Wednesday, January 14, 2026
Menu

ರಣರಂಗವಾದ ಕೋಲ್ಕತಾ ಮೈದಾನ: ಮೆಸ್ಸಿ ಅಭಿಮಾನಿಗಳಿಂದ ದಾಂಧಲೆ!

ಅರ್ಜೆಂಟೀನಾದ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ನೋಡುವ ಅವಕಾಶ ಸಿಗದೇ ರೊಚ್ಚಿಗೆದ್ದ ಅಭಿಮಾನಿಗಳು ಕೋಲ್ಕತಾದಲ್ಲಿ ದಾಂಧಲೆ ನಡೆಸಿದ್ದಾರೆ. ಶನಿವಾರ ಮುಂಜಾನೆ ಕೋಲ್ಕತ್ತಾಗೆ ಆಗಮಿಸಿದ ಮೆಸ್ಸಿ ‘ಗೋಟ್ ಟೂರ್ ಆಫ್ ಇಂಡಿಯಾ’ ಆರಂಭಿಸಿದರು. ಮೆಸ್ಸಿ ಜೊತೆಗೆ ಅವರ ಇಂಟರ್ ಮಿಯಾಮಿ ತಂಡದ ಆಟಗಾರರಾದ ರೊಡ್ರಿಗೋ ಡಿ ಪಾಲ್ ಮತ್ತು ಲೂಯಿಸ್ ಸುವಾರೆಜ್ ಸಹ ಭಾರತಕ್ಕೆ ಆಗಮಿಸಿದ್ದಾರೆ. 14 ವರ್ಷಗಳ ನಂತರ ಭಾರತಕ್ಕೆ ಮರಳಿದ ಮೆಸ್ಸಿಯನ್ನು ನೋಡಲು ಸಾವಿರಾರು ಅಭಿಮಾನಿಗಳು ವಿಮಾನ

ಡಿಸೆಂಬರ್ 17-18: ಕೆಪಿಎಸ್‍ಸಿಯಿಂದ ಗ್ರೂಪ್-ಬಿ ಹುದ್ದೆಗಳ ಮೂಲ ದಾಖಲೆ ಪರಿಶೀಲನೆ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಧಿಸೂಚಿಸಲಾಗಿದ್ದ ವಿವಿಧ ಇಲಾಖೆಗಳ ಗ್ರೂಪ್-ಬಿ ಹುದ್ದೆಗಳಿಗೆ ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಲು ಉದ್ದೇಶಿಸಲಾಗಿದ್ದ ದಾಖಲೆಗಳ ಪರಿಶೀಲನೆಯನ್ನು 2025 ನೇ ಡಿಸೆಂಬರ್ 17 ರಿಂದ 23 ರವರೆಗೆ ಬೆಂಗಳೂರಿನ ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗ ಸೌಧ ಕೇಂದ್ರ

ಕೋಲ್ಕತಾದಲ್ಲಿ ತನ್ನದೇ 70 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ ಲಿಯೊನೆಲ್ ಮೆಸ್ಸಿ!

14 ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡಿದ ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ 70 ಅಡಿ ಎತ್ತರದ ತನ್ನದೇ ಪ್ರತಿಮೆಯನ್ನು ವರ್ಚುಯಲ್​ ಆಗಿ ಅನಾವರಣಗೊಳಿಸಿದ್ದಾರೆ. ಶನಿವಾರ ಮುಂಜಾನೆ ಕೋಲ್ಕತ್ತಾಗೆ ಆಗಮಿಸುವ ಮೂಲಕ ಮೆಸ್ಸಿ ‘ಗೋಟ್ ಟೂರ್ ಆಫ್ ಇಂಡಿಯಾ’ ಆರಂಭಿಸಿದರು.

ದೇಶೀಯ ಕ್ರಿಕೆಟ್ ನಲ್ಲಿ ಮ್ಯಾಚ್ ಫಿಕ್ಸಿಂಗ್: ನಾಲ್ವರು ಕ್ರಿಕೆಟಿಗರ ಅಮಾನತು

ಭಾರತದ ದೇಶೀಯ ಕ್ರಿಕೆಟ್‌ನ ಅತಿದೊಡ್ಡ ಟಿ20 ಟೂರ್ನಮೆಂಟ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2025 ಪಂದ್ಯಾವಳಿಯಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ನಾಲ್ವರು ಆಟಗಾರರನ್ನು ಅಮಾನತುಗೊಳಿಸಿದೆ. ಲಕ್ನೋದಲ್ಲಿ ನಡೆದ ಪಂದ್ಯಗಳ ಸಮಯದಲ್ಲಿ ನಾಲ್ವರು ಆಟಗಾರರು ಇತರ ತಂಡದ ಸದಸ್ಯರ

ಭದ್ರಾವತಿಯಲ್ಲಿ ಪ್ರೇಮಿಗಳಿಗೆ ಸಹಕರಿಸಿದ್ದಕ್ಕಾಗಿ ಇಬ್ಬರ ಹತ್ಯೆ

ಪ್ರೇಮಿಗಳಿಬ್ಬರು ಮನೆ ಬಿಟ್ಟು ಓಡಿ ಹೋಗಲು ಸಹಕಾರಿಸಿದ್ದಾರೆ ಎಂದು ತಪ್ಪು ಕಲ್ಪನೆಯಿಂದ ಇಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ತಡರಾತ್ರಿ ನಡೆದಿದೆ. ಭದ್ರಾವತಿಯ ಜೈ ಭೀಮ್ ನಗರದ ನಿವಾಸಿಗಳಾದ ಕಿರಣ್ (25) ಹಾಗೂ ಪೌರ ಕಾರ್ಮಿಕ

ದೇಶದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜನಗಣತಿ: 11,718 ಕೋಟಿಗೆ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ದೇಶಾದ್ಯಂತ ಇದೇ ಮೊದಲ ಬಾರಿಗೆ ನಡೆಯಲಿರುವ 2027ರ ಜನಗಣತಿಗೆ 11,718 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲು

ಸೂರ್ಯವಂಶಿಯ 171 ರನ್ `ವೈಭವ’: ಭಾರತ ಯುವಪಡೆ 234 ರನ್ ಜಯಭೇರಿ

14 ವರ್ಷದ ಯುವ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ಸಿಡಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೆಟ್ಸ್ ವಿರುದ್ಧ 234 ರನ್ ಗಳ ಬೃಹತ್ ಗೆಲುವು ದಾಖಲಿಸಿದೆ. ದುಬೈನಲ್ಲಿ ಶುಕ್ರವಾರ

ಪಾಲಿಕೆಗಳಿಗೆ ತಲಾ 200 ಕೋಟಿ ರೂ. ನೀಡಲು ಸರ್ಕಾರದಿಂದ ಐತಿಹಾಸಿಕ ನಿರ್ಧಾರ: ಸಚಿವ ಬೈರತಿ ಸುರೇಶ್

ವಿಧಾನಸಭೆ: ರಾಜ್ಯದಲ್ಲಿರುವ 12 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂಪಾಯಿಯಂತೆ ಒಟ್ಟು 2400 ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್

ಮೈಸೂರು ಮೃಗಾಲಯದಲ್ಲಿ 25ನೇ ಹುಟ್ಟುಹಬ್ಬ ಆಚರಿಸಿಕೊಂಡ `ಯುವರಾಜ’!

ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲೇ ಹುಟ್ಟಿ ಬೆಳೆದ ಯುವರಾಜ ಹೆಸರಿನ ಜಿರಾಫೆಯ 25ನೇ ವರ್ಷದ ಹುಟ್ಟುಹಬ್ಬವನ್ನು ಗುರುವಾರ ಅಧಿಕಾರಿಗಳು ಮತ್ತು ಸಿಬ್ಬಂದಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಯುವರಾಜನಿಗೆ ಇಷ್ಟವಾದ ಹುಲ್ಲು, ವಿವಿಧ ಕಾಳು ಹಾಗೂ ಹಣ್ಣುಗಳಿಂದ ಸಿಬ್ಬಂದಿ ವಿಶೇಷ ಕೇಕ್ ತಯಾರಿಸಿದ್ದರು. ಮೃಗಾಲಯದ

ಗಿಳಿ ರಕ್ಷಿಸಲು ಹೋದ ಯುವ ಕರೆಂಟ್ ಹೊಡೆದು ಸಾವು!

ಬೆಂಗಳೂರು: ಸಾಕು ಗಿಳಿಯನ್ನು ರಕ್ಷಿಸಲು ಹೋದ ಯುವಕ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಗಿರಿನಗರ ಪೊಲೀಸ್​ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಅರುಣ್ ಕುಮಾರ್ (32) ಮೃತಪಟ್ಟಿದ್ದಾರೆ. ಲಿಖಿತಾ ಎಂಬವರು ವಿದೇಶಿ ಗಿಳಿಯೊಂದನ್ನು ತಮ್ಮ ಫ್ಲ್ಯಾಟ್‌ನಲ್ಲಿ ಸಾಕಿದ್ದರು. ಇಂದು