Menu

ಮುಂದಿನ ಜೂನ್‌ ಒಳಗೆ ತುಂಗಭದ್ರಾ ಡ್ಯಾಂನ ಎಲ್ಲ ಗೇಟ್‌ ಬದಲಾವಣೆ: ಡಿಕೆ ಶಿವಕುಮಾರ್‌

“2026ರ ಜೂನ್ ತಿಂಗಳ ವೇಳೆಗೆ ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಗೇಟ್ ಗಳನ್ನು ಬದಲಾವಣೆ ಕಾರ್ಯ ಪೂರ್ಣಗೊಳ್ಳಲಿದ್ದು, ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಭರವಸೆ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ   ವಿಧಾನ  ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದರು. ಕಾಂಗ್ರೆಸ್ ಸದಸ್ಯ ಬಸನಗೌಡ ಬಾದರ್ಲಿ ಅವರು ತುಂಗಭದ್ರಾ ಅಣೆಕಟ್ಟು ಗೇಟ್ ಗಳ ಬದಲಾವಣೆಗಳ ಬಗ್ಗೆ

ಬಿಜೆಪಿ ವಿರೋಧದ ನಡುವೆಯೇ ದ್ವೇಷ ಭಾಷಣ ಅಪರಾಧಗಳ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಪ್ರತಿಪಕ್ಷ ಬಿಜೆಪಿ ಸದಸ್ಯರ‌ ತೀವ್ರ ವಿರೋಧ ಮತ್ತು ಪ್ರತಿಭಟನೆ ಸಭಾತ್ಯಾಗದ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಬೆಳಗಾವಿ  ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಕಲಾಪದಲ್ಲಿ  ಅಂಗೀಕಾರಗೊಂಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಡನೆಯಾಗಿದ್ದ ವಿಧೇಯಕ ಕುರಿತು

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿಗೆ ದಿಲ್ಲಿ ಹೈಕೋರ್ಟ್ ಚಾಟಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಸೋನಿಯಾಗಾಂಧಿ ಮತ್ತು ರಾಹುಲ್‌ಗಾಂಧಿ ಅವರ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ದಾಖಲಿಸುವ ವಿಚಾರದಲ್ಲಿ ಕಾನೂನು ಪ್ರಕ್ರಿಯೆಗೆ ಸಂಬಂಧಿಸಿದ ವಿಧಿ ವಿಧಾನಗಳನ್ನು (ಪ್ರೊಸೀಜರ್) ಗಾಳಿಗೆ ತೂರಿದೆ ಎಂಬುದನ್ನು ದೆಹಲಿ ಹೈಕೋರ್ಟ್ ಪರೋಕ್ಷವಾಗಿ ಎತ್ತಿ ತೋರಿದೆ.

ಬೆಂಗಳೂರು-ಮೈಸೂರು ಕಾರಿಡಾರ್ ಯೋಜನೆಯಲ್ಲಿ ಬದಲಾವಣೆ ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ಬೆಳಗಾವಿ: ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಜಲಸಂಪನ್ಮೂಲ

ಸರಕಾರಿ ಕನ್ನಡ ಶಾಲೆ ಮುಚ್ಚಲ್ಲ, 11 ಸಾವಿರ ಶಿಕ್ಷಕರ ನೇಮಕ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯದಲ್ಲಿ ಯಾವುದೇ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗುರುವಾರ ವಿಧಾನಸಭೆಯಲ್ಲಿ ಶಾಸಕ ಶರಣು ಸಲಗರ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದರು. ಸರಕಾರಿ

ವಿಜಯ್ ಹಜಾರೆ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ: ಕೆಎಲ್ ರಾಹುಲ್, ಪ್ರಸಿದ್ಧ ಕೃಷ್ಣಗೆ ಸ್ಥಾನ

ಬೆಂಗಳೂರು: ಡಿಸೆಂಬರ್ 24 ರಿಂದ ಆರಂಭವಾಗಲಿರುವ ವಿಜಯ್ ಹಜಾರೆ ಏಕದಿನ ಟ್ರೋಫಿಗೆ ಪ್ರಕಟಿಸಲಾದ ಕರ್ನಾಟಕ ತಂಡದಲ್ಲಿ ಸ್ಟಾರ್ ಆಟಗಾರರಾದ ಕೆ.ಎಲ್.ರಾಹುಲ್, ಪ್ರಸಿದ್ಧ ಕೃಷ್ಣ ಸೇರಿ ಪ್ರಮುಖ ಆಟಗಾರರಿಗೆ ಸ್ಥಾನ ನೀಡಲಾಗಿದೆ. ಡಿಸೆಂಬರ್ 24 ರಿಂದ ಪ್ರಾರಂಭವಾಗಲಿರುವ ಟೂರ್ನಿ ಮುಂದಿನ ವರ್ಷ ಜನವರಿ

6 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಗೃಹಭಾಗ್ಯ: ಸಚಿವ ಬೈರತಿ ಸುರೇಶ್

ಸುವರ್ಣಸೌಧ: ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ನಗರ ಯೋಜನೆಗಾಗಿ ಪ್ರತ್ಯೇಕ ಕಾಲೇಜು ಆರಂಭ: ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: “ನಮ್ಮಲ್ಲಿ ನಗರ ಯೋಜನೆ ರೂಪಿಸುತ್ತಿರುವವರು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಕಾಲೇಜು ಆರಂಭಿಸಲು ಮುಂದಾಗಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿದ್ದ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ (ಎರಡನೇ ತಿದ್ದುಪಡಿ) ವಿಧೇಯಕವನ್ನು ಕಂದಾಯ

ಬಾಡಿಗೆ ಕೇಳಿದ್ದಕ್ಕಾಗಿ ಮಾಲೀಕಳ ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ ದಂಪತಿ!

ಬಾಕಿ ಉಳಿಸಿಕೊಂಡ ಬಾಡಿಗೆ ಹಣ ನೀಡುವಂತೆ ಕೇಳಿದ ಮನೆ ಮಾಲೀಕರನ್ನೇ ಕೊಂದ ದಂಪತಿ ಸೂಟ್ ಕೇಸ್ ನಲ್ಲಿ ಶವ ಮುಚ್ಚಿಟ್ಟ ಘಟನೆ ದೆಹಲಿ ಬಳಿಯ ಗಾಜಿಯಾಬಾದ್ ನಲ್ಲಿ ನಡೆದಿದೆ. ರಾಜ್ ನಗರ ವಿಸ್ತರಣೆಯಲ್ಲಿರುವ ಔರಾ ಚಿಮೇರಾ ವಸತಿ ಸಂಕೀರ್ಣದಲ್ಲಿ ಈ ಘಟನೆ

ತಿರುಪತಿ ತಿರುಮಲ ದೇವಸ್ಥಾನಕ್ಕೆ 1.2 ಕೋಟಿ ರೂ. ಮೌಲ್ಯದ ಬ್ಲೇಡ್‌ ದಾನ ಮಾಡಿದ ಉದ್ಯಮಿ

ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಕ್ಷೌರ ವಿಧಿವಿಧಾನಗಳಿಗಾಗಿ 1.2 ಕೋಟಿ ರೂ. ಮೌಲ್ಯದ ಬ್ಲೇಡ್‌ಗಳನ್ನು ದಾನ ಮಾಡಿದ್ದಾರೆ. ಉದ್ಯಮಿ ಬಿ. ಶ್ರೀಧರ್ ಕಲ್ಯಾಣಕಟ್ಟೆಗಳ ವಾರ್ಷಿಕ ಅಗತ್ಯವನ್ನು ಪೂರೈಸಲು ಭಾರೀ ಪ್ರಮಾಣದ ಬ್ಲೇಡ್‌ಗಳನ್ನು ದಾನವಾಗಿ ನೀಡಿದ್ದಾರೆ. ಹೈದರಾಬಾದ್‌ನ ಉದ್ಯಮಿ ಬಿ.