Menu

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧ: ಏ.7 ರಿಂದ ಸುಪ್ರೀಂ ವಿಚಾರಣೆ

ಶಬರಿಮಲೆ ದೇಗುಲ ಸೇರಿದಂತೆ ದೇಶಾದ್ಯಂತ ಹಲವು ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶ ನಿರ್ಬಂಧಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಏ.7 ರಿಂದ ವಿಚಾರಣೆ ನಡೆಯಲಿದೆ. ಒಂಬತ್ತು ಸದಸ್ಯರ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಸುಪ್ರೀಂಕೋರ್ಟ್ ಏ.22ಗೊಳಗೆ ವಿಚಾರಣೆ ಪೂರ್ಣಗೊಳಿಸುವ ಗಡುವು ವಿಧಿಸಿಕೊಂಡಿದೆ. ಏಪ್ರಿಲ್ 7 ರಂದು ಬೆಳಿಗ್ಗೆ 10.30 ಕ್ಕೆ ವಿಚಾರಣೆ ಆರಂಭವಾಗಲಿದೆ ಎಂದು ಕೋರ್ಟ್‌ ತಿಳಿಸಿದೆ. ಹಿಂದಿನ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಏಪ್ರಿಲ್ 7 ರಿಂದ ಏಪ್ರಿಲ್

ಪಿಯು, ಡಿಗ್ರಿ ಮುಗಿಸಿದ ನಕಲಿ ವೈದ್ಯರಿಂದ ಸಿಸೇರಿಯನ್‌: ಮಹಿಳೆ ಸಾವು

ಉತ್ತರ ಪ್ರದೇಶದ ಲಕ್ನೋದ ಅಂಬೇಡ್ಕರ್ ನಗರದಲ್ಲಿ ಪಿಯುಸಿ ವಿದ್ಯಾರ್ಥಿ ಮತ್ತು ಬಿಎ ಪದವೀಧರ ಐದು ವರ್ಷಗಳಿಂದ ಅಕ್ರಮ  ಆಸ್ಪತ್ರೆಯೊಂದರಲ್ಲಿ  ವೈದ್ಯರಾಗಿದ್ದು, ಗರ್ಭಿಣಿಗೆ ಸಿಸೇರಿಯನ್‌ ಮಾಡಲು ಹೋಗಿ ಪ್ರಾಣ ಕಸಿದಿದ್ದಾರೆ.  ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸೆ-ಸೆಕ್ಷನ್

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಏಳು ಕಾರ್ಮಿಕರು ಸಜೀವ ದಹನ

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಭಿವಾಡಿ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಏಳು ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ. ಕಾರ್ಖಾನೆಯೊಳಗೆ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದೆ. ಘಟನೆ ನಡೆದಾಗ 25 ಕಾರ್ಮಿಕರು ಸ್ಥಳದಲ್ಲಿದ್ದರು ಎನ್ನಲಾಗಿದೆ. ಈ ಕಾರ್ಖಾನೆಯನ್ನು ವ್ಯಕ್ತಿಯೊಬ್ಬರು

ಚಿತ್ರದುರ್ಗದ ಶಾಲೆಯಲ್ಲಿ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಚಿತ್ರದುರ್ಗದ ಭರಮಸಾಗರದಲ್ಲಿರುವ ಖಾಸಗಿ ವಸತಿ ಶಾಲೆಯೊಂದರ ವಿದ್ಯಾರ್ಥಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ವಸತಿ ಶಾಲೆಯ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡವ. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿಯವನಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆತ 3ನೇ ಮಹಡಿಯಿಂದ

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಸಾಯಿಸಿದೆ. ತೋಟದಲ್ಲಿ ಅವರು ನಡೆದುಕೊಂಡು ಹೋಗುತ್ತಿರುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಕಾಡಾನೆಯ ಈ ದಾಳಿಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್

ರಾಜ್ಯದ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ

ರಾಜ್ಯದಲ್ಲಿ ಹಲವು ನ್ಯಾಯಾಲಯಗಳಿಗೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಧಾರವಾಡ, ದಾವಣಗೆರೆ ಹಾಗೂ ಕೊಡಗು ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ಕ್ರಮ ಕೈಗೊಂಡಿವೆ. ಈ ಹಿಂದೆ

ಆರೆಸ್ಸೆಸ್‌ಗೆ ನಿಂದನೆ: ಪ್ರಿಯಾಂಕ್‌ ಖರ್ಗೆ ವಿರುದ್ಧ ಆರ್‌ ಅಶೋಕ ಆಕ್ರೋಶ

ಆರ್ ಎಸ್ಎಸ್ ಸಂಘಟನೆಯನ್ನು ವಾಚಾಮಗೋಚರವಾಗಿ ಬೈದರೆ, ನಿರಂತರವಾಗಿ ನಿಂದಿಸಿದರೆ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಪಕ್ಷದಲ್ಲಿ ಏನಾದರೂ ಸ್ಥಾನಮಾನ ಪಡೆಯಬಹುದು, ಇನ್ನೂ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆಯಲ್ಲಿರುವ ಸಚಿವ @PriyankKharge ಅವರು ಅದನ್ನೇ ನಿತ್ಯ ಚಾಳಿ ಮಾಡಿಕೊಂಡಿದ್ದಾರೆಂದು ಪ್ರತಿಪಕ್ಷ ನಾಯಕ ಆರ್‌

ಪೊಲೀಸ್‌ ಆಯುಕ್ತರ ಹೆಸರಲ್ಲಿ ಫೇಸ್‌ಬುಕ್‌ ಖಾತೆ: ವಂಚನೆಗೆ ಯತ್ನ

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರು ಬಳಸಿಕೊಂಡು ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಜನರನ್ನು ವಂಚಿಸಲು ಪ್ರಯತ್ನ ನಡೆಸಿರುವ ಘಟನೆ ಬಹಿರಂಗಗೊಂಡಿದೆ.  ಸೀಮಂತ್ ಕುಮಾರ್ ಸಿಂಗ್ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು

ಆರ್ಥಿಕ ನಿರ್ಬಂಧ ತೆರವು ಮನಸ್ಸಿದ್ದರೆ ಅಮೆರಿಕದೊಂದಿಗೆ ಪರಮಾಣು ಒಪ್ಪಂದಕ್ಕೆ ಸಿದ್ಧವೆಂದ ಇರಾನ್‌

ಅಮೆರಿಕವು ಆರ್ಥಿಕ ನಿರ್ಬಂಧ ತೆರವು ವಿಚಾರದಲ್ಲಿ ಮುಕ್ತ ಮನಸ್ಸು ಹೊಂದಿದ್ದರೆ, ಪರಮಾಣು ಒಪ್ಪಂದ ಅಂತಿಮಗೊಳಿಸುವ ನಿಟ್ಟಿನಲ್ಲಿ ರಾಜಿ ಮಾಡಿಕೊಳ್ಳಲು ಸಿದ್ಧವಿರುವುದಾಗಿ ಇರಾನ್ ತಿಳಿಸಿದೆ. ಇರಾನ್‌ನ ಉಪ ವಿದೇಶಾಂಗ ಸಚಿವ ಮಜಿದ್ ತಖ್ತ್ ರವಾಂಚಿ ‘ಬಿಬಿಸಿ’ಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಇಂದಿನಿಂದ ಲಗೇಜ್‌ ದರ ಏರಿಕೆ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಪರಿಷ್ಕರಿಸಲಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಡೀಸೆಲ್, ಸಿಬ್ಬಂದಿ ಹಾಗೂ ಇತರ ವೆಚ್ಚಗಳಲ್ಲಿ ತೀವ್ರ ಹೆಚ್ಚಳವಾಗಿರುವ ಹಿನ್ನೆಲೆ ನಿಗಮವು ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರವನ್ನು ಪರಿಷ್ಕರಿಸಿದೆ. ಈ ಹಿಂದೆ ಶೇ.15 ಬಸ್ ಪ್ರಯಾಣ