Featured
ದಾವಣಗೆರೆಯಲ್ಲಿ ಪೂಜೆ ಹೆಸರಲ್ಲಿ ಚಿನ್ನಾಭರಣ ದೋಚಿದ್ದವರು ಸೆರೆ
ಇತ್ತೀಚೆಗೆ ದಾವಣಗೆರೆಯಲ್ಲಿ ಪೂಜೆ ಮಾಡಿ ಕಷ್ಟವನ್ನು ಪರಿಹರಿಸುತ್ತೇವೆಂದು ನಂಬಿಸಿ ದಂಪತಿಯ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದ ವಂಚಕರನ್ನು ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒರಿಸ್ಸಾ ಮೂಲದ ಇಸ್ಮಾಯಿಲ್ ಜಬೀವುಲ್ಲಾ ಮತ್ತು ರುಕ್ಸಾನಾಬೇಗಂ ಬಂಧಿತರು. ಆರೋಪಿಗಳಿಂದ 8.65 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 750 ಗ್ರಾಂ ತೂಕದ ಬೆಳ್ಳಿಯ ಸಾಮಾನುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ವಂಚಕರು ದಾವಣಗೆರೆ ನಗರ ಸೇರಿ ಹಲವೆಡೆ ಇದೇ ರೀತಿ
ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಭೂಕಂಪನ
ದೆಹಲಿ-ಎನ್‌ಸಿಆರ್ ಸೇರಿದಂತೆ ಇಡೀ ಉತ್ತರ ಭಾರತದಲ್ಲಿ ಇಂದು (ಸೋಮವಾರ) ಪ್ರಬಲ ಭೂಕಂಪನದ ಅನುಭವ ಆಗಿದೆ. ರಾಷ್ಟ್ರೀಯ ಭೂಕಂಪ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.0 ರಷ್ಟಿತ್ತು. ಭೂಕಂಪದ ಕೇಂದ್ರಬಿಂದು ಧೌಲಾ ಕುವಾನ್ ಬಳಿಯ ಸರೋವರ ಉದ್ಯಾನವನದ ಬಳಿ ಇತ್ತು.
ವಿಜ್ಞಾನ ಕ್ಷೇತ್ರ ಬೆಳಗುತ್ತಿರುವ ಮಹಿಳಾ ಶಕ್ತಿ
ಮುಂಬರುವ ದಿನಗಳಲ್ಲಿ ಶೇ. 90ರಷ್ಟು ಉದ್ಯೋಗಾವಕಾಶಗಳು ವಿಜ್ಞಾನ ಮತ್ತು ತಂತ್ರಜ್ಞಾನದಿಂದ ದೊರೆಯುವ ಸಾಧ್ಯತೆಗಳಿರುವುದರಿಂದ ಮಹಿಳೆಯರಿಗೆ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಅಗತ್ಯವಿರುವ ಕೌಶಲ ಗಳನ್ನು ಒದಗಿಸಲು ಕಾರ್ಯಯೋಜನೆಗಳನ್ನು ಸಿದ್ಧಪಡಿಸಬೇಕಾಗಿದೆ. ಮೇಡಂ ಮೇರಿ ಕ್ಯೂರಿ ನೊಬೆಲ್ ಪ್ರಶಸ್ತಿ ಪಡೆದ ಮೊದಲ ಮಹಿಳೆಯಾಗಿದ್ದಾರೆ. ಎಲಿಜಬೆತ್
ನಾಗಮಂಗಲದಲ್ಲಿ ಅಣ್ಣನ ಗನ್ ಆಟಕ್ಕೆ 3 ವರ್ಷದ ಮಗು ಬಲಿ
ಹದಿಮೂರು ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದರಿಂದ ಆ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಅಸು ನೀಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ
ಮೈಸೂರು ಅಪಾರ್ಟ್‌ಮೆಂಟ್‌ನಲ್ಲಿ ತಾಯಿ, ಪತ್ನಿ, ಮಗನಿಗೆ ವಿಷವುಣಿಸಿ ಸಾಯಿಸಿ ವ್ಯಕ್ತಿ ಆತ್ಮಹತ್ಯೆ ಶಂಕೆ
ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್‌ಮೆಂಟ್‌ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾರೆ. ಕುಶಾಲ್ (15), ಚೇತನ್ (45), ರೂಪಾಲಿ (43), ಪ್ರಿಯಂವಧಾ (62)ಮೃತಪಟ್ಟವರು. ಚೇತನ್ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್ಗೆ ವಿಷವುಣಿಸಿ
ಫೋಟೋ ಶೂಟಿಂಗ್ ಮಾಡಿದರೆ ಸಮಸ್ಯೆಗಳು ಪರಿಹಾರ ಆಗಲ್ಲ: ಡಿಸಿಎಂಗೆ ಆರ್. ಅಶೋಕ್ ಟಾಂಗ್
ವೈಟ್ ಟಾಪಿಂಗ್ ಕಾಮಗಾರಿ ಹೆಸರಿನಲ್ಲಿ ಫೋಟೋ ಶೂಟಿಂಗ್ ಮಾಡಿದರೆ ಬೆಂಗಳೂರಿನ ಸಮಸ್ಯೆಗಳು ಪರಿಹಾರ ಆಗುತ್ತಾ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಾಲೆಳೆದಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರಾಗಿ ನಿಮಗೆ ಬ್ರ್ಯಾಂಡ್ ಬೆಂಗಳೂರಿನ
ಸೈಬರ್ ವಂಚನೆಗೆ ಕಡಿವಾಣ ಯಾವಾಗ?
ಜಗತ್ತು ತಂತ್ರಜ್ಞಾನದಲ್ಲಿ ವೇಗವಾಗಿ ಮುಂದುವರೆದಂತೆ ಸೈಬರ್ ಕಳ್ಳರು ಸಹ ಅಷ್ಟೇ ವೇಗವಾಗಿ ಮುಂದುವರೆಯು ತ್ತಿದ್ದಾರೆ. ಜನರಿಗೆ ಮಂಕುಬೂದಿ ಎರಚಿ ಅವರು ಕಷ್ಟಪಟ್ಟು ದುಡಿದ ಹಣವನ್ನು ಕ್ಷಣ ಮಾತ್ರದಲ್ಲಿ ಲಪಟಾಯಿಸುತ್ತಿದ್ದಾರೆ. ನಾಗರಿಕ ಸಮಾಜದಲ್ಲಿ ಇಂತಹ ಸೈಬರ್ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ
ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್: ಡಿಸಿಎಂ
ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ ಎಂದು
ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಸಿದ್ಧರಾಗಿ: ಡಿಕೆ ಶಿವಕುಮಾರ್
ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸ ದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಬೆಂಗಳೂರು ನಗರ ಪಾಲಿಕೆ ಚುನಾವಣೆ ಯನ್ನು ನಡೆಸಬೇಕಾಗಿದ್ದು
ಮದ್ದೂರಿನಲ್ಲಿ ಆಸ್ತಿಗಾಗಿ ಅಣ್ಣನ ಕೊಲೆ ಮಾಡಿಸಿ ಕುಂಭ ಮೇಳಕ್ಕೆ ತೆರಳಿದ್ದಾತ ಅರೆಸ್ಟ್
ಮದ್ದೂರು ತಾಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದಲ್ಲಿ ಜಮೀನಿನಲ್ಲಿ ಫೆಬ್ರವರಿ 11 ರಂದು ರೈತ ಕೃಷ್ಣೇಗೌಡ (45) ಎಂಬ ಹತ್ಯೆ ನಡೆದಿತ್ತು, ತನಿಖೆ ಆರಂಭಿಸಿದ ಪೊಲೀಸರು ಆಸ್ತಿಗಾಗಿ ಮೃತ ಕೃಷ್ಣೇಗೌಡನ ಸಹೋದರನೇ ಸುಪಾರಿ ನೀಡಿ ಹತ್ಯೆ ಮಾಡಿಸಿರುವುದಾಗಿ ಖಚಿತಪಡಿಸಿದ್ದಾರೆ. ಮನೆಯಿಂದ ಜಮೀನನ ಬಳಿ ಎಮ್ಮೆಗಳನ್ನು




