿದೆ. ಅದಕ್ಕಾಗಿ 74 ಬುಲ್ಡೋಜರ್‌ಗಳು, 200 ಟ್ರಕ್‌ಗಳು,