Menu

ಬಾಡಿಗೆ ಕೇಳಿದ್ದಕ್ಕಾಗಿ ಮಾಲೀಕಳ ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ ದಂಪತಿ!

ಬಾಕಿ ಉಳಿಸಿಕೊಂಡ ಬಾಡಿಗೆ ಹಣ ನೀಡುವಂತೆ ಕೇಳಿದ ಮನೆ ಮಾಲೀಕರನ್ನೇ ಕೊಂದ ದಂಪತಿ ಸೂಟ್ ಕೇಸ್ ನಲ್ಲಿ ಶವ ಮುಚ್ಚಿಟ್ಟ ಘಟನೆ ದೆಹಲಿ ಬಳಿಯ ಗಾಜಿಯಾಬಾದ್ ನಲ್ಲಿ ನಡೆದಿದೆ. ರಾಜ್ ನಗರ ವಿಸ್ತರಣೆಯಲ್ಲಿರುವ ಔರಾ ಚಿಮೇರಾ ವಸತಿ ಸಂಕೀರ್ಣದಲ್ಲಿ ಈ ಘಟನೆ ನಡೆದಿದ್ದು. ಮನೆ ಬಾಡಿಗೆ ಕೇಳಲು ಹೋದ ಮನೆಯ ಒಡತಿ ದೀಪ್ಶಿಕಾ ಶರ್ಮಾ (48) ಅವರನ್ನು ಕೊಲೆ ಮಾಡಿದ ದಂಪತಿಯನ್ನು ಬಂಧಿಸಲಾಗಿದೆ. ಉಮೇಶ್ ಶರ್ಮಾ ಮತ್ತು ದೀಪ್ಶಿಖಾ ಶರ್ಮಾ

ತಿರುಪತಿ ತಿರುಮಲ ದೇವಸ್ಥಾನಕ್ಕೆ 1.2 ಕೋಟಿ ರೂ. ಮೌಲ್ಯದ ಬ್ಲೇಡ್‌ ದಾನ ಮಾಡಿದ ಉದ್ಯಮಿ

ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಕ್ಷೌರ ವಿಧಿವಿಧಾನಗಳಿಗಾಗಿ 1.2 ಕೋಟಿ ರೂ. ಮೌಲ್ಯದ ಬ್ಲೇಡ್‌ಗಳನ್ನು ದಾನ ಮಾಡಿದ್ದಾರೆ. ಉದ್ಯಮಿ ಬಿ. ಶ್ರೀಧರ್ ಕಲ್ಯಾಣಕಟ್ಟೆಗಳ ವಾರ್ಷಿಕ ಅಗತ್ಯವನ್ನು ಪೂರೈಸಲು ಭಾರೀ ಪ್ರಮಾಣದ ಬ್ಲೇಡ್‌ಗಳನ್ನು ದಾನವಾಗಿ ನೀಡಿದ್ದಾರೆ. ಹೈದರಾಬಾದ್‌ನ ಉದ್ಯಮಿ ಬಿ.

ವಿಧಾನ ಪರಿಷತ್ತಿನಲ್ಲಿ ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಅನುಮೋದನೆ

ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕಾರ ರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2025ಕ್ಕೆ (2ನೇ ತಿದ್ದುಪಡಿ) ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್  ವಿಧಾನ ಪರಿಷತ್ತಿನಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ)

6279.80 ಕೋಟಿ ರೂ. ಪೂರಕ ಅಂದಾಜು ಪಟ್ಟಿಗೆ ಅನುಮೋದನೆ

ಬೆಳಗಾವಿ: ಪ್ರಸಕ್ತ ಸಾಲಿನ ಮಾರ್ಚ್ ಅಂತ್ಯದವರೆಗಿನ ಎರಡನೆ ಕಂತಿನ ಬೇಡಿಕೆಗಳ ಮೇಲೆ 6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ವಿಧಾನಸಭೆ ಅನುಮೋದನೆ ನೀಡಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ವಿತ್ತೀಯ ಕಾರ್ಯಕಲಾಪ ವೇಳೆ ಪೂರಕ ಅಂದಾಜು

“ನೀವು ಕರಾವಳಿಯವರು ಬೆಂಕಿ ಹಚ್ಚುವವರು” ಸದನದಲ್ಲಿ ಕಿಚ್ಚು ಹೊತ್ತಿಸಿದ ಸಚಿವ ಬೈರತಿ

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು “ನೀವು ಕರಾವಳಿಯವರು ಬೆಂಕಿ ಹಚ್ಚೋರು” ಎಂದು ನೀಡಿದ ಹೇಳಿಕೆ ಬೆಳಗಾವಿ ಸುವರ್ಣಸೌಧದದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೋಲಾಹಲ ಸೃಷ್ಟಿಸಿತು. ಈ ಹೇಳಿಕೆಗೆ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಚಿವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಪ್ರತಿಭಟನೆ

ವಿಪಕ್ಷಗಳ ಆಕ್ರೋಶದ ನಡುವೆ ಜಿ ರಾಮ್ ಜಿ ಮಸೂದೆ ಲೋಕಸಭೆಯಲ್ಲಿ ಅನುಮೋದನೆ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ದುಗೊಳಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ರೂಪಿಸಿದ್ದ ಜಿ ರಾಮ್ ಜಿ ಮಸೂದೆ ಭಾರೀ ಗದ್ಧಲಗಳ ನಡುವೆ ಲೋಕಸಭೆಯಲ್ಲಿ ಅನುಮೋದನೆ ಪಡೆದಿದೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಸೂದೆಯನ್ನು ಪುನರ್ ಪರಿಶೀಲನಾ ಸಮಿತಿ

ಡೆತ್‌ನೋಟ್‌ನಲ್ಲಿ ಸಿಕ್ತು ಧಾರವಾಡದ ವಿದ್ಯಾರ್ಥಿನಿ ಪಲ್ಲವಿ ಆತ್ಮಹತ್ಯೆಗೆ ಕಾರಣ

ಇತ್ತೀಚೆಗೆ ಧಾರವಾಡದ ಶಿವಗಿರಿ ಬಳಿ ರೈಲು ಹಳಿಗೆ ಬಿದ್ದು ಪಲ್ಲವಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಡಿದ್ದ ಊಹಾಪೋಹಗಳಿಗೆ ಈಗ ತೆರೆ ಬಿದ್ದಿದೆ. ಆಕೆ ಬರೆದಿಟ್ಟ ಡೆತ್‌ನೋಟ್‌ನಲ್ಲಿ ಸುಸೈಡ್‌ ಮಾಡಿಕೊಳ್ಳಲು ಕಾರಣ ಏನು ಎಂಬುದು ಪತ್ತೆಯಾಗಿದೆ. ಸರ್ಕಾರಿ ಹುದ್ದೆಗಳ

ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸಂತ್ರಸ್ತ ವರ್ತಕರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿಸಿಎಂ

“ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಪ್ರಶ್ನೋತ್ತರ

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಯೋಜನೆ?

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಇಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಶಾಸಕ ಪುಟ್ಟಣ್ಣ ಒತ್ತಾಯಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು,

“ಕಲೆಕ್ಷನ್ ಕಿಂಗ್ ವಿಜಯೇಂದ್ರ” ತಂದೆ ಯಡಿಯೂರಪ್ಪ ಹೆಸರು ಕೆಡಿಸಿದವರು: ಡಿಕೆ ಶಿವಕುಮಾರ್‌

“ಕಲೆಕ್ಷನ್ ಕಿಂಗ್ ” ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಮೊದಲು ಅಸೆಂಬ್ಲಿ ಬಂದು ಮಾತನಾಡಲು ಹೇಳಿ. ತಪ್ಪಿಸಿಕೊಂಡು ಹೋಗಿ ಎಲ್ಲೋ ಮಾತನಾಡುವುದಲ್ಲ,  ಅವರ ತಂದೆ ಹೆಸರು ಕೆಡಲು ವಿಜಯೇಂದ್ರ ಕಾರಣ. ಇದನ್ನು ಮರೆಯ ಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್