Featured
ಮಾರ್ಚ್ 7 ರಂದು ಬಜೆಟ್ ಮಂಡನೆ ದಿನ ಪಾದಯಾತ್ರೆ ಹಾಗೂ ಪ್ರತಿಭಟನೆ: ಆರ್ ಅಶೋಕ್
ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು ಕಡೆ ಅವರಿಂದಲೇ ಸರ್ಕಾರಕ್ಕೆ ಮೆಚ್ಚುಗೆ ಹೇಳುವ ಮಾತನ್ನು ಆಡಿಸಲಾಗುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿಯಿಂದ ಮಾರ್ಚ್ 3 ರಂದು ಪ್ರತಿಭಟಿಸಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ.
ಗ್ರೇಸ್ ಅಂಕ ನೀಡದೇ ನೂರಕ್ಕೆ ನೂರು ಫಲಿತಾಂಶ ಸಾಧ್ಯವೇ?
2024-25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಗಳು ಇನ್ನೇನು ಒಂದು ತಿಂಗಳಲ್ಲಿ ಪ್ರಾರಂಭವಾಗಲಿವೆ. ಪರೀಕ್ಷಾ ತಯಾರಿಗಳು ಜೋರಾಗಿ ಸಾಗುತ್ತಿವೆ. ಮಕ್ಕಳು, ಪಾಲಕರು ಹಾಗೂ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಮೇಲೆ ವಿಶೇಷವಾದ ಒತ್ತಡ, ನಿರೀಕ್ಷೆಗಳಿವೆ. ನಮ್ಮಲ್ಲಿ ರಾಜ್ಯದ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ
ಸೆಬಿ ವಂಚನೆ ಪ್ರಕರಣ: ಮಾಧವಿ ಬುಚ್ ಹಾಗೂ ಐವರ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ಇತರ ಐದು ಅಧಿಕಾರಿಗಳ ವಿರುದ್ಧ ಷೇರು ಮಾರುಕಟ್ಟೆ ವಂಚನೆ ಆರೋಪದಡಿ ಪ್ರಕರಣ ದಾಖಲಿಸಲು ಮುಂಬೈ ಭ್ರಷ್ಟಾಚಾರ ನಿಗ್ರಹ ದಳ ನ್ಯಾಯಾಲಯ ಆದೇಶ ನೀಡಿದೆ. ಸಪನ್
ಉದ್ಯಮಿಯ ಅಪಹರಿಸಿ ಹಣಕ್ಕೆ ಬೇಡಿಕೆ: ಸತೀಶ್ ಜಾರಕಿಹೊಳಿ ಆಪ್ತೆಯ ಬಂಧನ
ಐದು ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಫೆ.14ರಂದು ಆರೋಪಿಗಳು ಅಪಹರಿಸಿ
ಬಂಗಾರಪೇಟೆ ಕುಪ್ಪನಹಳ್ಳಿ ಬಳಿ ಕಾರು ಬೈಕ್ ಡಿಕ್ಕಿಯಾಗಿ ನಾಲ್ವರ ಸಾವು
ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ಕು ಮಂದಿ ಅಸು ನೀಗಿದ್ದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಕೆಜಿಎಫ್ ತಾಲೂಕಿನ ಕಮ್ಮಸಂದ್ರ
ಚಾಂಪಿಯನ್ಸ್ ಟ್ರೋಫಿ 2025: ನ್ಯೂಝಿಲೆಂಡ್ ಎದುರು ಭಾರತದ ಜಯ
ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಎದುರು ಭಾರತ ಗೆಲುವು ಸಾಧಿಸಿದೆ. ಟಾಸ್ ಗೆದ್ದ ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ
2028 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ: ಡಿಸಿಎಂ
“ಕಾಂಗ್ರೆಸ್ ಪಕ್ಷದಲ್ಲಿ ನಾಯಕ ಪಟ್ಟವಿಲ್ಲ. ಪಕ್ಷಕ್ಕೆ ದುಡಿಯುವವರೆಲ್ಲರೂ ಕಾರ್ಯಕರ್ತರೇ. 2028 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವ ಸಮಾವೇಶದಲ್ಲಿ ಮಾತನಾಡಿದರು. “ಬೂತ್ ಮಟ್ಟದಲ್ಲಿ
ಜಾತಿ ಆಧಾರಿತ ರಾಜಕಾರಣ ಬೇಡ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ: ಡಿ.ಕೆ. ಶಿವಕುಮಾರ್
“ಜಾತಿ ಆಧಾರಿತ ರಾಜಕಾರಣ ಬಿಡಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಮುಂದಿನ ಚುನಾವಣೆಯಲ್ಲಿ ಉಡುಪಿ, ಮಂಗಳೂರು ಜಿಲ್ಲೆಗಳಿಂದ 8-9 ಶಾಸಕರು ಆಯ್ಕೆಯಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ,
ಚುನಾವಣೆ ಬಂದಾಗ ಎಚ್ಚೆತ್ತುಕೊಂಡರೆ ಉಪಯೋಗವಿಲ್ಲ,ಸಂಘಟನೆ ಚುರುಕುಗೊಳಿಸಿ : ಹೆಚ್‌ಡಿಕೆ
ಲೋಕಸಭೆ, ವಿಧಾನಸಭೆ ಅಥವಾ ಇನ್ನಾವುದೇ ಚುನಾವಣೆ ಬಂದಾಗ ಎಚ್ಚೆತ್ತರೆ ಉಪಯೋಗ ಇಲ್ಲ. ಹಲವು ವರ್ಷಗಳಿಂದಲೇ ನಾವು ಸಂಘಟನೆಗೆ ಶಕ್ತಿ ತುಂಬಿ ಜನರ ಜತೆ ಇದ್ದರೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಬಹುದು. ಇಲ್ಲವಾದರೆ ನಮ್ಮ ಶ್ರಮ ವ್ಯರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ
ಕೊಪ್ಪಳದಲ್ಲಿ ಹಾನಿಕಾರಕ ಕೈಗಾರಿಕೆ ಸ್ಥಾಪಿಸ ಬೇಡಿ: ಸಚಿವ ಹೆಚ್‌ಡಿ ಕೆ
ಪರಿಸರಕ್ಕೆ ಹಾಗೂ ಸಾಮಾನ್ಯ ಜನರಿಗೆ ಹಾನಿಕಾರಕ ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವುದು ಉಚಿತವಲ್ಲ ಎಂದು ರಾಜ್ಯ ಸರಕಾರಕ್ಕೆ ಹೇಳಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿದ್ದ ಸಚಿವರು




