Featured
ಕುಟುಂಬದ ಜೊತೆ ಕಟೀಲು ದುರ್ಗೆಯ ದರ್ಶನ ಪಡೆದ ನಟಿ ಶಿಲ್ಪಾ ಶೆಟ್ಟಿ
ನಟಿ ಶಿಲ್ಪಾ ಶೆಟ್ಟಿ ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಶಿಲ್ಪಾ ಶೆಟ್ಟಿ ಮಗ, ಮಗಳು, ತಾಯಿ, ತಂಗಿ ನಟಿ ಶಮಿತಾ ಶೆಟ್ಟಿ ಜೊತೆ ಬಂದು ಕಟೀಲು ದೇವಿಯ ದರ್ಶನ ಪಡೆದು ಮಲ್ಲಿಗೆ ಹೂವು ಹರಕೆ ರೂಪದಲ್ಲಿ ದೇವಿಗೆ ನೀಡಿದ್ದಾರೆ. ಕಟೀಲು ಪರಿಸರದ ಮೊದಲಾಡಿಗುತ್ತು ಮೂಲ ಮನೆ ಹೊಂದಿರುವ ಶಿಲ್ಪಾ ಶೆಟ್ಟಿ ಆಗಾಗ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡುತ್ತಿರುತ್ತಾರೆ. ಈ ಬಾರಿ
ದರ್ಶನ್ ಬೆಂಗಳೂರಿಂದ ಹೊರ ಹೋಗ್ಬಹುದು ಎಂದ ಹೈಕೋರ್ಟ್
ನಟ ದರ್ಶನ್‌ಗೆ ಬೆಂಗಳೂರು ಬಿಟ್ಟು ಹೋಗದಂತೆ ಇದ್ದ ಷರತ್ತನ್ನು ಕೋರ್ಟ್ ಸಡಿಲಿಸಿದೆ. ವಿದೇಶಕ್ಕೆ ಹೋಗುವುದಾದರೆ ಮಾತ್ರ ಕೋರ್ಟ್ ಅನುಮತಿ ಬೇಕು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಮಾಡಿದೆ. ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಮನವಿಗೆ ಸ್ಪಂದಿಸಿದ ಹೈಕೋರ್ಟ್ ಈ ಸಡಿಲಿಕೆ
ಕೇಂದ್ರದ ಕ್ಷೇತ್ರ ಪುನರ್ ವಿಂಗಡಣೆ ಪ್ರಸ್ತಾಪ ವಿರುದ್ಧ ತಿರುಗಿಬಿದ್ದ ದಕ್ಷಿಣ ಭಾರತ ರಾಜ್ಯಗಳು!
ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಸ್ತಾಪಿಸಿದ ಕ್ಷೇತ್ರ ಪುನರ್ ವಿಂಗಡಣೆ ವಿಷಯ ಇದೀಗ ವಿವಾದಕ್ಕೆ ತಿರುಗಿದ್ದು, ಪ್ರತಪಕ್ಷಗಳನ್ನು ಹಣಿಯಲು ಮಾಡಿರುವ ತಂತ್ರ ಎಂದು ದಕ್ಷಿಣ ಭಾರತ ರಾಜ್ಯ ಸರ್ಕಾರಗಳು ತಿರುಗಿಬಿದ್ದಿವೆ. ಕ್ಷೇತ್ರ ಪುನರ್ ವಿಂಗಡಣೆ ಪ್ರಸ್ತಾಪಕ್ಕೆ ಕರ್ನಾಟಕ, ತಮಿಳುನಾಡು ಹಾಗೂ
ಹಲವು ದೇಶಗಳಲ್ಲಿ ಇಂದು ಕಂಪಿಸಿದ ಭೂಮಿ
ಪಾಕಿಸ್ತಾನ ಸೇರಿದಂತೆ ಶುಕ್ರವಾರ ಬೆಳಗ್ಗೆಯೇ ಹಲವು ದೇಶಗಳಲ್ಲಿ ಭೂಮಿ ಕಂಪಿಸಿದೆ. ನೇಪಾಳದಲ್ಲಿ ಭೂಕಂಪನ ದಾಖಲಾದ ಕೆಲವೇ ಗಂಟೆಗಳಲ್ಲಿ ಪಾಕ್ ನಲ್ಲೂ ಭೂಕಂಪನ ಆಗಿದೆ. ಪಾಕಿಸ್ತಾನದಲ್ಲಿ ಬೆಳಗಿನ ಜಾವ 5.14ಕ್ಕೆ 4.5 ತೀವ್ರತೆಯ ಭೂಕಂಪ ದಾಖಲಾಗಿದೆ. ಭೂಕಂಪದ ಆಳ 10 ಕಿ.ಮೀ ದಾಖಲಾಗಿದೆ.
ಮೈಸೂರು ಒಡೆಯರ್ ಕುಟುಂಬಕ್ಕೆ 3,400 ಕೋಟಿ ರೂ.ನೀಡಿ: ರಾಜ್ಯಕ್ಕೆ ಸುಪ್ರೀಂ ನಿರ್ದೇಶನ
ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗೆಂದು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಒಂದು ವಾರ ದೊಳಗೆ 3,400 ಕೋಟಿ ರೂ. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮರೆವಿನ ಕಾಯಿಲೆ ಆಲ್‌ಝೈಮರ್ ನಿಯಂತ್ರಿಸುವ ಅಣಬೆ ತಳಿ ಅಭಿವೃದ್ಧಿ
ಮೆದುಳಿನ ನರಕೋಶಗಳು ನಿಷ್ಕ್ರಿಯಗೊಂಡು ಉಂಟಾಗುವ ಮರೆವಿನ ಕಾಯಿಲೆ ‘ಆಲ್‌ಝೈಮರ್’ ನಿಯಂತ್ರಿಸುವ ಔಷಧೀಯ ಗುಣವುಳ್ಳ ಲಯನ್ಸ್‌ಮೇನ್’ ಹೆಸರಿನ ಅಣಬೆಯನ್ನು ಭಾರತೀಯ ತೋಟಗಾರಿಕೆ ಸಂಶೋಧನಾ ಕೇಂದ್ರ (ಐಐಎಚ್‌ಆರ್) ಅಭಿವೃದ್ಧಿಪಡಿಸಿದೆ. ‘ಲಯನ್ಸ್‌ಮೇನ್’ ಅಣಬೆ ಮೆದುಳಿನ ನರಕೋಶಗಳು ಸತ್ತಾಗ ಮೆದುಳು ಮತ್ತು ನರ ಮಂಡಲದ ಮೇಲೆ ಪರಿಣಾಮ
ಸೆಕ್ಸ್ ನಿರಾಕರಿಸಿದ ಮಹಿಳೆ, ಮಗುವನ್ನು ಕೊಂದಾತನಿಗೆ ಜೀವಾವಧಿ ಶಿಕ್ಷೆ
ಹೊಸಪೇಟೆ ಮೂಲದ ಪ್ರಶಾಂತ್ ಎಂಬಾತ ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನು ಸಾಯಿಸಿ, ನಾಲ್ಕು ವರ್ಷದ ಮಗುವನ್ನು ಕೊಂದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗೆ ಗುರಿಯಾಗಿದ್ದಾನೆ. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅಪರಾಧಿಗೆ
ವಿವಿಗಳ ನಕಲಿ ಅಂಕಪಟ್ಟಿ ಜಾಲ ಬೇಧಿಸಿ ಪ್ರಮುಖ ಆರೋಪಿಯ ಬಂಧಿಸಿದ ಕಲಬುರಗಿ ಪೊಲೀಸ್
ಕಲಬುರಗಿ ನಗರ ಪೊಲೀಸರು ದೇಶದ ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ್ದಾರೆ. ಸಿಇಎನ್ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ದೆಹಲಿ ಮೂಲದ ರಾಜೀವ್ ಸಿಂಗ್ ಅರೋರಾ
ಹೆಬ್ಬಾಳದಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು
ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ನಾಗೇನಹಳ್ಳಿ ನಿವಾಸಿ ಲಿಂಗಮ್ಮ ಎಂದು ಗುರುತಿಸಲಾಗಿದೆ. ಮಹಿಳೆ ಬಸ್ ಇಳಿದು ರಸ್ತೆ ದಾಟುವಾಗ ವೇಗವಾಗಿ ಬಂದಿದ್ದ ಬಿಎಂಟಿಸಿ ಬಸ್ ಡಿಕ್ಕಿಯಾಗಿತ್ತು. ಮಹಿಳೆ ಗಂಭೀರ ಗಾಯಗೊಂಡಿದ್ದು,
ಮೊದಲೇ ತೂಕಡಿಸುವ ಜನಪ್ರತಿನಿಧಿಗಳಿಗೆ ಊಟದ ನಂತ್ರ ರಿಕ್ಲೈನರ್ ಚೇರ್ ಬೇರೆ ಕೊಡ್ಬೇಕಾ
ಅಧಿವೇಶನಗಳಿಗೆ ಹಾಜರಾಗುವುದಕ್ಕಿಂತ ಮಹತ್ವದ ಕೆಲಸ ಶಾಸಕರಿಗೆ ಬೇರಾವುದಿದೆ, ಅದಕ್ಕೂ ಗೈರು ಹಾಜರಾಗಿ ಕಲಾಪಗಳಿಗೆ ಚಕ್ಕರ್ ಹೊಡೆಯುತ್ತಾರೆಂದರೆ ಇವರನ್ನು ಆರಿಸಿ ಕಳಿಸುವ ಪ್ರಮೇಯವಾದರೂ ಏನಿದೆ, ಪ್ರೈಮರಿ ಶಾಲೆಯ ಮಕ್ಕಳು ಕೇವಲ ಎರಡು ಮೂರು ದಿನ ಶಾಲೆಗೆ ಚಕ್ಕರ್ ಹಾಕಿದಲ್ಲಿ ಅವರಿಗೆ ನಾನಾ ರೂಪದ




