Menu

ಮದುವೆಯಲ್ಲಿ ಡಾನ್ಸ್‌ ಮಾಡುತ್ತಿರುವಾಗಲೇ ಕುಸಿದು ಯುವತಿ ಸಾವು

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ರೆಸಾರ್ಟ್‌ವೊಂದರಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದಾಗ ನೃತ್ಯ ಮಾಡುತ್ತಿದ್ದ ೨೩ ವರ್ಷದ ಯುವತಿ ಹೃದಯ ಸ್ತಂಭನ ಗೊಂಡು ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಯುವತಿಯನ್ನು ಇಂದೋರ್ ನಿವಾಸಿ ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ. ಸೋದರ ಸಂಬಂಧಿ ಮದುವೆಯಲ್ಲಿ ಆಕೆ ಪಾಲ್ಗೊಂಡಿದ್ದು, 200ಕ್ಕೂ ಹೆಚ್ಚು ಮಂದಿ ಉಪಸ್ಥಿತರಿದ್ದರು. ಪರಿಣಿತಾ ವೇದಿಕೆಯಲ್ಲಿ ಬಾಲಿವುಡ್‌ ಗೀತೆಯೊಂದಕ್ಕೆ ನೃತ್ಯ ಮಾಡುತ್ತಿದ್ದಾಗಲೇ ಹೃದಯ ಸ್ತಂಭನಗೊಂಡು ಅಸು ನೀಗಿದ್ದಾರೆ. ಆಕೆ ಕುಸಿದು ಬಿದ್ದ ವೀಡಿಯೊ ಸೋಶಿಯಲ್‌ ಮೀಡಿಯಾದಲ್ಲಿ

ತಿರುಪತಿ ಲಡ್ಡು ಕಲಬೆರಕೆ: ನಾಲ್ವರನ್ನು ಬಂಧಿಸಿದ ಸಿಬಿಐ

ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉತ್ತರಾಖಂಡ್‌ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್, ಪೊಮಿಲ್

ಟಿ. ನರಸೀಪುರದಲ್ಲಿ ಇಂದಿನಿಂದ ಕುಂಭಮೇಳ ಸಂಭ್ರಮ

ದಕ್ಷಿಣ ಭಾರತದ ಕುಂಭಮೇಳಕ್ಕೆ ಟಿ. ನರಸೀಪುರ ಸಜ್ಜುಗೊಂಡಿದ್ದು, ಇಂದಿನಿಂದ ಮೇಳ ಆರಂಭಗೊಳ್ಳುತ್ತಿದೆ. ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನ 13ನೇ ಕುಂಭಮೇಳ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.

ಇಂದಿನಿಂದ ಬೆಂಗಳೂರಿನಲ್ಲಿ 5 ದಿನ ಏರೋ ಇಂಡಿಯಾ ಶೋ

ಬೆಂಗಳೂರಿನ ಯಲಹಂಕದ ವಾಯುಪಡೆ ನೆಲೆಯಲ್ಲಿ ಇಂದಿನಿಂದ (ಸೋಮವಾರ) ಐದು ದಿನಗಳ ಏರೋ ಇಂಡಿಯಾ ಶೋ ನಡೆಯಲಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಚಾಲನೆ ನೀಡಲಿದ್ದಾರೆ. ಹಲವಾರು ಯುದ್ಧವಿಮಾನಗಳು ಸಾಮರ್ಥ್ಯ ಪ್ರದರ್ಶಿಸಲಿವೆ. 90 ದೇಶಗಳು

ಛತ್ತೀಸ್‌ಗಢ ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಹತ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ  ಭದ್ರತಾಪಡೆಗಳು  ಎನ್‌ಕೌಂಟರ್‌ನಲ್ಲಿ  31 ನಕ್ಸಲರನ್ನು ಹೊಡೆದುರುಳಿಸಿವೆ. ಕಾರ್ಯಾ ಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಕೂಡ ಮೃತಪಟ್ಟಿದ್ದಾರೆ.  ಘಟನಾ ಸ್ಥಳದಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಆಧರಿಸಿ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದ

ಪುಣ್ಯಸ್ನಾನ ಮಾಡಿ ಹತ್ತಾರು ಪ್ರಶ್ನೆಗೆ ಉತ್ತರವಿತ್ತ ಡಿಕೆಶಿ

ಕಾಂಗ್ರೆಸ್‌ ಹಿಂದೂ ವಿರೋಧಿ ಎನ್ನುವವರಿಗೆ ಡಿಸಿಎಂ ಮಾರುತ್ತರ ಪ್ರಯಾಗ್‌ರಾಜ್‌ನಲ್ಲಿ  ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸುವ ಮೂಲಕ ನಮ್ಮ ದೇಶದ ಸಾಂಸ್ಕೃತಿಕ ಎಳೆಯನ್ನು ಇನ್ನಷ್ಟು ಬಲಪಡಿಸಿದ್ದಾರೆ.  ಕೀಳು ಮಟ್ಟದ ಪಕ್ಷ ರಾಜಕೀಯ ಮಾಡುವ ಕೆಲವರಿಗೆ ಸೂಕ್ತ ಉತ್ತರ

ರಾಜ್ಯಪಾಲರು ಸುಗ್ರೀವಾಜ್ಞೆ ಪ್ರಸ್ತಾಪ ತಿರಸ್ಕರಿಸಿಲ್ಲ: ಸಚಿವ ಕೆ.ಎನ್.ರಾಜಣ್ಣ

ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ರಾಜ್ಯ ಸರಕಾರ ರೂಪಿಸಿರುವ ಮಸೂದೆಯ ಸುಗ್ರೀವಾಜ್ಞೆ ಪ್ರಸ್ತಾಪವನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ. ಒಂದಷ್ಟು ಮರು ಪರಿಶೀಲನೆ ಮಾಡುವಂತೆ ತಿಳಿಸಿದ್ದಾರೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಈ ಮಾಹಿತಿ ನೀಡಿದ ಅವರು, ಮೈಕ್ರೋ

ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆಶಿ

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆರೋಗ್ಯ ಕ್ಷೇಮ ವಿಚಾರಿಸಿದ್ದಾರೆ.  ಈ ವೇಳೆ  ಗೀತಾ ಶಿವರಾಜ್ ಕುಮಾರ್  ಜೊತೆಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ತೆರಳಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ನಟ ಶಿವರಾಜ್

ಕುಂಭಮೇಳಕ್ಕೆ ಪ್ರಯಾಗ್‌ ರಾಜ್‌ ತಲುಪಿದ ಡಿಕೆಶಿ ದಂಪತಿ

ಕುಂಭಮೇಳಕ್ಕೆ ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರನ್ನು ಉತ್ತರ ಪ್ರದೇಶ ಕೈಗಾರಿಕೆ ಸಚಿವ ನಂದಗೋಪಾಲ ಗುಪ್ತಾ ಅವರು ಪ್ರಯಾಗ್ ರಾಜ್ ವಿಮಾನ ನಿಲ್ದಾಣದಲ್ಲಿ  ಬರಮಾಡಿಕೊಂಡರು. ಉತ್ತರ ಪ್ರದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ವಿಕಲಚೇತನರ

ಸಿಎಂಗೆ ಧನ್ಯವಾದ ಸಲ್ಲಿಸಿದ KSPCB ಅಧ್ಯಕ್ಷ ,ಶಾಸಕ ನರೇಂದ್ರಸ್ವಾಮಿ

ಕರ್ನಾಟಕ ರಾಜ್ಯ  ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಶಾಸಕ ಮಳವಳ್ಳಿ ನರೇಂದ್ರ ಸ್ವಾಮಿ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ  ನರೇಂದ್ರ ಸ್ವಾಮಿ