Featured
ಬೆಂಗಳೂರಿನ ದೇಗುಲಗಳಲ್ಲಿ ಸೇನೆಗಾಗಿ ವಿಶೇಷ ಪೂಜೆ
ಭಾರತೀಯ ವಾಯುಪಡೆಯು ಆಪರೇಷನ್ ಸಿಂಧೂರ ಮೂಲಕ ಕಾಶ್ಮೀರದ 9 ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ. ಇನ್ನು ಮುಂದಿನ ದಿನಗಳಲ್ಲೂ ಸೇನೆಗೆ ಒಳಿತಾಗಲಿ ಎಂದು ಬೆಂಗಳೂರಿನ ಹಲವು ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಗವಿಗಂಗಾಧರ ದೇಗುಲದಲ್ಲಿ ದೇಶವನ್ನು ರಕ್ಷಿಸುವ ಸೇನೆಗೆ ಬಲ ನೀಡು ತಾಯಿ ಎಂದು ದುರ್ಗಾ ಹೋಮ ಮಾಡಲಾಗಿದ್ದು, ದುರ್ಗಾ ಹೋಮದ ಜೊತೆಗೆ ವಿಶೇಷ ಪೂಜೆ ಕೂಡ ನಡೆಸಲಾಗಿದೆ. ಶತ್ರುಗಳ ಸಂಹಾರದ ಜೊತೆಗೆ ಸೈನಿಕರ ಶಕ್ತಿಗಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ.
ಉತ್ತರಾಖಂಡ್ನಲ್ಲಿ ಹೆಲಿಕಾಪ್ಟರ್ ಪತನ: ಐವರು ಬಲಿ
ಉತ್ತರಾಖಂಡ್ನ ಉತ್ತರಕಾಶಿ ಜಿಲ್ಲೆಯಲ್ಲಿ ಗಂಗೋತ್ರಿ ಕಡೆಗೆ ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಪತನಗೊಂಡು ಐವರು ಪ್ರಾಣ ಕಳೆದುಕೊಂಡಿದ್ದಾರೆ. ಇಂದು (ಗುರುವಾರ) ಬೆಳಗ್ಗೆ 9 ಗಂಟೆಗೆ ಈ ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು,
ಫ್ಯಾಟಿ ಲಿವರ್ ತಡೆಯಲು ನೆಲ್ಲಿಕಾಯಿ ಸೇವನೆ ಸಹಕಾರಿ
ಲಿವರ್ನಲ್ಲಿ ಕೊಬ್ಬು ಸಂಗ್ರಹವಾಗುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆಯನ್ನು ಆರಂಭದಲ್ಲೇ ನಿಯಂತ್ರಣಕ್ಕೆ ತರದಿದ್ದಲ್ಲಿ ಅದು ಮಾರಣಾಂತಿಕವಾಗಿ ಪರಿಣಮಿಸುವ ಸಾಧ್ಯತೆಗಳೂ ಇವೆ. ಗಂಭೀರ ಆರೋಗ್ಯ ಸಮಸ್ಯೆಗಳಿಗೆ ದಾರಿಯಾಗುವ ಮೊದಲೇ ಯಕೃತ್ತಿನ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು. ಫ್ಯಾಟಿ ಲಿವರ್ ಸಮಸ್ಯೆಗೆ ನೆಲ್ಲಿಕಾಯಿಯನ್ನು ಉತ್ತಮ ಪರಿಹಾರವಾಗಿ
ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ಗೆ ಇದ್ಯಾ ಕರ್ನಾಟಕ, ಕೇರಳ ಲಿಂಕ್?
ಪಹಲ್ಗಾಮ್ ದಾಳಿಯ ಮಾಸ್ಟರ್ಮೈಂಡ್ ಎಂದು ಗುರುತಿಸಲಾಗಿರುವ ಉಗ್ರ ಶೇಖ್ ಸಜ್ಜದ್ ಗುಲ್/ ಸಜ್ಜದ್ ಅಹ್ಮದ್ ಶೇಖ್ ಗೆ ಕರ್ನಾಟಕ ಮತ್ತು ಕೇರಳದ ಲಿಂಕ್ ಇರುವುದು ಬಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್
ಪೂಂಚ್ನಲ್ಲಿ ಪಾಕ್ ಸೇನಾ ದಾಳಿ: 12 ನಾಗರಿಕರ ಸಾವು
ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆ ಉದ್ದಕ್ಕೂ ಪಾಕಿಸ್ತಾನ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ 12 ನಾಗರಿಕರು ಮೃತಪಟ್ಟಿದ್ದಾರೆ. ೫೦ ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ನಾಲ್ವರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಆಗಿದ್ದಾರೆ. ಬುಧವಾರ ತಡರಾತ್ರಿ ಆರಂಭವಾದ ಶೆಲ್
ಆಪರೇಷನ್ ಸಿಂಧೂರದಿಂದ ಕಂಗೆಟ್ಟ ಪಾಕ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಭಾರತೀಯ ವಾಯುಪಡೆಯು ಉಗ್ರರ ನೆಲೆಗಳ ಮೇಲೆ ನಡೆಸಿದ`ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಿಂದಾಗಿ ಪಾಕಿಸ್ತಾನ ಕಂಗಾಲಾಗಿದ್ದು, ಅಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯಿಸಿದ್ದು, ಈ ದಾಳಿಯಲ್ಲಿ ಅಮಾಯಕ ಪಾಕಿಸ್ತಾನಿಗಳ ಜೀವಹಾನಿಯಾಗಿದೆ. ಪಾಕಿಸ್ತಾನಿಗಳ ಆತ್ಮರಕ್ಷಣೆಗಾಗಿ ಪ್ರತೀಕಾರ ತೀರಿಸಿಕೊಳ್ಳುತ್ತೇವೆ, ಪ್ರತಿ ರಕ್ತದ
ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್, ವಿದೇಶಿ ಹಡಗುಗಳ ತೀವ್ರ ತಪಾಸಣೆ , ಆಳ ಮೀನುಗಾರಿಕೆಗೆ ತಡೆ
ಉಗ್ರರ ತಾಣಗಳ ಮೇಲೆ ಭಾರತದ ವಾಯುಪಡೆ ದಾಳಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ
ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅಧಿಕಾರಾವಧಿ ಮುಂದುವರಿಕೆ
ನವದೆಹಲಿ: ಕರ್ನಾಟಕದ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ಮುಂದುವರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರವೀಣ್ ಸೂದ್ ಅವರ ಸಿಬಿಐ ನಿರ್ದೇಶಕರಾಗಿ ಅಧಿಕಾರಾವಧಿಯನ್ನು 1 ವರ್ಷ ಮುಂದುವರಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. 1986 ಐಪಿಎಸ್ ಬ್ಯಾಚ್ ನ
ಆಪರೇಷನ್ ಸಿಂಧೂರಕ್ಕೆ ಸಚಿವ ಬೈರತಿ ಸುರೇಶ್ ಪ್ರಶಂಸೆ
ಬೆಂಗಳೂರು: ಪೆಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಭಯೋತ್ಪಾದಕರ ಕುಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಬುಧವಾರ ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ದೇಶದ ಪರಾಕ್ರಮ ಮೆರೆದಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಉಸ್ತುವಾರಿ
ಛೂ ಮಂತರ್ ಹೇಳಲು ಜೀ ಕನ್ನಡ ಬರುತ್ತಿದ್ದಾರೆ ಶರಣ್!
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಇದೇ ಮೊದಲ ಬಾರಿಗೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ಶರಣ್ ಅಭಿನಯದ ‘ಛೂ ಮಂತರ್ ಸಿನಿಮಾ ಪ್ರದರ್ಶನಗೊಳ್ಳಲಿದೆ. ಡೈನಮೊ (ಶರಣ್), ಆರ್ ಜೆ (ಚಿಕ್ಕಣ್ಣ), ಆಕಾಂಕ್ಷಾ (ಅದಿತಿ) ಮತ್ತು ನಕುಲ್ ಛೂಮಂತರ್ ಆ್ಯಂಡ್ ಕಂಪನಿ ಎಂಬ