Featured
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ 103 ಬಸ್ ನಿಲ್ದಾಣ ಸ್ಥಳಾಂತರಕ್ಕೆ ಶಿಫಾರಸು
ಬೆಂಗಳೂರು: ನಗರದಲ್ಲಿನ ಅವೈಜ್ಞಾನಿಕ ಅಸಮರ್ಪಕ ಬಸ್ ನಿಲ್ದಾಣಗಗಳನ್ನು ಸ್ಥಳಾಂತರ ಮಾಡಲು ಸಂಚಾರ ಪೊಲೀಸರು ಹಾಗೂ ಬಿಎಂಟಿಸಿ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಪಟ್ಟಿ ಸಿದ್ಧಪಡಿಸಿದ್ದಾರೆ. ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಟ್ರಾಫಿಕ್ ಸಿಗ್ನಲ್ಗಳ ಬಳಿಯೇ ಬಸ್ ನಿಲ್ದಾಣಗಳಿರುವುದೂ ಕೂಡ ಟ್ರಾಫಿಕ್ ಜಾಮ್ ಹೆಚ್ಚಾಗಲು ಕಾರಣವಾಗಿದೆ. ಇದರಿಂದ ಸಂಚಾರ ಪೊಲೀಸರು, ಬಿಎಂಟಿಸಿ ಅಧಿಕಾರಿಗಳ ಜೊತೆ ಜಂಟಿ ಸಮೀಕ್ಷೆ ನಡೆಸಿ ಸ್ಥಳಾಂತರ ಮಾಡಬೇಕಾದ 103 ಬಸ್ ನಿಲ್ದಾಣಗಳ ಪಟ್ಟಿ
ಹಾಲಿನ ದರ ಹೆಚ್ಚಳವಿಲ್ಲ: ಸಚಿವ ವೆಂಕಟೇಶ್ ಸ್ಪಷ್ಟನೆ
ಬೆಂಗಳೂರು:ರಾಜ್ಯದಲ್ಲಿ ಜೂನ್‌ನಿಂದ ಪ್ರತಿದಿನ ಒಂದು ಕೋಟಿ ಲೀಟರ್‌ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್‌ನಲ್ಲಿ ಲೀಟರ್‌ಗೆ 4ರೂ. ಹಾಲಿನ ದರ ಹೆಚ್ಚಳ ಮಾಡಿದ್ದು,
ಸಕ್ರೆಬೈಲಿನ 4 ಗಂಡಾನೆಗಳಿಗೆ ಅನಾರೋಗ್ಯ
ರಾಜ್ಯದ ಪ್ರಮುಖ ಆನೆ ಬಿಡಾರಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದ ನಾಲ್ಕು ಗಂಡಾನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಬಿಡಾರದಲ್ಲರುವ ಪ್ರಮುಖ ಆನೆಗಳಾದ ಸಾಗರ್, ಬಾಲಣ್ಣ ಹಾಗೂ ಸೆರೆ ಹಿಡಿದು ತಂದಿರುವ ವಿಕ್ರಾಂತ್ ಹಾಗೂ ಅಡಕಬಡಕ ಆನೆ ಅನಾರೋಗ್ಯದಿಂದ ಬಳಲುತ್ತಿದ್ದು, ಆನೆ
ನಾರ್ವೆ ಸಂಸತ್ತಿಗೆ ಭೇಟಿ ನೀಡಿದ ಸಭಾಧ್ಯಕ್ಷ ಯುಟಿ ಖಾದರ್ ನೇತೃತ್ವದ ನಿಯೋಗ
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದಲ್ಲಿ ನಿಯೋಗವೊಂದು ನಾರ್ವೆ ಪಾರ್ಲಿಮೆಂಟ್‌ಗೆ ಅಧಿಕೃತ ಭೇಟಿ ನೀಡಿತು. 1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದು ಹಾಗೂ ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು
ನಾಳೆ ದಿನ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ದೀಪಾವಳಿ ಪ್ರಯುಕ್ತ ಬಲಿಪಾಡ್ಯಮಿ ದಿನ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸಲು ಮುಜರಾಯಿ ಇಲಾಖೆ ಸೂಚನೆ ನೀಡಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಂಗಳವಾರ ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆ, ರಾಜ್ಯದ ಮುಜರಾಯಿ ಅಧಿಸೂಚಿತ
ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟ
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನು ಸಹಕಾರ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ. ಪ್ರತಿದಿನ ರಾಜ್ಯದ
ಗೋ ಹತ್ಯೆ ಮಾಡಿದವರ ವಿರುದ್ಧ ಪ್ರಕರಣ ಹಿಂಪಡೆದು ಮುಸ್ಲಿಂ ಓಲೈಕೆ: ಆರ್.ಅಶೋಕ
ಬೆಂಗಳೂರು: ಚಿತ್ತಾಪುರದಲ್ಲಿ ಗೋ ಹತ್ಯೆ ಮಾಡಿದವರ ವಿರುದ್ಧ ಪ್ರಕರಣ ಹಿಂಪಡೆದು ಮುಸ್ಲಿಂ ಓಲೈಕೆ ಮಾಡಲಾಗಿದೆ. ಈ ಸರ್ಕಾರ ಮುಸ್ಲಿಮ್ ದುಷ್ಕರ್ಮಿಗಳನ್ನು ಬೆಂಬಲಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ತಾಲೂಕಿನಲ್ಲಿ ಗೋ ಕಳ್ಳ ಸಾಗಾಣಿಕೆ ಹಾಗೂ ಗೋ
4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್ ಟಾಪಿಂಗ್: ಡಿಕೆ ಶಿವಕುಮಾರ್
ಬೆಂಗಳೂರು: “4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104 ಕಿಮೀ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ
ವಾರದೊಳಗೆ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ತಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ
ರಸ್ತೆ ಗುಂಡಿ ವಿವಾದದ ನಂತರ ಡಿಸಿಎಂ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಂಜುಂದಾರ್!
ರಾಜಧಾನಿಯ ರಸ್ತೆ ಗುಂಡಿ ನಿರ್ವಹಣೆ ವಿಚಾರದಲ್ಲಿ ಆರೋಪ-ಪ್ರತ್ಯಾರೋಪದ ನಂತರ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸದಾಶಿವನಗರದ ನಿವಾಸಕ್ಕೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ಕಿರಣ್ ಮಜುಂದಾರ್ ದೀಪಾವಳಿ (ಹಬ್ಬದ




