Menu

ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ತರಾಟೆ: ತೆರೆಯ ಹಿಂದೆ ಆಟವಾಡುತ್ತಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ ಎಂದು ಮುಖ್ಯಮಂತ್ರಿ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಪೂರ್ಣ ವಿವರ ಹೀಗಿದೆ, ಸುಪ್ರೀಂಕೋರ್ಟಿನ ತೀರ್ಪು ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿ-ಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿರುವ ಕಾರಣ ದಿಂದಾಗಿ

ಚೀನಾ ಉತ್ಪನ್ನಗಳ ಮೇಲಿನ ಸುಂಕ 125%ಕ್ಕೆ ಏರಿಸಿ ಟ್ರಂಪ್‌ ಪ್ರಹಾರ

ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ ಸುಂಕ ಯುದ್ಧ ಘೋಷಿಸಿರುವ ಅಲ್ಲಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 75 ದೇಶಗಳ ಮೇಲೆ ಹೇರಿದ್ದ ತೆರಿಗೆಗೆ 90 ದಿನಗಳ ಮಟ್ಟಿಗೆ ತಡೆ ನೀಡುವುದಾಗಿ ಹೇಳಿದ್ದು, ಚೀನಾದ ಮೇಲಿನ ತೆರಿಗೆಯನ್ನು 104% ರಿಂದ 125%ಕ್ಕೆ ಏರಿಸಿ ಭಾರಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ: ಆರ್‌.ಅಶೋಕ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರ ಹಾಕಿದರು. ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ. ಪ್ರಶಾಂತ್‌ ಪೂಜಾರಿ,

ಗಣಿ ಗುತ್ತಿಗೆ ನವೀಕರಣ ವಿವಾದ, ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪ್ರಯತ್ನ: ಸಿಎಂ ಸಿದ್ದರಾಮಯ್ಯ

  ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು

ರಾಜಸ್ಥಾನ್ ಗೆ `ಪ್ರಸಿದ್ಧ’ ಸೋಲುಣಿಸಿದ ಸಾಯಿ; ಅಗ್ರಸ್ಥಾನಕ್ಕೇರಿದ ಗುಜರಾತ್

ಅಹಮದಾಬಾದ್: ಆರಂಭಿಕ ಸಾಯಿ ಸುದರ್ಶನ್ ಅವರ ಸಿಡಿಲಬ್ಬರದ ಅರ್ಧಶತಕ ಮತ್ತು ಪ್ರಸಿದ್ಧ ಕೃಷ್ಣ ಅವರ ಮಾರಕ ದಾಳಿ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 58 ರನ್ ನಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದೆ. ಬುಧವಾರ ನಡೆದ

ಚಿನ್ನ ಅಕ್ರಮ ಸಾಗಾಣೆ: ಜಾಮೀನು ಕೋರಿ ನಟಿ ರನ್ಯಾ ಅರ್ಜಿ

ಬೆಂಗಳೂರು:ವಿದೇಶದಿಂದ ಅಕ್ರಮ ಚಿನ್ನ ಸಾಗಣೆ ಮಾಡಿದ್ದ ಆರೋಪ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಡಿಜಿಪಿ ರಾಮಚಂದ್ರರಾವ್ ಮಲಮಗಳು ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ

ಮುಂಬೈ ತಾಜ್​ ಹೋಟೆಲ್​ ದಾಳಿ ಮಾಸ್ಟರ್​ ಮೈಂಡ್ ರಾಣಾ ಭಾರತಕ್ಕೆ

ವಾಷಿಂಗ್ಟನ್: ಮುಂಬೈ ತಾಜ್​ ಹೋಟೆಲ್​ ಮೇಲಿನ ಉಗ್ರ ದಾಳಿಯ ಮಾಸ್ಟರ್​ ಮೈಂಡ್ ತಹವ್ವುರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು,ಗುರುವಾರ ಮುಂಜಾನೆ ಭಾರತಕ್ಕೆ ಕರೆತರುವ ನಿರೀಕ್ಷೆಯಿದೆ. ಭಾರತಕ್ಕೆ ತನ್ನ ಹಸ್ತಾಂತರವನ್ನು ನಿಲ್ಲಿಸುವಂತೆ ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್

ಮಾಜಿ ಸಚಿವ ಬಿ.ನಾಗೇಂದ್ರಗೆ 1.25 ಕೋಟಿ ದಂಡ ವಿಧಿಸಿದ ಕೋರ್ಟ್

ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರಿಗೆ 1.25 ಕೋಟಿ ರೂ. ದಂಡ ವಿಧಿಸಿ 42ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ. 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಜಡ್ಜ್‌ ಕೆ.ಎನ್.ಶಿವಕುಮಾರ್‌ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ

ಪವನ್‌ಗೆ ಜೀರೋ ಟ್ರಾಫಿಕ್: ವಿದ್ಯಾರ್ಥಿಗಳಿಗೆ ಪರೀಕ್ಷೆ ಮಿಸ್

ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರಿಗೋಸ್ಕರ ನೀಡಲಾಗಿದ್ದ ಜಿರೋ ಟ್ರಾಫಿಕ್‌ನಿಂದಾಗಿ ಹಲವು ವಿದ್ಯಾರ್ಥಿಗಳು ಜೆಇಇ ಪ್ರವೇಶ ಪರೀಕ್ಷೆಯನ್ನು ತಪ್ಪಿಸಿಕೊಂಡಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಏಪ್ರಿಲ್ ೨ರಂದು ವಿಶಾಖಪಟ್ಟಣಕ್ಕೆ ಪವನ್ ಕಲ್ಯಾಣ್ ಆಗಮಿಸಿದ್ದರು. ಈ ವೇಳೆ ಅವರಿಗೆ ಹಾಗೂ ಅವರ ಬೆಂಗಾವಲು

ಭಾರತದ ಮೇಲೆ ಶೇ.26ರಷ್ಟು ಸುಂಕ ವಿಧಿಸಿದ ಅಮೆರಿಕ

ವಾಷಿಂಗ್ಟನ್: ಮಿತ್ರ ರಾಷ್ಟ್ರ ಎಂದು ಕರೆಯಲಾಗುವ ಭಾರತದ ಮೇಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೇ.26ರಷ್ಟು ಸುಂಕ ವಿಧಿಸಿದ್ದು, ಬುಧವಾರದಿಂದಲೇ ನೂತನ ತೆರಿಗೆ ಜಾರಿಗೆ ಬರಲಿದೆ. ಜಾಗತಿಕ ಮಟ್ಟದಲ್ಲಿ ಅಮೆರಿಕ ಆರಂಭಿಸಿರುವ ಸುಂಕ ಸಮರದಲ್ಲಿ ಭಾರತದ ಮೇಲೆ ತೆರಿಗೆ ಹೇರುವ ಕುರಿತು