Featured
ಮೈಸೂರು ರೈಲು ನಿಲ್ದಾಣದಲ್ಲಿ ಮಗು ಅಪಹರಣ: ರಕ್ಷಿಸಿದ ಪೊಲೀಸ್
ಮೈಸೂರು ರೈಲು ನಿಲ್ದಾಣದಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಅಪಹರಣ ಮಾಡಲು ವೃದ್ಧ ಮಹಿಳೆಯೊಬ್ಬರು ಯತ್ನಿಸಿ ಪೊಲೀಸ್ ಕೈಗೆ ಸಿಕ್ಕಿ ಬಿದ್ದಿದ್ದಾರೆ, ಮಗುವನ್ನು ಕೂಡ ಪೊಲೀಸರು ಸುರಕ್ಷಿತವಾಗಿ ಕುಟುಂಬಕ್ಕೆ ಒಪ್ಪಿಸಿದ್ದಾರೆ. 50 ವರ್ಷದ ಆರೋಪಿ ವೃದ್ಧೆಯನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪೊಲೀಸರು ಬಂಧಿಸಿದ್ದಾರೆ. ಮೈಸೂರು ರೈಲ್ವೆ ನಿಲ್ದಾಣದ ವೇಟಿಂಗ್ ರೂಮ್‌ನಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಆಕೆ ಎತ್ತಿಕೊಂಡು ಹೋಗಲು ಯತ್ನಿಸಿದ್ದಾರೆ. ಎಚ್ಚರಗೊಂಡ ತಾಯಿಗೆ ಮಗು ನಾಪತ್ತೆಯಾಗಿರುವುದು ಗೊತ್ತಾಗಿ ಕೂಡಲೇ ಕುಟುಂಬಸ್ಥರೊಂದಿಗೆ
ಸರ್ಕಾರಿ ಆಸ್ಪತ್ರೆ ವಿರುದ್ಧ ದೂರಿತ್ತ ಕೆಆರ್‌ಎಸ್ ಪಕ್ಷದ ಸದಸ್ಯನಿಗೆ ಜೀವ ಬೆದರಿಕೆ, ಕೇಸ್ ದಾಖಲು
ಬೀದರ್‌ನ ಸರ್ಕಾರಿ ಆಸ್ಪತ್ರೆಯೊಂದರ ಬಗ್ಗೆ ದೂರು ನೀಡಿದ KRS ಪಕ್ಷದ ಸದಸ್ಯನಿಗೆ ಜೀವ ಬೆದರಿಕೆ ಬಂದಿದ್ದು, ಪ್ರಕರಣ ದಾಖಲಾಗಿದೆ. ಧನ್ನೂರ (ಕೆ) ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಅಶ್ವಿನಿ ವಿರುದ್ಧ ದೂರು ನೀಡಿದ್ದಕ್ಕೆ ಅವರ ತಾಯಿಯಿಂದ ಬೆದರಿಕೆ ಬಂದಿರುವುದಾಗಿ ಸಂಗಮೇಶ್ ಬಿರದಾರ
ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ, ಹತ್ಯೆ ಗ್ಯಾಂಗ್: ಮೂವರು ಪೊಲೀಸ್ ವಶ
ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದ ಗ್ಯಾಂಗ್‌ವೊಂದನ್ನು ಬಯಲಿಗೆಳೆದಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಮಹಿಳೆ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬನ್ನೂರಿನ ಪ್ರತಿಷ್ಠಿತ ನರ್ಸಿಂಗ್ ಹೋಂ ಈ ಗ್ಯಾಂಗ್ ಜೊತೆ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ವರುಣ ಪೊಲೀಸ್ ಠಾಣೆಯಲ್ಲಿ
ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ: ಬಿಜೆಪಿಯವರಿಗೆ ಡಿಕೆ ಶಿವಕುಮಾರ್ ಸವಾಲು
ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲೆಸೆದರು.
ನಮ್ಮ ಮೆಟ್ರೊದಲ್ಲಿ ಶೇ.87 ರಾಜ್ಯದ ಹಣವಿದ್ದರೂ, ಕೇಂದ್ರದ ಯೋಜನೆಯೆಂದು ಬಿಜೆಪಿಯಿಂದ ಸುಳ್ಳು ಪ್ರಚಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ಈ ನಗರದ ಜನಸಂಖ್ಯೆ ಹೆಚ್ಚುತ್ತಿದ್ದು ಈ ಸವಾಲಿನ ಜೊತೆಗೇ ಬೆಂಗಳೂರಿನ ರಸ್ತಡಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ. ಬೆಂಗಳೂರಿನ ಮೆಟ್ರೋಗೆ ಶೇ87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ87
ಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ: ಡಿಕೆ ಶಿವಕುಮಾರ್ ತಿರುಗೇಟು
ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಪಾರ್ಟಿ ಏನು ಹೇಳುತ್ತದೆಯೋ ಅದರಂತೆ ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತಿವಿ ಎಂಬ ಮಾತಿಗೆ ನಾವು ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ: ಪುತ್ರ ಯತೀಂದ್ರ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ ಎಂದು ಪುತ್ರ ಹಾಗೂ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ
ಲ್ಯಾಡಿಂಗ್ ವೇಳೆ ಕುಸಿದ ಹೆಲಿಪ್ಯಾಡ್: ರಾಷ್ಟ್ರಪತಿ ದ್ರೌಪದಿ ಮರ್ಮು ಪಾರು
ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಲ್ಯಾಂಡಿಂಗ್ ಪ್ಯಾಡ್ ನಲ್ಲಿ ಸಿಲುಕಿಕೊಂಡ ಘಟನೆ ಕೇರಳದ ಪ್ರಮದಂ ಕ್ರೀಡಾಂಗಣದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ರಾಷ್ಟ್ರಪತಿ ಅವರಿದ್ದ ಹೆಲಿಕಾಪ್ಟರ್‌ನ ಒಂದು ಭಾಗ ಡಾಂಬರಿನಲ್ಲಿ ಸಿಲುಕಿಕೊಂಡಿತ್ತು.
ಮಂತ್ರಾಲಯಕ್ಕೆ ರಾಯರ ಭೇಟಿ ನೀಡಿದ ಡಿಕೆ ಶಿವಕುಮಾರ್ ಕುಟುಂಬ
ಮಂತ್ರಾಲಯ/ರಾಯಚೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ಆರಂಭದಲ್ಲಿ ಶ್ರೀ ಮಂಚಾಲಮ್ಮ ದೇವಿ ದರ್ಶನ ಪಡೆದುಕೊಂಡು ಬಳಿಕ ಮೂಲ ರಾಯರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀಸುಬುಧೇಂದ್ರ ತೀರ್ಥರನ್ನು
ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಮುಹೂರ್ತ ಫಿಕ್ಸ್
ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ ಮುಂದಿನ ತಿಂಗಳು ನವೆಂಬರ್ 17 ಮತ್ತು 18ರಂದು ಎರಡು ದಿನಗಳ ಕಾಲ ಪರಿಷೆ ನಡೆಯಲಿದೆ. ಶ್ರೀ ದೊಡ್ಡಗಣಪತಿ ದೇವಾಲಯದಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ತನ್ನದೇ ಆದ ವಿಶೇಷ ಇತಿಹಾಸ ಇದೆ. ಪ್ರತಿ ವರ್ಷದಂತೆ ಈ




