Menu

ಕೆಆರ್‌ಎಸ್ ನೀರಿನ ಮಟ್ಟ 105 ಅಡಿಗೆ ಏರಿಕೆ: ನಾಲೆಗಳಿಗೆ ಹರಿಸಲು ರೈತರ ಆಗ್ರಹ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಕೆಆರ್‌ಎಸ್ ನೀರಿನ ಮಟ್ಟ 105 ಅಡಿಗೆ ಏರಿಕೆಯಾಗಿದೆ. ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೆಆರ್‌ಎಸ್ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದಾಗ ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯ ರೈತರಿಗೆ ಯಾವುದೇ ಹೊಸ ಬೆಳೆ ಬಿತ್ತನೆ ಮಾಡಬೇಡಿ, ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾಗಿದೆ ಎಂದು ಸೂಚನೆ ನೀಡಿತ್ತು. ಈಗ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಉತ್ತಮ

ವಿಮೆ ಇಲ್ಲದ ವಾಹನಗಳಿಗೆ ಇಂಧನವಿಲ್ಲ: ಸುಪ್ರೀಂ

ದೇಶದಲ್ಲಿ ಇನ್ನು ಮುಂದೆ ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್‌ ಬಂಕ್‌ಗಳ್ಲಲಿ ಇಂಧನ ನಿರಾಕರಣೆ ಪ್ರಾಯೋಗಿಕ ಯೋಜನೆಯೊಂದನ್ನು ರೂಪಿಸುವಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ವಿಮೆ ಇಲ್ಲದೆ ಹೆಚ್ಚಿನ ಸಂಖ್ಯೆಯ ವಾಹನಗಳು ಸಂಚರಿಸುತ್ತಿವೆ. ವಿಮೆ ಇಲ್ಲದೆ ವಾಹನಗಳನ್ನು ಓಡಿಸುವುದರ ಮೇಲೆ ಕ್ರಮ

ನಮ್ಮ ಒಪ್ಪಿಗೆಯಿಲ್ಲದೆ ಹರ್ಮುಜ್‌ನಲ್ಲಿ ಹಡಗು ಸಂಚರಿಸುವಂತಿಲ್ಲ: ಅಮೆರಿಕಕ್ಕೆ ಇರಾನ್‌ ತಿರುಗೇಟು

ನಮ್ಮ ಒಪ್ಪಿಗೆಯಿಲ್ಲದೆ ಹರ್ಮುಜ್‌ನಲ್ಲಿ ಹಡಗು ಸಂಚರಿಸುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ಅಮೆರಿಕಕ್ಕೆ ಇರಾನ್‌ ತಿರುಗೇಟು ನೀಡಿದೆ. ಹರ್ಮುಜ್‌ ಜಲಸಂಧಿ ಮೂಲಕ ಸಂಚರಿಸುವ ಹಡಗುಗಳಿಗೆ ಯಾವುದೇ ದೇಶದ ಅನುಮತಿ ಅಥವಾ ಶುಲ್ಕ ಪಾವತಿಸುವ ಅಗತ್ಯ ಇಲ್ಲ ಎಂದು ಹೇಳಿರುವ ಅಮೆರಿಕಕ್ಕೆ ಇರಾನ್‌

ಯಾದಗಿರಿ ಸೀಲ್ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಬಲಿ

ಯಾದಗಿರಿಯ ಗುರುಮಠಕಲ್ ತಾಲೂಕಿನ ಕಡೇಚೂರು ಬಳಿಯ ಸೀಲ್ ಲ್ಯಾಬೋರೇಟರಿ ಕಾರ್ಖಾನೆಯಲ್ಲಿ ಗ್ಯಾಸ್‌ ಸೋರಿಕೆಯಂದ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ವಿಕ್ರಮ್ ಮತ್ತು ಸಂಜಯ್ ಹಾಗೂ ತೆಲಂಗಾಣದ ಮಹಬೂಬ್‌ನಗರದ

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುವಾಗ ಉರುಳಿದ ಜೀಪ್‌: ಯುವಕರಿಬ್ಬರ ಸಾವು

ಸ್ನೇಹಿತನ ಹುಟ್ಟು ಹಬ್ಬ ಆಚರಿಸಿ ಮಂಗಳವಾರ ರಾತ್ರಿ ವಾಪಸಾಗುತ್ತಿದ್ದಾಗ ಜೀಪ್‌ ನಿಯಂತ್ರಣ ಕಳೆದುಕೊಂಡು ಉರುಳಿದ ಪರಿಣಾಮವಾಗಿ ಯುವಕರಿಬ್ಬರು ಮೃತಪಟ್ಟಿರುವ ಘಟನೆ ನೆಲಮಂಗಲದ ಕಂಬಾಳು ಗ್ರಾಮದ ಬಳಿ ನಡೆದಿದೆ. ಪವನ್, ದೀಪಕ್ ಮೃತಪಟ್ಟವರು. ಗೆಳೆಯನ ಹುಟ್ಟುಹಬ್ಬ ಮುಗಿಸಿಕೊಂಡು ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿಕೆ ಶಿವಕುಮಾರ್

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ. ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಈ ಹಿಂದೆ ನಡೆದ ದಬ್ಬಾಳಿಕೆಗೆ ನಾವು ಅವಕಾಶ ನೀಡುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಬೆಂಗಳೂರಿನ ಕಾಟನ್ ಪೇಟೆಯಲ್ಲಿರುವ ಹಜ್ರತ್ ತವಕ್ಕಲ್ ಮಸ್ತಾನ್ ದರ್ಗಾದಲ್ಲಿ  ನಡೆದ

ನಟಿ ತ್ರಿಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಇಂದೇ ಉದಯನಿಧಿ ಬಿಡುಗಡೆಗೆ ಮದ್ರಾಸ್‌ ಹೈಕೋರ್ಟ್‌ ಆದೇಶ

ನಟಿ ತ್ರಿಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ತಮಿಳುನಾಡು ಪ್ರತಿಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಇಂದೇ ವಿಶೇಷ ಜಾಮೀನು ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ರೈತರ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಉದಯನಿಧಿ ಮುಖ್ಯಮಂತ್ರಿ

ನಿಸ್ವಾರ್ಥ ಸೇವೆಯೇ ಧರ್ಮ, ನನಗೆ ಸೇವಾ ಚಟುವಟಿಕೆ ಬಿಟ್ಟರೆ ಬೇರೆ ಆಯ್ಕೆ ಇಲ್ಲ: ಸದ್ಗುರು ಶ್ರೀ ಮಧುಸೂದನ ಸಾಯಿ

ಹಸಿದ ಮಗು ಅಮ್ಮನ ಹತ್ತಿರ, ಬದುಕುವ ಆಸೆಯಿರುವ ರೋಗಿ ವೈದ್ಯರ ಹತ್ತಿರ, ಕಲಿಯುವ ಆಸೆಯಿರುವ ವಿದ್ಯಾರ್ಥಿ ಶಿಕ್ಷಕರ ಹತ್ತಿರ ಕೋರಿಕೆ ಇಟ್ಟರೆ ಅವರು ಏನು ಮಾಡಬಹುದು? ಅವರಿಗೆ ಇಲ್ಲ ಎನ್ನುವ ಆಯ್ಕೆ ಇರುತ್ತದೆಯೇ? ಅದೇ ರೀತಿ ನನಗೂ ಸೇವಾ ಚಟುವಟಿಕೆ ಬಿಟ್ಟರೆ

ಚಿಕ್ಕಬಳ್ಳಾಪುರದಲ್ಲಿ ಕಂಟೇನರ್‌ಗೆ ಬಸ್‌ ಡಿಕ್ಕಿ: ಟೆಕ್ಕಿ ಯುವತಿ ಬಲಿ

ಚಿಕ್ಕಬಳ್ಳಾಪುರದ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರ ಅಗಲಗುರ್ಕಿ ಸಮೀಪ ಖಾಸಗಿ ಬಸ್ ಕಂಟೇನರ್‌ಗೆ ಡಿಕ್ಕಿ ಹೊಡೆದಿದ್ದು, ಟೆಕ್ಕಿ ಯುವತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬಸ್‌ ಹೈದರಾಬಾದ್‌ನಿಂದ ಬೆಂಗಳೂರಿನತ್ತ ಸಂಚರಿಸುತ್ತಿತ್ತು, ಮುಂಭಾಗದಲ್ಲಿ ಸಂಚರಿಸುತ್ತಿದ್ದ ಕಂಟೇನರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌

ಕೃಷಿ ಅಧಿಕಾರಿಗಳ ನೇಮಕ ಗೊಂದಲ ಬಗೆಹರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ 

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾದ ನಿಯಮಗಳ ತಿದ್ದುಪಡಿಯಿಂದಾಗಿ ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಸಿಎಂ ಡಿಕೆ ಶಿವಕುಮಾರ್ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.