Featured
ಗ್ಯಾರಂಟಿ ಹಣ ಕೃಷಿಗೆ ಕೊಟ್ಟರೆ ಅದೇ 100 ಗ್ಯಾರಂಟಿಗೆ ಸಮ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ICAR) ಯನ್ನು ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರ ಜತೆ ಕೂಡಲೇ ಚರ್ಚೆ ನಡೆಸುವುದಾಗಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ತೋಟಗಾರಿಕಾ ಮೇಳ – 2025 ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಬಗ್ಗೆ ಕೃಷಿ ಸಚಿವರಾದ ಶಿವರಾಜ್
ಡಿಕೆ ಶಿವಕುಮಾರ್ ಸಿಎಂ ಮಾಡುವ ಕನಸು ಇದೆ: ಸೋದರ ಡಿಕೆ ಸುರೇಶ್
ಅಣ್ಣ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಕನಸು ಇದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಆಗಬೇಕು ಎಂಬ ಕನಸು ಇದೆ. ಆದರೆ ಸದ್ಯಕ್ಕೆ ಸಿಎಂ ಸ್ಥಾನ
ದೇಶ ಕೇವಲ ಗುಜರಾತ್, ಉತ್ತರ ಪ್ರದೇಶಕ್ಕೆ ಸೀಮಿತವಲ್ಲ: ಮಾಜಿ ಸಂಸದ ಡಿ.ಕೆ. ಸುರೇಶ್
ಬೆಂಗಳೂರು: ಈ ದೇಶ ಕೇವಲ ಗುಜರಾತ್, ಉತ್ತರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಎಲ್ಲಾ ರಾಜ್ಯಗಳು ಸಮಾನಾಂತರ ಹಕ್ಕು ಹೊಂದಿವೆ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ನೀಡಬೇಕು” ಎಂದು ಮಾಜಿ ಸಂಸದ ಡಿಕೆ ಸುರೇಶ್ ಎಚ್ಚರಿಕೆ
ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಮಾರ್ಚ್ 3ರಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಮಾರ್ಚ್ ೩ರಿಂದ ವಿಧಾನಸಭಾ ಅಧಿವೇಶನ ಆರಂಭಾಗಲಿದ್ದು, ಮಾರ್ಚ್ 7ರಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಾರಿಗೆ ಬೆಜೆಟ್ ಮಂಡಿಸಲಿದ್ದಾರೆ.
ಚಾಂಪಿಯನ್ಸ್ ಟ್ರೋಫಿ: 16 ವರ್ಷ ನಂತರ ಸೆಮೀಸ್ ಗೆ ಆಸ್ಟ್ರೇಲಿಯಾ: ಆಫ್ಘಾನ್ ಅತಂತ್ರ
ಆಸ್ಟ್ರೇಲಿಯಾ ತಂಡ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ 16 ವರ್ಷಗಳ ನಂತರ ಸೆಮಿಫೈನಲ್ ಪ್ರವೇಶಿಸಿದರೆ, ಆಫ್ಘಾನಿಸ್ತಾನದ ಸ್ಥಿತಿ ಅತಂತ್ರವಾಗಿದೆ. ಪಾಕಿಸ್ತಾನದ ಲಾಹೋರ್ ನಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ ಮತ್ತು ಆಫ್ಘಾನಿಸ್ತಾನ ನಡುವಣ ಬಿ ಗುಂಪಿನ ಪಂದ್ಯ ಮಳೆಯಿಂದ ರದ್ದುಗೊಂಡಿತು. ಇದರಿಂದ
ಇಂಗ್ಲೆಂಡ್ ತಂಡದ ನಾಯಕತ್ವ ತ್ಯಜಿಸಿದ ಜೋಸ್ ಬಟ್ಲರ್!
ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆಮಿಫೈನಲ್ ಪ್ರವೇಶಿಸಲು ವಿಫಲವಾದ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಸ್ಥಾನವನ್ನು ಜೋಸ್ ಬಟ್ಲರ್ ತ್ಯಜಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಬಿ ಗುಂಪಿನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಶನಿವಾರ ಎದುರಿಸಲಿದೆ. ಈ ಪಂದ್ಯ ಇಂಗ್ಲೆಂಡ್ ತಂಡವನ್ನು ಕೊನೆಯ ಬಾರಿಗೆ
ಪಿಎಫ್ ಬಡ್ಡಿ ದರ ಶೇ.8.25ರಲ್ಲಿ ಯಥಾಸ್ಥಿತಿ
ನವದೆಹಲಿ: ಭಾರತದ ನಿವೃತ್ತಿ ನಿಧಿ ಸಂಸ್ಥೆಯಾಗಿರುವ ಇಪಿಎಫ್ಒ 2024-25ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇಕಡಾ 8.25ರ ಮಟ್ಟದಲ್ಲಿಯೇ ಮುಂದುವರಿಸಲಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಸಾರ್ವತ್ರಿಕ ಚುನಾವಣೆಗೂ ಮುನ್ನ ಇಪಿಎಫ್ಒ ಬಡ್ಡಿದರವನ್ನು ಶೇಕಡಾ 8.15ರಿಂದ 2023-24ಕ್ಕೆ
ಚಿಕ್ಕಬಳ್ಳಾಪುರ ನಂತರ ಬಳ್ಳಾರಿಯಲ್ಲಿ ಹಕ್ಕಿಜ್ವರ ಪತ್ತೆ; ರಾಯಚೂರಿನಲ್ಲಿ ಅಲರ್ಟ್!
ಚಿಕ್ಕಬಳ್ಳಾಪುರದಲ್ಲಿ ಕಾಣಿಸಿಕೊಂಡ ಹಕ್ಕಿಜ್ವರ ಇದೀಗ ಬಳ್ಳಾರಿಯಲ್ಲೂ ಕಾಣಿಸಿಕೊಂಡಿದೆ. ಇದರಿಂದ ಹಕ್ಕಿಜ್ವರ ಒಂದರ ನಂತರ ಮತ್ತೊಂದು ಎಂಬಂತೆ ವಿವಿಧ ಜಿಲ್ಲೆಗಳಿಗೆ ಹರಡುವ ಭೀತಿ ಎದುರಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿ ಗ್ರಾಮದ ಎರಡು ಮನೆಗಳಲ್ಲಿ ಸಂತೆಯಿಂದ ತಂದು ಸಾಕಿದ್ದ 16 ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು
ಚಾಮರಾಜನಗರದಲ್ಲಿ ಭೀಕರ ಅಪಘಾತ: ಮಾದಪ್ಪನ 5 ಭಕ್ತರ ದುರ್ಮರಣ
ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಮಾದಪ್ಪ ಭಕ್ತರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ
ರಾಜ್ಯದ ಕೈಗಾರಿಕಾ ನೀತಿಯಲ್ಲಿ ಪ್ರವಾಸೋದ್ಯಮ ಸೇರ್ಪಡೆ: ಡಿಕೆ ಶಿವಕುಮಾರ್
ಬೆಂಗಳೂರು: ಕರ್ನಾಟಕ ವಿವಿಧ ಆಯಾಮಗಳನ್ನು ಹೊಂದಿರುವ ರಾಜ್ಯ. ಕರ್ನಾಟಕ ಇಡೀ ಭಾರತದಲ್ಲಿಯೇ ವೈವಿಧ್ಯಮಯ ಪ್ರವಾಸೋದ್ಯಮಕ್ಕೆ ತಕ್ಕನಾಗಿದೆ. ಈ ಕಾರಣಕ್ಕೆ ನಮ್ಮ ಕೈಗಾರಿಕಾ ನೀತಿಯಲ್ಲಿ ಪ್ರವಾಸೋದ್ಯಮವನ್ನು ಪ್ರಮುಖವಾಗಿ ಸೇರ್ಪಡೆ ಮಾಡಿದ್ದೇವೆ. ಸಾಕಷ್ಟು ಪ್ರೋತ್ಸಾಹ ನೀಡುತ್ತಾ ಇದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.




