Menu

ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಮಹಾರಥೋತ್ಸವ

ತುಮಕೂರು: ಐತಿಹಾಸಿಕ ಪ್ರಸಿದ್ದ ಸಿದ್ದಗಂಗೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಬೆಳಿಗ್ಗೆ 11.55ಕ್ಕೆ ಸರಿಯಾಗಿ ಶುಭ ಲಗ್ನದಲ್ಲಿ ರಥದ ಗಾಲಿಗೆ ತೆಂಗಿನಕಾಯಿ ಒಡೆದು ಹಾಗೂ ಶ್ರೀಸ್ವಾಮಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. ರಥೋತ್ಸವದಲ್ಲಿ ಶ್ರೀಕ್ಷೇತ್ರದ ಕಿರಿಯ

ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಯುಡಿಯೂರಪ್ಪ ಅವರ 83

ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು: ಶ್ರೀ ರಾಮಲಿಂಗೇಶ್ವರ ಸ್ವಾಮೀಜಿ ಭವಿಷ್ಯ

ಕಾರ್ಮೋಡ ಕವಿದಿತ್ತು ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು ನಾನ್ ಇದ್ದೇನಲೇ ಪರಾಕ್ ಎಂದು ಚಿತ್ರದುರ್ಗ ಚಿಲ್ಲೆಯ ಚನ್ನಗಿರಿ ತಾಲೂಕಿನ ಶ್ರೀ ರಾಮಲಿಂಗೇಶ್ವರ ಮಠದ ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಮಹಾಶಿವರಾತ್ರಿ ದಿನ ನಡೆದ ಚನ್ನಗಿರಿ ತಾಲೂಕಿನ ಕೆಂಗಾಪುರ

ತೆಲುಗು ಹಿರಿಯ ನಟ ಪೋಸಾನಿ ಕೃಷ್ಣ ಮುರಳಿ ಬಂಧನ

ತೆಲುಗು ಹಿರಿಯ ನಟ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ ಅವರನ್ನು ಬುಧವಾರ ರಾತ್ರಿ ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196, 353(2), ಮತ್ತು 111 ಹಾಗೂ ಎಸ್ಸಿ/ಎಸ್ಟಿ

ಮಡಿಕೇರಿಯಲ್ಲೂ ಕಾಡ್ಗಿಚ್ಚಿಗೆ 20 ಎಕರೆ ಅರಣ್ಯ ಆಹುತಿ

ಮಡಿಕೇರಿಯ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಇಗ್ಗುತಪ್ಪ ಹಾಗೂ ನಾಲಾಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬುಧವಾರ ಸಂಜೆ ಕಾಣಿಸಿಕೊಂಡ ಕಾಡ್ಗಿಚ್ಚು 20 ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ. ಮಡಿಕೇರಿ ಭಾಗಮಂಡಲ ವಲಯ ಅರಣ್ಯ ಅಧಿಕಾರಿ, ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ

ಮಾನ್ವಿಯಲ್ಲಿ ಹಕ್ಕಿಗಳ ನಿಗೂಢ ಸಾವು: ಹಕ್ಕಿ ಜ್ವರದ ಶಂಕೆ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಪಕ್ಷಿಗಳು ನಿಗೂಢವಾಗಿ ಮೃತಪಟ್ಟಿದ್ದು, ತೆಲಂಗಾಣದಲ್ಲಿವ್ಯಾಪಿಸಿರುವ ಹಕ್ಕಿ ಜ್ವರ ಹರಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಬರ್ಡ್ ಫ್ಲೂ ಹರಡುತ್ತಿರುವ ಆತಂಕ ಉಂಟಾಗಿದೆ. ಮಾನ್ವಿಯಲ್ಲಿ ಪ್ರತಿದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ನಾನಾ

ವಕ್ಫ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ

ಜಂಟಿ ಸಂಸದೀಯ ಸಮಿತಿ ನೀಡಿದ ವರದಿಯನ್ನು ಪರಿಶೀಲಿಸಿದ ಬಳಿಕ ವಕ್ಫ್ (ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ. ಜಂಟಿ ಸಂಸದೀಯ ಸಮಿತಿ ಫೆ.13ರಂದು ಸಂಸತ್ತಿನಲ್ಲಿ ವರದಿ ಮಂಡಿಸಿತ್ತು. ಈ ವರದಿ ಆಧರಿಸಿ ಫೆ.19ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ

ತಿರುಪತಿ ಲಡ್ಡು ಕಲಬೆರಕೆ: ತಪ್ಪೊಪ್ಪಿಕೊಂಡ ಡೈರಿ ಮಾಲೀಕ

ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಮಾಡಿದ ತುಪ್ಪದಲ್ಲಿ ಕಲಬೆರಕೆ ಮಾಡಿರುವುದನ್ನು 5ನೇ ಆರೋಪಿ ಅಪೂರ್ವ ಚಾವ್ಡಾ ವಿಶೇಷ ತನಿಖಾ ತಂಡದ  ತನಿಖೆ ವೇಳೆ  ಒಪ್ಪಿಕೊಂಡಿದ್ದಾರೆಂದು ವರದಿಯಾಗಿದೆ.  ತಾನು ಕೆಮಿಕಲ್ ಇಂಜಿನಿಯರಿಂಗ್ ಓದಿದ್ದು, ತುಪ್ಪದಲ್ಲಿ ರಾಸಾಯನಿಕ ಬೆರೆಸಿರುವುದನ್ನು ಒಪ್ಪಿಕೊಂಡಿದ್ದಾರೆ  ಎನ್ನಲಾ

ಚಾಂಪಿಯನ್ಸ್ ಟ್ರೋಫಿ: ಇಂಗ್ಲೆಂಡ್ ಎದುರು ಗೆದ್ದು ಬೀಗಿದ ಅಫ್ಘಾನಿಸ್ತಾನ

ಲಾಹೋರ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಫ್ಘಾನಿಸ್ತಾನ ತಂಡ 8 ರನ್ ಗಳಿಂದ ಪ್ರಬಲ ಇಂಗ್ಲೆಂಡ್ ತಂಡವನ್ನು ಸೋಲಿಸಿ ಇತಿಹಾಸ ಬರೆದಿದೆ. ಆರಂಭಿಕ ಇಬ್ರಾಹಿಂ ಜರ್ದಾರ್ ದಾಖಲೆಯ ಶತಕ ಹಾಗೂ ಅಜಮತ್ತುಲ್ಲಾ ಓಮರಾಜಿ ಅವರ ಮಾರಕ ದಾಳಿ ನೆರವಿನಿಂದ ಆಫ್ಘಾನಿಸ್ತಾನ

ಕೆಲಸದ ವೇಳೆ ನಿದ್ದೆ ಮಾಡಿದ್ದಕ್ಕೆ ಅಮಾನತು: ಆದೇಶ ರದ್ದುಗೊಳಿಸಿದ ಹೈಕೋರ್ಟ್‌

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೊಪ್ಪಳದ ಕುಕನೂರು ಡಿಪೋದಲ್ಲಿ ಕೆಎಸ್‌ಟಿ ಕಾನ್ಸ್‌ಟೆಬಲ್‌ ಚಂದ್ರಶೇಖರ್‌ ಎಂಬವರನ್ನು ಕೆಲಸದ ವೇಳೆ ನಿದ್ರೆ ಮಾಡುತ್ತಿದ್ದರೆಂಬ ಕಾರಣಕ್ಕೆ ಸೇವೆಯಿಂದ ಅಮಾನತುಗೊಳಿಸಿದ್ದ ನಿಗಮದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ. ನಿದ್ರೆ ಮನುಷ್ಯನಿಗೆ ಅತ್ಯಗತ್ಯ. ನಿದ್ರೆ ಮತ್ತು ಕೆಲಸದ ನಡುವೆ ಸಮತೋಲನ