Featured
ಕಾಂಗ್ರೆಸ್ ಕಡು ದಲಿತ ವಿರೋಧಿ ಅಂದ್ರು ಆರ್. ಅಶೋಕ್
ಕಾಂಗ್ರೆಸ್ ಕಡು ದಲಿತ ವಿರೋಧಿ ಎಂಬುದನ್ನು ಕರ್ನಾಟಕ ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಜಿಲ್ಲೆಯ ಪರಿಶಿಷ್ಟ ಜಾತಿ ಶಾಸಕರಾದ ಕಾಂಗ್ರೆಸ್‌ನ ಎಸ್.ಎನ್.ನಾರಾಯಣಸ್ವಾಮಿ (ಬಂಗಾರಪೇಟೆ), ರೂಪಕಲಾ ಶಶಿಧರ್ (ಕೆಜಿಎಫ್) ಹಾಗೂ ಜೆಡಿಎಸ್‌ನ ಸಮೃದ್ಧಿ ಮಂಜುನಾಥ್ (ಮುಳಬಾಗಿಲು) ಗೈರಾಗಿದ್ದು, ತಮಗೆ ಆಹ್ವಾನವೇ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಅಶೋಕ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, ಕಾಂಗ್ರೆಸ್
ಮದ್ದೂರಿನಲ್ಲಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಮಂಡ್ಯದ ಮದ್ದೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತೂಬಿನಕೆರೆ ಗ್ರಾಮದ ಅರುಣ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಬಸ್ ಬೆಂಗಳೂರು -ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಅರುಣ್ ಏಕಾಏಕಿ ಬಸ್ಸಿನ ಹಿಂಬದಿ
ಬೂಕರ್ ಅವಾರ್ಡ್ ಅಂತಿಮ ಪಟ್ಟಿಯಲ್ಲಿ ಕನ್ನಡದ ಬಾನು ಮುಷ್ತಾಕ್ ಕೃತಿ
ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಅಂತಿಮ 13ರ ಪಟ್ಟಿಯಲ್ಲಿ ಕನ್ನಡನಾಡಿನ ಲೇಖಕಿ ಹಾಸನದ ಬಾನು ಮುಷ್ತಾಕ್ ಅವರ ಕೃತಿ ಸ್ಥಾನ ಪಡೆದಿದೆ. ಕನ್ನಡದ ಲೇಖಕಿಯೊಬ್ಬರ ಅನುವಾದಿತ ಕೃತಿಯೊಂದು ಬೂಕರ್ ಪ್ರಶಸ್ತಿಯ ಇತಿಹಾಸದಲ್ಲೇ ಮೊದಲ ಬಾರಿಗೆ 13 ಕೃತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಬಾನು
ಕಲಬುರಗಿ ಇಎಸ್ಐಸಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು
ಕಲಬುರಗಿ ನಗರದ ಸೇಡಂ ರಸ್ತೆಯಲ್ಲಿರುವ ಇಎಸ್ಐಸಿ ಆಸ್ಪತ್ರೆಯಲ್ಲಿ ಲೋ ಬಿಪಿಯಿಂದ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ತೊನಸನಹಳ್ಳಿ ಗ್ರಾಮದ ನಿವಾಸಿ ಶಿಲ್ಪಾ (32) ಮೃತಪಟ್ಟವರು. ಹೆರಿಗೆಗಾಗಿ ಇಎಸ್ಐಸಿ ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪಾ, ಅಂದೇ ಗಂಡು ಮಗುವಿಗೆ ಜನ್ಮ ನೀಡಿದರು. ನಿರಂತರ ರಕ್ತ
ಔರಾದ್: ದಂಪತಿ ಜಗಳ ಗಂಡನ ಕೊಲೆಯಲ್ಲಿ ಅಂತ್ಯ
ಔರಾದ್ : ಹೆಣ್ಣಿನ ಕೈಗಳಿಗೆ ಬಳೆ ಯಷ್ಟು ಮುಖ್ಯವೋ ಹೆಣ್ಣಿಗೂ ಗಂಡ ಅಷ್ಟೆ ಮುಖ್ಯ ಎಂಬ ಮಾತಿದೆ. ಗಂಡ-ಹೆಂಡತಿ ಪ್ರೀತಿ ಬಹಳ ಅಮೂಲ್ಯ. ಅಂತದ್ರಲ್ಲಿ ಇಲ್ಲೊಬ್ಬಳು ಹೆಂಡತಿ ಗಂಡನನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಅದೂ ಗಂಡ ಹೆಂಡತಿ ಮಧ್ಯೆ ನಡೆದ ಜಗಳ
11 ಸಾವಿರ ಕೋಟಿ ಮೊತ್ತದ ನೀರಾವರಿ ಯೋಜನೆಗಳಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಡಿಕೆ ಶಿವಕುಮಾರ್
ಬೆಂಗಳೂರು: “ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ 11 ಸಾವಿರ ಕೋಟಿ ಮೊತ್ತದ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಜತೆಗೆ ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್
43 ಕೋಟಿ ಕೊಟ್ಟರೆ ಅಮೆರಿಕ ಪೌರತ್ವ: ಗೋಲ್ಡನ್ ಕಾರ್ಡ್ ಆಫರ್ ನೀಡಿದ ಟ್ರಂಪ್!
ಅಕ್ರಮ ವಲಸಿಗರನ್ನು ಹೊರಹಾಕುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಅಮೆರಿಕ ಪೌರತ್ವ ಬಯಸುವವರು 5 ದಶಲಕ್ಷ ಡಾಲರ್ (ಅಂದಾಜು 45 ಕೋಟಿ ರೂ.) ನೀಡಿ ಗೋಲ್ಡನ್ ಕಾರ್ಡ್ ಪಡೆಯವಂತೆ ಶ್ರೀಮಂತರಿಗೆ ಆಹ್ವಾನ ನೀಡಿದ್ದಾರೆ. ಈಗಾಗಲೇ ಕಠಿಣ ವಲಸೆ ನೀತಿಯಿಂದ ಅಕ್ರಮ
ಕುಮಾರಸ್ವಾಮಿದ್ದು ಬರೀ ರಾಜಕೀಯ: ಡಿಕೆ ಶಿವಕುಮಾರ್ ತಿರುಗೇಟು
ಕುಮಾರಸ್ವಾಮಿ ಬರೀ ರಾಜಕೀಯ ಮಾಡುತ್ತಾರೆ. ಕುಮಾರಸ್ವಾಮಿ ಅವರ ಕಾಲದಲ್ಲಿ ಏನು ಮಾಡಿದ್ದಾರೆ? ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೃಷ್ಣಾ ಅವರ ಕಾಲದಲ್ಲಿ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರು ಪಾಲಿಕೆ ವ್ಯಾಪ್ತಿ ಹೆಬ್ಬಾಳ,
ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ: ಡಿಕೆ ಶಿವಕುಮಾರ್
“ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ನನ್ನ ವೈಯಕ್ತಿಕ ನಂಬಿಕೆ, ನಾನು ಪಾಲಿಸುತ್ತೇನೆ. ಇದಕ್ಕೆ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. ಕೆ.ಸಿ ವೇಣುಗೋಪಾಲ್
ಸಿದ್ದರಾಮಯ್ಯ ಬೆಂಕಿ ಇದ್ದಂತೆ: ಸಚಿವ ಜಮೀರ್ ಅಹ್ಮದ್
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಲು ಬಂದರೆ ಸುಟ್ಟು ಹೋಗ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಬಳ್ಳಾರಿಯಲ್ಲಿ ಬುಧವಾರ ಸಿಎಂ ಸ್ಥಾನದ ಕುರಿತು ಪಕ್ಷದ ಮುಖಂಡರ ಹೇಳಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಸ್ಥಾನ




