Featured
63,000 ಕೋಟಿ ವೆಚ್ಚದಲ್ಲಿ 26 ರಾಫೆಲ್ ಯುದ್ಧ ವಿಮಾನ ಖರೀದಿಗೆ ಕೇಂದ್ರ ಅಸ್ತು
ನವದೆಹಲಿ: ಸಮುದ್ರದಲ್ಲಿ ಕಣ್ಗಾವಲು ಇಡುವ ಉದ್ದೇಶದಿಂದ 26 ರಾಫೆಲ್ ಎಂ ಯುದ್ಧ ವಿಮಾನಗಳ ಖರೀದಿಗೆ 63 ಸಾವಿರ ಕೋಟಿ ರೂ. ವಿನಿಯೋಗಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಭಾರತದ ನೌಕಾಪಡೆಗೆ ಬಲ ತುಂಬಲು ಕೇಂದ್ರ ಅತೀ ದೊಡ್ಡ ಮೊತ್ತ ವಿನಿಯೋಗಿಸಲು ತೀರ್ಮಾನಿಸಲಾಗಿದ್ದು, ಮಾಸಾಂತ್ಯದಲ್ಲಿ ಫ್ರಾನ್ಸ್ ರಕ್ಷಣಾ ಸಚಿವರೊಂದಿಗೆ ರಾಫೆಲ್ ಖರೀದಿ ಕುರಿತು ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ರಾಫೆಲ್ ಯುದ್ಧ ವಿಮಾನಗಳ ಪೂರ್ಣ ಪ್ಯಾಕೇಜ್ ಗೆ ಒಪ್ಪಂದ ಮಾಡಿಕೊಳ್ಳಲಾಗುವುದು.
ಚಿನ್ನಾಭರಣ ದರೋಡೆ ಪ್ರಕರಣದಲ್ಲಿ ಮತ್ತೆ ಐವರು ಅರೆಸ್ಟ್
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ ಕೋಟ ನಾಕಿನೇರಿ ಘಾಟ್ ಬಳಿ ಚೆನ್ನೈನಿಂದ ಕೆಜಿಎಫ್‍ಗೆ ತರುತ್ತಿದ್ದ ಚಿನ್ನಾಭರಣವನ್ನು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿಎಫ್ ಪೊಲೀಸರು ಮತ್ತೆ ಐದು ಮಂದಿಯನ್ನು ಬಂಧಿಸಿದ್ದಾರೆ. ಮೂರುವರೆ ಕೋಟಿ ರೂ. ಮೌಲ್ಯದ 3.5 ಕೆಜಿ ಚಿನ್ನಾಭರಣ ದೋಚಿದ್ದ
ದ್ವಿತೀಯ ಪಿಯುಸಿ ಪರೀಕ್ಷೆ-2 ಮತ್ತು 3ರ ದಿನಾಂಕ ಪ್ರಕಟ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಬಂದಿದ್ದು, ಪರೀಕ್ಷೆ-2 ಮತ್ತು 3 ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದು, ಪರೀಕ್ಷೆಗೆ ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಏಪ್ರಿಲ್ 24 ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ 2 ಪರೀಕ್ಷೆ
500 ಕೋಟಿ ರೂ. ಕಿಕ್ ಬ್ಯಾಕ್: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಗೆ ದೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿರುವುದಾಗಿ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬವರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ಮದುವೆಗೆ ಕೆಲವೇ ದಿನಗಳಿರುವಾಗ ಮಗಳ ಭಾವಿ ಪತಿಯೊಂದಿಗೆ ತಾಯಿ ಪರಾರಿ
ಅಲಿಘಡದ ಮಂಡ್ರಾಕ್ ಪ್ರದೇಶದಲ್ಲಿ ಭಾವಿ ಅಳಿಯನೊಂದಿಗೆ 40 ವರ್ಷದ ಮಹಿಳೆಯೊಬ್ಬರು ಓಡಿ ಹೋಗಿರುವ ಪ್ರಕರಣ ನಡೆದಿದೆ. ಮಗಳ ವಿವಾಹ ಏಪ್ರಿಲ್ 16 ರಂದು ನಡೆಯಬೇಕಿತ್ತು. ಮದುವೆಗೆ ಕೆಲವೇ ದಿನಗಳಿರುವಾಗ ತಾಯಿಯು 2.5 ಲಕ್ಷ ರೂ. ನಗದು ಮತ್ತು ಆಭರಣಗಳನ್ನು ತೆಗೆದುಕೊಂಡು ಮಗಳ
ದಾಂಡೇಲಿಯಲ್ಲಿ 14 ಕೋಟಿ ರೂ. ಮೌಲ್ಯದ ನಕಲಿ ನೋಟುಗಳ ಬಂಡಲ್ ಪತ್ತೆ
ದಾಂಡೇಲಿಯ ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ 500ರೂ. ಮುಖಬೆಲೆ ತೋರುವ ನೋಟುಗಳ ಕಂತೆ ಪತ್ತೆಯಾಗಿದೆ. 500 ಮುಖಬೆಲೆಯ 50 ನೋಟುಗಳ ಬಂಡಲ್‌ನಂತೆ ಅಂದಾಜು ₹14 ಕೋಟಿ ಮೌಲ್ಯವೆಂದು ಲೆಕ್ಕಕ್ಕೆ ತೆಗೆದುಕೊಳ್ಳಬಹುದಾದ ನಕಲಿ ನೋಟುಗಳು ಸಿಕ್ಕಿವೆ. ಖಚಿತ ಮಾಹಿತಿ ಹಿನ್ನೆಲೆ ಯಲ್ಲಿ ನಗರ ಠಾಣೆಯ
ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು: ಸಚಿವ ಸೋಮಣ್ಣ
ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿ, ಏಪ್ರಿಲ್ 12 ರಂದು ಬೆಂಗಳೂರಿನಿಂದ
ಮುಳಗುಂದದಲ್ಲಿ ತಂದೆಯಿಂದ ಅತ್ಯಾಚಾರ, ಬಾಲಕಿ ಗರ್ಭಿಣಿ: ಆರೋಪ
ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹದಿನಾರು ವರ್ಷದ ಬಾಲಕಿ ಮೇಲೆ 55 ವರ್ಷದ ತಂದೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಆರೋಪಿ ರಮೇಶ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ
ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ಹೆಸರಿನಲ್ಲಿ ವಂಚನೆ: ಪೊಲೀಸ್ ಠಾಣೆ ಮೊರೆ ಹೋದ ಸಂತ್ರಸ್ತರು
ವಾಸವಿ ಸ್ವಗೃಹ ಹೋಮ್ ನೀಡ್ಸ್ ಆ್ಯಂಡ್ ಕನ್ಸಲ್ಟನ್ಸ್ ಹೆಸರಲ್ಲಿ ವಿಶ್ವನಾಥ್ ಎಂಬಾತ ಜನರಿಗೆ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡಿರುವುದಾಗಿ ಬಳ್ಳಾರಿಯ ಬ್ರೂಸ್ ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಹಿಂದೆ ವಿಶ್ವನಾಥ ಕಿರಾಣಿ ಅಂಗಡಿ ಆರಂಭಿಸಿ, ಐದು
ರಿಪೋ ದರ ಕಡಿತಗೊಳಿಸಿದ ಆರ್‌ಬಿಐ
ಭಾರತೀಯ ರಿಸರ್ವ್ ಬ್ಯಾಂಕ್ ರಿಪೋ ದರಗಳನ್ನು 25 ಮೂಲಾಂಕಗಳಷ್ಟು ಕಡಿತಗೊಳಿಸಿದೆ. ಆರ್‌ಬಿಐ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ. ರಿಪೋ ದರವನ್ನು ಶೇ. 6.25ರಿಂದ ಶೇ 6ಕ್ಕೆ ಇಳಿಸಿರುವುದಾಗಿ ಮಾಹಿತಿ




