Menu

ಕುಡಿದು ಕ್ಯಾಬ್‌ಗೆ ವಾಹನ ಗುದ್ದಿಸಿದ ಯುವತಿಯರಿಂದ ಚಾಲಕನಿಗೆ ಹಲ್ಲೆ

ಬೆಂಗಳೂರಿನ ಬನ್ನೇರುಘಟ್ಟ ರೋಡ್‌ನ ಹುಳಿಮಾವು-ದೇವರಚಿಕ್ಕನಹಳ್ಳಿ ಮುಖ್ಯರಸ್ತೆಯಲ್ಲಿ ಕಂಠಪೂರ್ತಿ ಕುಡಿದ ಯುವತಿಯರಿಬ್ಬರು ಕ್ಯಾಬ್‌ ಚಾಲಕನ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ. ಆರೋಪಿಗಳಾದ ಯುವತಿಯರನ್ನು ಉತ್ತರ ಭಾರತ ಮೂಲದ ಲೀಸಾ ಮತ್ತು ಮ್ಯಾಥ್ಯೂ ಎಂದು ಗುರುತಿಸಲಾಗಿದೆ. ಇವರು ಸಾರ್ವಜನಿಕರ ಜತೆಯೂ ಅಸಭ್ಯವಾಗಿ ವರ್ತಿಸಿದ್ದಾರೆ. ಕುಡಿದು ಯುವತಿಯರು ದ್ವಿಚಕ್ರ ವಾಹನ ಓಡಿಸುತ್ತಿದ್ದು, ಕಾರು, ಬೈಕ್​ಗಳಿಗೆ ಗುದ್ದಿದೆ. ಪ್ರಶ್ನಿಸಿದವರ ಜತೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ ಪೊಲೀಸರ ಜತೆಗೂ ಜಗಳವಾಡಿದ್ದಾರೆ ಎನ್ನಲಾಗಿದೆ. ವಾಹನ ಚಲಾಯಿಸಿಕೊಂಡು

ಮತ್ತೊಂದು ಮದುವೆಯಾಗುತ್ತಿದ್ದ ಪತಿ: ಕಲ್ಯಾಣಮಂಟಪಕ್ಕೆ ನುಗ್ಗಿ ತಡೆದ ಪತ್ನಿ

ವಿಚ್ಛೇದನ ನೀಡದೆ ಮತ್ತೊಂದು ಮದುವೆ ಮಾಡಿಕೊಳ್ಳಲು ಹೊರಟಿದ್ದ ಪತಿ ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಕಲ್ಯಾಣ ಮಂಟಪಕ್ಕೆ ಪೊಲೀಸರ ಜೊತೆ ನುಗ್ಗಿದ ಪತ್ನಿ  ಮದುವೆ ತಡೆದಿರುವ ಘಟನೆ ಕುಣಿಗಲ್ ತಾಲೂಕಿನ ಯಡೆಯೂರಿನಲ್ಲಿ ನಡೆದಿದೆ. ಪತ್ನಿಗೆ ಗೊತ್ತಾಗದಂತೆ ಪತಿ ಮತ್ತೊಂದು ಮದುವೆಯಾಗಲು ಹೊರಟಿದ್ದ ಎನ್ನಲಾಗಿದೆ.

ಆನೇಕಲ್‌ ಬಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ತಮಿಳುನಾಡು – ಕರ್ನಾಟಕ ಗಡಿ ಭಾಗದ ಆನೇಕಲ್‌ ಸಮೀಪ ಬ್ಯಾಲದ ಕೆರೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮಗನಿಗೆ ಗಂಭೀರ ಗಾಯಗಳಾಗಿವೆ. ಗ್ರಾಮದ ವೆಂಕಟೇಶ್ ಕಾಡಾನೆ ದಾಳಿಗೆ ಬಲಿಯಾದವರಉ. ಬೈಕ್‌ನಲ್ಲಿ ಮಗನೊಂದಿಗೆ ತೆರಳುತ್ತಿದ್ದ ವೆಂಕಟೇಶ್‌ ಅವರ ಮೇಲೆ ಕಾಡಾನೆ

ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಗೆ ತಾತ್ಕಾಲಿಕ ತಡೆ: ಆರ್‌ ಅಶೋಕ

ಸೋಮವಾರದಿಂದ ಜಾರಿಗೆ ಬರಬೇಕಿದ್ದ  ಬೆಂಗಳೂರು ಮೆಟ್ರೋ ಟಿಕೆಟ್‌ ದರ ಏರಿಕೆಯನ್ನು ಸದ್ಯಕ್ಕೆ ತಡೆಹಿಡಿಯಲು ಸಚಿವ ಮನೋಹರ್ ಲಾಲ್ ಖಟ್ಟರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ ದರವನ್ನು ಅಸಮರ್ಥನೀಯವಾಗಿ ಏರಿಕೆ ಮಾಡಲು ಹೊರಟಿರುವ ರಾಜ್ಯ

ಆಂಧ್ರ ಸಿಎಂ ಜೊತೆ ಮಾತಾಡಿ ಸಮುದ್ರ ಸೇರುವ ತುಂಗಭದ್ರಾ ನೀರನ್ನು ರೈತರಿಗೆ ಒದಗಿಸುವ ಪ್ರಯತ್ನ: ಡಿಸಿಎಂ 

ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು ನನಗೆ ಸಮಯಾವಕಾಶ ನೀಡುತ್ತಿಲ್ಲ. ಅವರು ನಮಗೆ

ತೊರೆದ ಪ್ರೇಯಸಿ: ಬೆಂಗಳೂರಿನಲ್ಲಿ ನೊಂದ ಬಾಡಿಬಿಲ್ಡರ್‌ ಸುಸೈಡ್‌

ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಬೇರೆಯವನನ್ನು ಮದುವೆಯಾಗಲು ಒಪ್ಪಿದ್ದರಿಂದ ನೊಂದುಕೊಂಡ ಬಾಡಿಬಿಲ್ಡರ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ. ಡೆತ್‌ ನೋಟ್‌ನಲ್ಲಿ ಪ್ರೇಯಸಿ ಮತ್ತು ಆಕೆಯ ತಾಯಿ ಹೆಸರನ್ನು ಉಲ್ಲೇಖಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮನೆಯಲ್ಲಿ

ವೇಶ್ಯಾವಾಟಿಕೆಗೆ ಅತ್ತೆಯ ಒತ್ತಾಯ ಆರೋಪ: ಬೀದರ್‌ನಲ್ಲಿ ಮಹಿಳೆ ಆತ್ಮಹತ್ಯೆ

ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಸೊಸೆ 11 ತಿಂಗಳ ಮಗುವನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂಜನಾಬಾಯಿ ಶೇಖರ್ ಪಾಟೀಲ್(22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಪತಿ

ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಬರಲ್ಲ, ಕೃಷ್ಣಾ ನದಿ ನೀರಿಗೆ ಪ್ರಯತ್ನವೆಂದ ಕುಮಾರಸ್ವಾಮಿ

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕೋಲಾರ ನಗರದಲ್ಲಿ ಖಾಸಗಿ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ

ಲೋಕಸಭೆಯಲ್ಲಿ ಅಹಿತಕರ ಘಟನೆ ತಡೆಗೆ ಸ್ಪೀಕರ್‌ ಕಾರ್ಯವೈಖರಿ ಇದೇನಾ?

ನೆಗಡಿ ಬಂದಿದೆ ಎಂದು ಮೂಗು ಕತ್ತರಿಸಿಕೊಳ್ಳಲಾಗದು. ಲೋಕಸಭೆಯ ಪೀಠಾಧ್ಯಕ್ಷರು ಯಾವ ಪಕ್ಷಕ್ಕೂ ಸೇರಿದವರಲ್ಲ . ಈ ಕುರ್ಚಿಯಲ್ಲಿ ಕುಳಿತ ವ್ಯಕ್ತಿಗೆ ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ಸಮಾನವೇ. ಲೋಕ ಸದನವನ್ನು ನಿರ್ವಹಿಸುವ ಸಮಯದಲ್ಲಿ ತಮ್ಮ ಪರಿಧಿಯಲ್ಲಿ ಲಭ್ಯವಿರುವ ಅಧಿಕಾರ ಮತ್ತು ವಿವೇಚನೆಗಳನ್ನು 

ಹೈಕಮಾಂಡ್ ಹೇಳುವವರೆಗೂ ಸಿದ್ದರಾಮಯ್ಯ ಸಿಎಂ: ಸಚಿವ ಜಿ. ಪರಮೇಶ್ವರ್

ಮೈಸೂರು: ಐದು ವರ್ಷ ಪೂರ್ಣಾವಧಿ ಸಿಎಂ‌ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆಂಬ ಯತೀಂದ್ರ ಹೇಳಿ ಅವರ ವೈಯುಕ್ತಿಕ ಹೇಳಿಕೆಯಾಗಿದೆ. ನಮ್ಮಲ್ಲಿ ಹೈಕಮಾಂಡ ಹೇಳುವವರೆಗೂ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ