Featured
15 ವರ್ಷ ಮೀರಿದ ವಾಹನಗಳಿಗೆ ಒಂದು ವರ್ಷ ವಿಸ್ತರಣೆ: ಸಚಿವ ರಾಮಲಿಂಗಾರೆಡ್ಡಿ ಭರವಸೆ
ಬೆಳಗಾವಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿನ 15 ವರ್ಷ ಮೀರಿದ ವಾಹನಗಳಿಗೆ ಒಂದು ವರ್ಷ ವಿಸ್ತರಣೆಯ ಜೊತೆಗೆ, ಸುಸ್ಥಿತಿಯಲ್ಲಿರುವ ಕೆಲ ವಾಹನಗಳಿಗೆ ಗುಜರಿ ನೀತಿಯಡಿ ವಿನಾಯಿತಿ ನೀಡಲು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮೇಲ್ಮನೆಯಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬುಧವಾರ ಜೆಡಿಎಸ್ ನ ಸದಸ್ಯ ಗೋವಿಂದರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾರಿಗೆ ಇಲಾಖೆ ಒಳಗೊಂಡಂತೆ ವಿವಿಧ ಇಲಾಖೆಯಲ್ಲಿ 15 ವರ್ಷ ಮೀರಿದ
ಡಿಸೆಂಬರ್ 19ಕ್ಕೆ ಮೋದಿ ಸರ್ಕಾರ ಪತನ: ಸಂಜಯ್ ರಾವತ್ ಸ್ಫೋಟಕ ಹೇಳಿಕೆ
ಮುಂಬೈ (ಮಹಾರಾಷ್ಟ್ರ): ದೆಹಲಿಯಲ್ಲಿ ರಾಜಕೀಯ ಭೂಕಂಪನ ಸಂಭವಿಸಲಿದ್ದು, 2025ರ ಡಿಸೆಂಬರ್ 19ರಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಳೆದೆರಡು ದಿನಗಳ ಹಿಂದೆ ಮಹಾರಾಷ್ಟ್ರದ ಮಾಜಿ ಸಿಎಂ ಪೃಥ್ವಿರಾಜ್ ಚೌಹಾಣ್, ಕೇಂದ್ರದಲ್ಲಿ ಆಡಳಿತ ಬದಲಾವಣೆ ಆಗಲಿದೆ ಎಂಬ
ಸಿಎಂ ಆರೋಗ್ಯದಲ್ಲಿ ಏರುಪೇರು: ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಮಧ್ಯಾಹ್ನದ ಕಲಾಪಕ್ಕೆ ಗೈರಾದರು. ಹೊಟ್ಟೆನೋವು ಹಿನ್ನೆಲೆಯಲ್ಲಿ ಬೆಳಗಾವಿಯ ಸರ್ಕ್ಯೂಟ್ ಹೌಸ್‌ನಲ್ಲಿ ಸಂಜೆಯವರೆಗೆ ವಿರಮಿಸುತ್ತಿದ್ದು, ಅವರ ಈ ದಿನದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಆರೋಗ್ಯದಲ್ಲಿ ಸ್ಥಿರತೆ ಕಂಡು ಬಂದರೆ ಗುರುವಾರ ಸದನಕ್ಕೆ ಆಗಮಿಸುತ್ತಾರೆ.
ಬುರ್ಖಾ ಧರಿಸಿಲ್ಲವೆಂದು ಹೆಂಡತಿ, ಮಕ್ಕಳ ಕೊಂದು ಶೌಚಾಲಯ ಗುಂಡಿಯಲ್ಲಿ ಬಚ್ಚಿಟ್ಟ
ಉತ್ತರ ಪ್ರದೇಶದಲ್ಲಿ ಬುರ್ಖಾ ಧರಿಸದೆ ಮನೆಯಿಂದ ಹೊರಬಂದಿದ್ದಕ್ಕೆ ವ್ಯಕ್ತಿಯೊಬ್ಬ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ ಹೂತುಹಾಕಿರುವ ಪ್ರಕರಣ ಬಹಿರಂಗಗೊಂಡಿದೆ. ಪತ್ನಿ ಬುರ್ಖಾ ಧರಿಸದೆ ಹೊರಗೆ ಹೊರಟಿದ್ದಕ್ಕೆ ಆರಂಭವಾದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಫಾರೂಕ್ ಮೂವರನ್ನು ಕೊಲೆ
ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿ ಬಿಜೆಪಿ ಬೇರೆ ರಾಜ್ಯಗಳಲ್ಲಿ ಗೆಲ್ಲುತ್ತಿದೆ: ಡಿಕೆ ಶಿವಕುಮಾರ್
ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಯೇ ಎನ್ ಡಿಎ ಇಡೀ ದೇಶದಲ್ಲಿ ಬೇರೆ ರಾಜ್ಯಗಳಲ್ಲಿ ಚುನಾವಣೆ ಗೆದ್ದು ಅಧಿಕಾರ ಪಡೆಯುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಇಲ್ಲವಾಗಿದ್ದರೆ, ನೀವು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಜನಪದ ಗಾಯಕ ಮೈಲಾರಿ ಅರೆಸ್ಟ್
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎನ್ನಲಾಗಿರುವ ಮೈಲಾರಿ ಎಂಬಾತನನ್ನು ಬಾಗಲಕೋಟೆಯ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಮೈಲಾರಿಹಾಗೂ ಆತನ ಐವರು ಸಹಚರರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಘಟನೆ ಅಕ್ಟೋಬರ್ 24 ರಂದು
ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ನ್ಯಾಷನಲ್ ಹೆರಾಲ್ಡ್ ದೇಶದ ಆಸ್ತಿ, ನಮಗೆ ನ್ಯಾಯ ಸಿಕ್ಕಿದೆ: ಡಿಕೆ ಶಿವಕುಮಾರ್
ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ. ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ,
ಗೃಹಲಕ್ಷ್ಮೀ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಷಾದ: ಸಭಾತ್ಯಾಗ ಮಾಡಿದ ವಿಪಕ್ಷಗಳು!
ಗೃಹಲಕ್ಷ್ಮೀ ಹಣ ಬಿಡುಗಡೆ ಕುರಿತು ನೀಡಿದ ಮಾಹಿತಿ ತಪ್ಪಾಗಿದ್ದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಷಾದ ವ್ಯಕ್ತಪಡಿಸಿದ ನಂತರವೂ ಸುಮ್ಮನಾಗದ ವಿಪಕ್ಷ ಸದಸ್ಯರು ಕಲಾಪ ಬಹಿಷ್ಕರಿಸಿ ಸಭಾತ್ಯಾಗ ಮಾಡಿದ ಘಟನೆ ಬುಧವಾರ ನಡೆಯಿತು. ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ವಿಚಾರದಲ್ಲಿ ಸದನಕ್ಕೆ ತಪ್ಪು
ಕಾವೇರಿ-2, ಇ-ಸ್ವತ್ತು ಡಿಜಿಟಲ್ ಡೇಟಾ ಲಿಂಕ್ ಗೆ ತ್ವರಿತ ಪರಿಹಾರ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ರಾಜ್ಯದಲ್ಲಿ ಕಾವೇರಿ-2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಪರಿಷತ್ತಿನಲ್ಲಿ ಸದಸ್ಯರಾದ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾವೇರಿ 2.0
ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: ಸಿಎಂ ಸಿದ್ದರಾಮಯ್ಯ
ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ




