Wednesday, January 14, 2026
Menu

ಬೇರೆ ಯುವತಿ ಜೊತೆ ಮದುವೆ: ಮಂಟಪಕ್ಕೆ ಬಂದು ತನ್ನನ್ನೇ ಮದುವೆಯಾಗುವಂತೆ ಹಠ ಹಿಡಿದ ಪ್ರೇಯಸಿ

ಚಿಕ್ಕಮಗಳೂರಿನ ದೊಡ್ಡೇಗೌಡ ಕನ್ವೆನ್ಷನ್‌ ಹಾಲ್‌ನಲ್ಲಿ ಯುವಕ ಮದುವೆಯಾಗುತ್ತಿದ್ದಾಗ ಮಂಟಪಕ್ಕೆ ಬಂದ ಆತನ ಪ್ರೇಯಸಿ, ನಾನು ಇವನನ್ನೇ ಮದುವೆಯಾಗಬೇಕು.ಮದುವೆ ಆಗುವವರೆಗೂ ನಾನು ಇಲ್ಲಿಂದ ಹೋಗುವುದಿಲ್ಲ, ವಿಷ ಕುಡಿದು ಸಾಯುತ್ತೇನೆ ಎಂದು ಗಲಾಟೆ ಮಾಡಿದ್ದಾಳೆ. ಈತ 10 ವರ್ಷ ಪ್ರೀತಿಸಿ ಮೋಸ ಮಾಡಿದ್ದಾನೆಂದು ಯುವತಿ ದೂರಿದ್ದು, ಘಟನೆಯಿಂದಾಗಿ ಮದುವೆ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಕುಟುಂಬಸ್ಥರು ಮಂಟಪವನ್ನು ಖಾಲಿ ಮಾಡಿದ್ದಾರೆ.  ಹಾಸನದ ಬೇಲೂರಿನ ಅಶ್ವಿನಿ ಎಂಬ ಯುವತಿ ಕಲ್ಯಾಣ ನಗರ ನಿವಾಸಿ ಶರತ್ ಎಂಬಾತನನ್ನು ಹತ್ತು

ಅಕ್ರಮ ಸಂಬಂಧ: ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆಗೆ ಯತ್ನ

ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ಅಕ್ರಮ‌ ಸಂಬಂಧ ಹಿನ್ನೆಲೆ‌ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಲು ಯತ್ನಿಸಲಾಗಿದೆ. ಹಲ್ಲೆಗೊಳಗಾದ ಕಾರ್ತಿಕ್​​ (26) ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ, ಹಲ್ಲೆ ವೇಳೆ ತಡೆಯಲು ಹೋದ ಯುವಕನ

ನಾಲ್ಕು ರಾಜ್ಯ ಪೊಲೀಸ್‌ಗೆ ಬೇಕಾಗಿದ್ದ ಕಳ್ಳ ಕೊನೆಗೂ ಅರೆಸ್ಟ್‌

ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳನನ್ನು ಜೀವದ ಹಂಗು ತೊರೆದು ಆನೇಕಲ್ ತಾಲೂಕಿನ ಜಿಗಣಿ ಪೊಲೀಸರು ಬಂಧಿಸಿದ್ದಾರೆ.  ಕನಕಪುರದ ಮುಳ್ಳಳ್ಳಿ ನಿವಾಸಿ ಶಿವಕುಮಾರ್(35) ಬಂಧಿತ. ಮೂರು ಬೈಕ್ ಸೇರಿದಂತೆ 130 ಗ್ರಾಂ ಚಿನ್ನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.  ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ

ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ ಕಲಾವಿದೆ ಮನೆಯಿಂದ ಚಿನ್ನ ಕದ್ದವರ ಬಂಧನ

ಚಿತ್ರನಟಿ, ರಂಗಭೂಮಿ ಕಲಾವಿದೆಯ ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ 90 ಗ್ರಾಂ ಚಿನ್ನ ದೋಚಿದ್ದ ಕಳ್ಳರನ್ನು ತಿಪಟೂರು ನಗರ ಪೊಲೀಸರು ಬಂಧಿಸಿದ್ದಾರೆ. ಶಂಕರ್ (26), ಗುರುರಾಜು ( 33), ಮನೋಜ್ ( 18) ಬಂಧಿತರು. ತಿಪಟೂರಿನ ವಿಜಯನಗರದಲ್ಲಿ ವಾಸವಿದ್ದ ನಟಿ, ರಂಗಭೂಮಿ

ವಿಮಾನದಲ್ಲಿ ಅಮೆರಿಕ ಯುವತಿಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್‌

ಗೋವಾದಿಂದ ನವದೆಹಲಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಮೆರಿಕದ ಯುವತಿಯೊಬ್ಬರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಖಾನಾಪುರದ ಮಾಜಿ ಶಾಸಕಿ ಹಾಗೂ ಗೋವಾದ ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳ್ಕರ್ ವೈದ್ಯಕೀಯ ನೆರವು ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಡಾ.ಅಂಜಲಿ ನಿಂಬಾಳ್ಕರ್ ಅವರ ಮಾನವೀಯ ಸೇವೆಯನ್ನು

ಕುಡಿದ ಮತ್ತಿನಲ್ಲಿ ಬಸ್‌ ಕಳವು: ಆನೇಕಲ್‌ನಲ್ಲಿ ವಿದ್ಯುತ್‌ ಕಂಬ, ಪಾದಚಾರಿಗೆ ಗುದ್ದಿದ ಬಸ್‌

​​ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ಕುಡಿದ ಮತ್ತಿನಲ್ಲಿದ್ದ ನಾಲ್ವರು ಬಸ್ ಕದ್ದು ಪರಾರಿಯಾಗಲು ಯತ್ನಿಸಿದಾಗ ಬಸ್‌ ನಿಯಂತ್ರಣ ತಪ್ಪಿ ವ್ಯಕ್ತಿ ಮತ್ತು ರಸ್ತೆ ಬದಿಯ ವಿದ್ಯುತ್​​ ಕಂಬಗಳಿಗೆ ಡಿಕ್ಕಿಯಾಗಿದೆ. ಬಸ್​​ ಮುಂಭಾಗ ಜಖಂ ಆಗಿದ್ದು, ರಾತ್ರಿ ವೇಳೆ ಜನ ಸಂಚಾರ

ಶಾಸಕ ಇಕ್ಬಾಲ್ ಮಾತು ಗಂಭೀರವಾಗಿ ಪರಿಗಣಿಸಬೇಡಿ, ಚಟಕ್ಕೆ ಮಾತನಾಡುತ್ತಾನೆ ಎಂದ ಡಿಸಿಎಂ

ಶಾಸಕ ಇಕ್ಬಾಲ್  ಹುಸೇನ್‌ ಮಾತನ್ನು ಗಂಭೀರವಾಗಿ ಪರಿಗಣಿಸಬೇಡಿ, ಯಾರೂ  ಅವರ ಮಾತನ್ನು ಗಣನೆಗೆ ತೆಗೆದುಕೊಳ್ಳುವುದು ಬೇಡ. ಆತ ಚಟಕ್ಕೆ ಮಾತನಾಡುತ್ತಾನೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಡಿಸೆಂಬರ್ ನಲ್ಲಿ ಶಿವಕುಮಾರ್ ಅವರು ಸಿಎಂ ಆಗುತ್ತಾರೆ ಎಂಬ ಶಾಸಕ ಇಕ್ಬಾಲ್ ಹುಸೇನ್ ಅವರ

ಯತೀಂದ್ರ ಸಿಎಂ ಬದಲಾವಣೆ ಹೇಳಿಕೆ ಕೊಡಬಾರದಿತ್ತು: ಶಾಸಕ ನಂಜೇಗೌಡ

ಯತೀಂದ್ರ ಸಿದ್ದರಾಮಯ್ಯ ಆರಾಮವಾಗಿ ಇರಬೇಕು ಅಷ್ಟೇ,  ಅಧಿಕಾರ ಹಂಚಿಕೆ ವಿಚಾರವಾಗಿ ಇಂತಹ ಹೇಳಿಕೆ ಕೊಡಬಾರದಿತ್ತು. ಸಿದ್ದರಾಮಯ್ಯ ರಾಜ್ಯದ ನಾಯಕ, ಅವಕಾಶ ಸಿಕ್ಕಿದರೆ ರಾಷ್ಟ್ರೀಯ ನಾಯಕರೂ ಆಗಬಹುದು ಎಂದು ಶಾಸಕ ಕೆವೈ ನಂಜೇಗೌಡ ಹೇಳಿದರು ಕೋಲಾರದ   ಬೆಳಗಾನಹಳ್ಳಿಯಲ್ಲಿರುವ ಹಾಲು ಒಕ್ಕೂಟದ ಕಚೇರಿಯಲ್ಲಿ ಮಾತನಾಡಿದ

ರಾಜ್ಯದಲ್ಲಿ ಶೀತ ಅಲೆಯ ಭೀತಿ: ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿಗೆ ಜನ ತತ್ತರಿಸಿ ಹೋಗಿದ್ದಾರೆ. ಬೆಂಗಳೂರು ನಗರದಲ್ಲಿ ಕಳೆದೆಡರು ದಿನಗಳಲ್ಲಿ ಕನಿಷ್ಠ ತಾಪಮಾನ 13–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಶೀತದ ಅಲೆಗಳು ಬೀಸಲಿದ್ದು, ಸುರಕ್ಷತಾ ಕ್ರಮವಾಗಿ ಹವಾಮಾನ

ಆಳಂದದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡುವ ಮೂಲಕ ಮತ ಕಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್