Featured
ಬಿಎಸ್ ವೈ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣ ಸುಪ್ರೀಂ ವಿಸ್ತ್ರತ ಪೀಠಕ್ಕೆ ವರ್ಗಾವಣೆ
ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣದ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಿಸ್ತ್ರತ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನ್ಯಾ.ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ ಪೀಠ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸೋಮವಾರ ತೀರ್ಪು ಪ್ರಕಟಿಸುವ ನಿರೀಕ್ಷೆ ಇತ್ತಾದರೂ ಅರ್ಜಿ ವಿಚಾರಣೆಯನ್ನು ದ್ವಿಸದಸ್ಯ ಪೀಠದಿಂದ ವಿಸ್ತ್ರತ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ
ಐಎಎಫ್ ಅಧಿಕಾರಿ ಮೇಲೆ ಹಲ್ಲೆ: ಆರೋಪಿ ಅರೆಸ್ಟ್
ಬೆಂಗಳೂರು: ಭಾರತೀಯ ಸಶಸ್ತ್ರ ಪಡೆ(ಐಎಎಫ್) ಅಧಿಕಾರಿಯೊಬ್ಬರಿಗೆ ನಗರದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಐಎಎಫ್ ಅಧಿಕಾರಿ ಶಿಲಾಧಿತ್ಯ ಬೋಸ್ ಅವರ ಪತ್ನಿ ಮಧುಮಿತಾ ದತ್ತ ನೀಡಿದ ದೂರಿನ ಮೇರೆಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ರೋಹಿತ್ ವೇಮುಲಾ ಕಾಯ್ದೆ ಅನುಷ್ಠಾನಕ್ಕೆ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ರಾಹುಲ್ ಪತ್ರ
ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರೋಹಿತ್ ವೇಮುಲಾ ಕಾಯ್ದೆಯ ಅನುಷ್ಠಾನವನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ. ರೋಹಿತ್ ವೇಮುಲಾ ಅವರ ಸ್ಮರಣಾರ್ಥ ಈ ಕಾನೂನನ್ನು ಜಾರಿಗೆ
ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸ್ಪೀಕರ್ ಅನುಮತಿ
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್ ಸಲ್ಲಿಸಿರುವ ಪ್ರಕರಣವೊಂದರಲ್ಲಿ ಪ್ರಾಸಿಕ್ಯೂಷನ್‌ಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ. ಹನಿಟ್ರ್ಯಾಪ್ ನಡೆಸಲು ಎಚ್‌ಐವಿ ಸೋಂಕಿತ ಮಹಿಳೆಯರನ್ನು ಬಳಸಿಕೊಂಡಿದ್ದು, ದಲಿತರ ಮೇಲೆ ಜಾತಿನಿಂದನೆ
ಡೊನಾಲ್ಡ್ ಟ್ರಂಪ್ ವಿರುದ್ಧ ಅಮೆರಿಕದ 50 ರಾಜ್ಯಗಳಲ್ಲಿ ಪ್ರತಿಭಟನೆ
ವಾಷಿಂಗ್ಟನ್: ವಲಸೆ ನೀತಿ, ಸರ್ಕಾರಿ ನೌಕರರ ವಜಾ ಮತ್ತು ಉಕ್ರೇನ್-ಗಾಜಾ ಯುದ್ಧದ ಕುರಿತ ನೀತಿಯ ವಿರುದ್ಧ ಅಮೆರಿದಕಲ್ಲಿ ಸಾರ್ವಜನಿಕರು ರಸ್ತೆಗೆ ಇಳಿದು ತಮ್ಮ ಆಕ್ರೋಶವನ್ನು ಹೊರಹಾಕಿದರು. ’50 ರಾಜ್ಯಗಳಲ್ಲಿ 50 ಪ್ರತಿಭಟನೆಗಳು ? ಒಂದೇ ಚಳವಳಿ’ ಎಂಬ ಧ್ಯೇಯವಾಕ್ಯದೊಂದಿಗೆ ’50501’ ಎಂಬ
10 ತಿಂಗಳ ಹಸುಗೂಸು ರಕ್ಷಿಸಿದ ಬಾಲಿವುಡ್ ನಟಿ ದಿಶಾ ಪಟಾನಿ ಸಹೋದರಿ!
ಮುಂಬೈ: ಬಾಲಿವುಡ್ ನಟ ದಿಶಾ ಪಟಾನಿ ಸೋದರಿ ಮಹಡಿಯ ಮೇಲೆ ಸಿಲುಕಿದ್ದ 10 ತಿಂಗಳ ಹಸುಗೂಸನ್ನು ಯಾವುದೇ ರಕ್ಷಣೆ ಇಲ್ಲದೇ ಗೋಡೆ ಏರಿ ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಾಲಿವುಡ್ ನಟಿ ದಿಶಾ ಪಟಾನಿ ಸೋದರಿ ಹಾಗೂ ಭಾರತೀಯ ಸೇನಾಪಡೆಯಲ್ಲಿ ಲೆಫ್ಟಿನೆಂಟ್
ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟ: ಅಯ್ಯರ್, ಇಶಾನ್ ವಾಸಪ್, ಕೆಎಲ್ ರಾಹುಲ್ ಗೆ ಬಡ್ತಿ
ಅಂತಾರಾಷ್ಟ್ರೀಯ ಕ್ರಿಕೆಟಿಗರ ಬಹುನಿರೀಕ್ಷಿತ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟವಾಗಿದ್ದು, ಹೊರಹಾಕಲ್ಪಟ್ಟಿದ್ದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಮರಳಿದ್ದಾರೆ. ಕೆಲವು ತಿಂಗಳಿಂದ ಮುಂದೂಡಲ್ಪಟ್ಟಿದ್ದ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಸೋಮವಾರ ಪ್ರಕಟವಾಗಿದ್ದು, ನಿಯಮ ಉಲ್ಲಂಘಿಸಿದ್ದಕ್ಕಾಗಿ 2023-24ನೇ ಸಾಲಿನ ಗುತ್ತಿಗೆ ಪಟ್ಟಿಯಲ್ಲಿ
ಗ್ರಾಮೀಣ ಯುವಕರಿಗೆ ತಂತ್ರಜ್ಞಾನದ ಶಿಕ್ಷಣ ನೀಡಿ ಉದ್ಯೋಗ ಸೃಷ್ಟಿಸಿದ ಕಿಯೋನಿಕ್ಸ್: ಡಿಕೆ ಶಿವಕುಮಾರ್ ಶ್ಲಾಘನೆ
“ತಂತ್ರಜ್ಞಾನದಿಂದಲೇ ಅಭಿವೃದ್ಧಿ, ಸಂಪತ್ತು, ಶಿಕ್ಷಣ ಎನ್ನುವಂತಾಗಿದೆ. ಪ್ರತಿಯೊಂದು ಏಳಿಗೆಯೂ ಸಹ ತಂತ್ರಜ್ಞಾನದ ಮೂಲಕ ನೋಡುವಂತಾಗಿದೆ. ಗ್ರಾಮೀಣ ಭಾಗದ ಯುವಕರಿಗೆ ಹೊಸ ತಂತ್ರಜ್ಞಾನದ ಶಿಕ್ಷಣ ನೀಡಿರುವ ಕಿಯೋನಿಕ್ಸ್ ಉದ್ಯೋಗ ಸೃಷ್ಟಿ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಶ್ಲಾಘಿಸಿದರು. ಬೆಂಗಳೂರಿನಲ್ಲಿ ಕಿಯೋನಿಕ್ಸ್ ಸಂಸ್ಥೆಯ ಇ-ಕಾಮರ್ಸ್
ಮಾಜಿ ಐಜಿಪಿ ಓಂ ಪ್ರಕಾಶ್ ಹತ್ಯೆ: ಪುತ್ರ ಕಾರ್ತಿಕೇಶ್ ದೂರಿನಲ್ಲಿ ಏನಿದೆ?
ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯನ್ನೇ ದಂಗು ಬಡಿಸಿದ ನಿವೃತ್ತ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿ ರುವ ಪೊಲೀಸರು ಓಂ ಪ್ರಕಾಶ್ ಪತ್ನಿ ಪಲ್ಲವಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ..ತಾಯಿ ಪಲ್ಲವಿ ಹಾಗೂ ಸಹೋದರಿ ಕೃತಿ ವಿರುದ್ಧ
ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ
ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ (88) ವ್ಯಾಟಿಕನ್ ನಗರದಲ್ಲಿ ನಿಧನರಾದರು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ನ್ಯುಮೋನಿಯಾ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.




